Mangalore

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಕೆಲಸಕ್ಕೆಂದು ಹೈದರಾಬಾದ್‍ಗೆ ಹೋದ ನಗರದ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕೃಷ್ಣರಾಜ್  (45) ಕಾಣೆಯಾದ ವ್ಯಕ್ತಿ. ಇವರು 7 ತಿಂಗಳ ಹಿಂದೆ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ಹೈದರಾಬಾದ್‍ಗೆ ಹೋಗಿದ್ದರು. ನಂತರ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ದೂರು ನೀಡಿದ್ದಾರೆ. ಇವರು ಬಿಳಿ ಮೈಬಣ್ಣ, ಸಪೂರ ಶರೀರ, ಎತ್ತರ 5.10 ಅಡಿ ಹೊಂದಿದ್ದು,ಕನ್ನಡ, ಹಿಂದಿ, ತುಳು, ಬ್ಯಾರಿ ಭಾಷೆ ಮಾತನಾಡಬಲ್ಲರು. ಧರಿಸಿದ್ದ […]

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ಕೇಂದ್ರದ ಆಯುಷ್ ಮತ್ತು ರಕ್ಷಣಾ ಸಚಿವರಾದ ಶ್ರೀಪಾದ್ ಯಸ್ಕೋ ನಾಯಕ್‍ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆ ಪ್ರಯುಕ್ತ ಆಗಸ್ಟ್ 29 ರಂದು ಸಂಜೆ 4 ಗಂಟೆಗೆ ಜಿಲ್ಲಾ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಯುಷ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ವಹಿಸಲಿದ್ದಾರೆ.

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಎನ್‍ಎಸ್‍ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ದಯಾನಂದ ನಾಯ್ಕ್, ವಿದ್ಯಾರ್ಥಿಗಳು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಸಾಗಬೇಕು. ಸೇವೆಯಲ್ಲೇ ಸಾರ್ಥಕತೆ ಬೆಳೆಸಿಕೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಎಂದರು. ಮುಖ್ಯ ಅತಿಥಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್ Read More »

ಕರಾವಳಿ

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27. ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, 2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಇಂದು ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಮುಂದೂಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ Read More »

ಕರಾವಳಿ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.26.ರವಿವಾರದ ಪ್ರೊ ಕಬಡ್ಡಿ ಕೂಟದ ಹೊಸದಿಲ್ಲಿ ಚರಣದಲ್ಲಿ ಜೈಪುರ ತಂಡ ಹಾಗೂ ಬೆಂಗಳೂರು ಬುಲ್ಸ್‌ ತಂಡ ಮುಖಾಮುಖೀಯಲ್ಲಿ ಬೆಂಗಳೂರು ಬುಲ್ಸ್‌ ತಂಡವು ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 41-30 ಅಂಕಗಳಿಂದ ಜೈಪುರ ತಂಡವನ್ನು ಸೋಲಿಸಿದೆ. ಇದು ತವರಿನಲ್ಲಿ ಡೆಲ್ಲಿಗೆ ಒಲಿದ ಸತತ 2ನೇ ಗೆಲುವು. ಈ ಜಯದೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆಯಿತು (39). ಜೈಪುರ್‌ 2ನೇ ಸ್ಥಾನಕ್ಕೆ ಇಳಿಯಿತು (37). ಬೆಂಗಾಲ್‌ 3ನೇ (33), ಬೆಂಗಳೂರು 4ನೇ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಕೂಟಿ ಮತ್ತು ಬೈಕ್ ಢಿಕ್ಕಿ ➤ ಸ್ಕೂಟಿ ಸವಾರ ಸಾವು

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.26.ಆ.24 ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕನರ್ತಮಜಲು‌ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟಿ ಸವಾರ ತೀವ್ರಗಾಯಗೊಂಡಿದ್ದು ಅವರನ್ನು ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.‌ಸ್ಕೂಟಿ ಇವರು ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42)ವರ್ಷ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಸ್ಕೂಟಿ ಮತ್ತು ಬೈಕ್ ಢಿಕ್ಕಿ ➤ ಸ್ಕೂಟಿ ಸವಾರ ಸಾವು Read More »

ಕರಾವಳಿ

ಸುಳ್ಯದ ಹಿರಿಯ ಪತ್ರಕರ್ತ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.26.ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ರವಿವಾರ ದಂದು ನಿಧನರಾದರು.ಮೃತ ಚಂದ್ರೇಶ್ ಗೋರಡ್ಕರವರಿಗೆ 48 ವರ್ಷ. ಅವರು ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾಗಿದ್ದರು. ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.ಅದರೆ ಮತ್ತೆ ಲಿವರ್ ಹಾಗೂ ಕಿಡ್ನಿ ವೈಫಲ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರದ ಹಿಂದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪತ್ನಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ.  

ಸುಳ್ಯದ ಹಿರಿಯ ಪತ್ರಕರ್ತ ವಿಧಿವಶ Read More »

ಕರಾವಳಿ

ನೂಜಿಬಾಳ್ತಿಲ ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಾಲನೆ

(ನ್ಯೂಸ್ ಕಡಬ) newskadaba.comಕಲ್ಲುಗುಡ್ಡೆ, ಆಗಸ್ಟ್.26.ನೂಜಿಬಾಳ್ತಿಲ ರೆಂಜಿಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 35ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ರವಿವಾರ ನೂಜಿಬಾಳ್ತಿಲ ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಊರಿನ ಹಿರಿಯರಾದ ವೀರಮ್ಮ ಬದನಡ್ಕ ಉದ್ಘಾಟಿಸಿದರು. ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಜಯಂತ ಬರೆಮೇಲು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕುರಿಯಾಳ ಕೊಪ್ಪ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಹರಿಶ್ಚಂದ್ರ ಕನ್ವರೆ, ನೂಜಿಬಾಳ್ತಿಲ ಶಾಲಾ ಮುಖ್ಯ ಶಿಕ್ಷಕ ಶ್ರೇಯಾನ್ಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ,

ನೂಜಿಬಾಳ್ತಿಲ ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಾಲನೆ Read More »

ಕರಾವಳಿ

ನೂಜಿಬಾಳ್ತಿಲ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ ➤ ಉತ್ತಮ ಮಾರ್ಗದರ್ಶನದಿಂದ ಸಧೃಡ ಸಮಾಜ – ರಾಧಕೃಷ್ಣ ಬೋರ್ಕರ್

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.26. ನೂಜಿಬಾಳ್ತಿಲ ರೆಂಜಿಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 35ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಸಮಾರೋಪ ಸಮಾರಂಭ ರವಿವಾರ ನೂಜಿಬಾಳ್ತಿಲ ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಪುತ್ತೂರು ತಾ.ಪಂ. ಅಧ್ಯಕ್ಷ ರಾಧಕೃಷ್ಣ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನತೆಯಿಂದ ಮಾಡಲಾಗದ ಕೆಲಸವಿಲ್ಲ, ಯುವ ಜನರು ಸಂಘಟನೆ ಜೊತೆಗೆ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡು ಸಮಾಜದ, ಬಡಜನರ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕಾಗಿದೆ. ಮಕ್ಕಳಾಗಿರುವಾಗಲೇ ಅವರಿಗೆ ಸರಿಯಾದ ಮಾರ್ಗದರ್ಶನ ದೊರೆತಲ್ಲಿ ಯಾವುದೇ

ನೂಜಿಬಾಳ್ತಿಲ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ ➤ ಉತ್ತಮ ಮಾರ್ಗದರ್ಶನದಿಂದ ಸಧೃಡ ಸಮಾಜ – ರಾಧಕೃಷ್ಣ ಬೋರ್ಕರ್ Read More »

ಕರಾವಳಿ

ನೂಜಿಬಾಳ್ತಿಲ ಸ. ಉ.ಹಿ.ಪ್ರಾ. ಶಾಲೆಕಡಬ ವಲಯ ಮಟ್ಟದ ಖೋ ಖೋ ಪಂದ್ಯಾಟ ➤’ಶಿಸ್ತು, ಸಾಮರಸ್ಯ ಕ್ರೀಡೆಯಿಂದ ಸಾಧ್ಯ’ ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.26.ಕಡಬ ವಲಯ ಮಟ್ಟದ ಖೋ ಖೋ ಪಂದ್ಯಾವಳಿ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆಯಿತು. ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟಿ ಬಾಲಕೃಷ್ಣ ಬಳ್ಳೇರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಕ್ರೀಡೆ ಜೀವನದ ಒಂದು ಭಾಗವಾಗಿದ್ದು, ಆರೋಗ್ಯಕರ ಶಿಸ್ತು, ಸಾಮರಸ್ಯ ಬೆಳೆಯಲು ಕ್ರೀಡೆ ಸಹಕಾರಿ. ಕ್ರೀಡೆಯಲ್ಲಿ ಗೆದ್ದರೂ ಅಥವಾ ಸೋತರೂ, ಭಾಗವಹಿಸುವುದರಿಂದ ನಮ್ಮ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ ಎಂದರು.ಬಿಳಿನೆಲೆ ಶಾಲಾ ದೈಹಿಕ

ನೂಜಿಬಾಳ್ತಿಲ ಸ. ಉ.ಹಿ.ಪ್ರಾ. ಶಾಲೆಕಡಬ ವಲಯ ಮಟ್ಟದ ಖೋ ಖೋ ಪಂದ್ಯಾಟ ➤’ಶಿಸ್ತು, ಸಾಮರಸ್ಯ ಕ್ರೀಡೆಯಿಂದ ಸಾಧ್ಯ’ ಬಾಲಕೃಷ್ಣ ಬಳ್ಳೇರಿ Read More »

ಕರಾವಳಿ
Scroll to Top