Mangalore

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ನೀಡಲಾಗಿದೆ. ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ […]

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ Read More »

ಕರಾವಳಿ

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..! Read More »

ಕರಾವಳಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2023-24ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ರೈತ ಹಾಗೂ ರೈತ ಮಹಿಳೆಯರಿಂದ ಆ.18ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರದಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ Read More »

ಕರಾವಳಿ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top