Mangalore

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ

(ನ್ಯೂಸ್ ಕಡಬ) newskadaba.com ಅಡ್ಯನಡ್ಕ, ಆಗಸ್ಟ್.17.  ಈ ಶಾಲೆಯ ರಕ್ಷಕ ಶಿಕ್ಷಕ ಸಭೆಯು ಆ. 16ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.ಹಿರಿಯ […]

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದ ಸಭಾಂಗಣ ಮಂಗಳೂರು ಇಲ್ಲಿ ಸನ್ಮಾನ ಸಮಾರಂಭವು ಆಗಸ್ಟ್ 25ರಂದು ಬೆಳಿಗ್ಗೆ 10.30 ಗಂಟೆಗೆ  ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎನ್. ಸೀತಾರಾಮ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಅಸೋಸಿಯೆಟ್ ಪ್ರೋಫೆಸರ್ ಡಾ. ದಯಾನಂದ ನಾಯ್ಕ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ರಾವ್ ಹಾಗೂ 75 ವರ್ಷ ಮೀರಿದ ಹಿರಿಯ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು ಇಲ್ಲಿ ಆಗಸ್ಟ್ 20 ರಂದು ಸಂಜೆ 6 ಗಂಟೆಗೆ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಹಾಗೂ ಕೊಂಕಣಿ ಸ್ನಾತಕೋತ್ತರ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಬಾ ಕ್ಷೇತ್ರದ ಶಾಸಕ ವೇದವಾಸ್ಯ ಕಾಮತ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ| ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ ಎಂದು

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಮಂಗಳೂರು ಲಾಲ್‍ಬಾಗ್ ಹ್ಯಾಟ್‍ಹಿಲ್‍ನಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ ಮಹಮದ್ ಇಕ್ಬಾಲ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ Read More »

ಕರಾವಳಿ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು. ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯದ ಮಾನ್ಯ ತಹಶೀಲ್ದಾರರಾದ ಕುಞ ಅಹ್ಮದ್ ಅವರು ಕರ ಪತ್ರ ಬಿಡುಗಡೆ ಮಾಡುವ ಮುಖಾಂತರ ಚಾಲನೆ ನೀಡಿದರು. ಅಭಿಯಾನದ ಮೊದಲ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಬೇಟಿ ನೀಡಿ ಮನೆಮನೆಗಳಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು. ನಂತರ ಸರಕಾರಿ ಕಿರಿಯ ಪಾಥಮಿಕ ಶಾಲೆ ಕೊಡಿಯಾಲಬೈಲು ಇಲ್ಲಿಗೆ ಬೇಟಿ ನೀಡಿ ಡೆಂಗೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಿ ಮಾಹಿತಿ ಕರಪತ್ರ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ Read More »

ಕರಾವಳಿ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಸಿ ಮಾತನಾಡಿದ ‘ಅಕ್ಷರ ಸಂತ’ ಹಾಜಬ್ಬ ಮಾಧ್ಯಮಗಳ ಪ್ರಚಾರ ಮತ್ತು ದಾನಿಗಳ ಸಹಕಾರದಿಂದ ನನ್ನಂತ ಬಡವನೂ ಶಾಲೆ ಕಟ್ಟಲು ಸಾಧ್ಯವಾಯಿತು ಎಂದು ಹರೇಕಳ ಹಾಜಬ್ಬ ಹೇಳಿದರು, ಈಗ ಅನೇಕರು ಗುರುತಿಸಿ ಧನಸಹಾಯ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ನನಗೆ ಒದಗಿ ಬಂದ ಅವಕಾಶ ನಿಮಗೂ ಬರಲಿ ಎಂದು ವಿದ್ಯಾರ್ಥಿಗಳನ್ನು ಹಾರೈಸಿದರು ಮತ್ತು ಸ್ವತಂತ್ರ ಭಾರತ ಸಾಮಾನ್ಯನಿಗೂ ಸಾಧನೆ ಮಾಡುವ ಅವಕಾಶ ನೀಡಿದೆ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು Read More »

ಕರಾವಳಿ

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆಗಸ್ಟ್.17.ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯು ಆಗಸ್ಟ್ 29ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29 Read More »

ಕರಾವಳಿ

ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ➤ ರುಡ್ಸೆಟ್ ಸಂಸ್ಥೆ : ಉಜಿರೆ

(ನ್ಯೂಸ್ ಕಡಬ) newskadaba.com  ಉಜಿರೆ, ಆಗಸ್ಟ್.17. ಮಹಿಳೆಯರಿಗೆ ಆಗಸ್ಟ್ 22 ರಿಂದ “ಉಚಿತ ಬ್ಯೂಟಿಪಾರ್ಲರ್” ತರಬೇತಿ ಪ್ರಾರಂಭವಾಗಲಿದೆ. ಆಗಸ್ಟ್ 19ರಂದು ಬೆಳಿಗ್ಗೆ 11.30 ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಆಸಕ್ತ ಮಹಿಳೆಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404ಗೆ ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇವರ ಪ್ರಕಟಣೆ ತಿಳಿಸಿದೆ.

ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ➤ ರುಡ್ಸೆಟ್ ಸಂಸ್ಥೆ : ಉಜಿರೆ Read More »

ಕರಾವಳಿ

ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ➤ ಲಾರ್ವಾ ಡ್ರೈವ್ ಡೇ : “ಲಾರ್ವಾ ಹಂಟ್”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇವರ ವತಿಯಿಂದ “ಲಾರ್ವಾ ಹಂಟ್” ಕಾರ್ಯಕ್ರಮ ಆಗಸ್ಟ್ 18 ರಂದು ಬೆಳಿಗ್ಗೆ 8.30 ಗಂಟೆಗೆ ಕದ್ರಿ ದೇವಾಸ್ಥಾನದ ಬಳಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಬಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ➤ ಲಾರ್ವಾ ಡ್ರೈವ್ ಡೇ : “ಲಾರ್ವಾ ಹಂಟ್” Read More »

ಕರಾವಳಿ
Scroll to Top