Mangalore

ದ.ಕ ಜಿಲ್ಲಾ ನ್ಯಾಯಾಂಗ ಘಟಕ ➤ಸಂದರ್ಶನ ದಿನ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ದ.ಕ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಆಗಸ್ಟ್ 22ರಿಂದ 24ರವರೆಗೆ ಸೇವಕ ಹುದ್ದೆಗೆ ಸಂದರ್ಶನವನ್ನು ನಿಗದಿಪಡಿಸಲಾಗಿತ್ತು, ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದ ಪ್ರಕೃತಿ ವಿಕೋಪದಿಂದಾಗಿ ಸಂದರ್ಶನವನ್ನು ಮುಂದೂಡಲಾಗಿದೆ. ಸದರಿ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಸಪ್ಟೆಂಬರ್ 19 ರಿಂದ 21ರವರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ www.ecourts.gov.in/dakshinakannada/online-recruitment ವೆಬ್‍ಸೈಟ್ ಅನ್ನು ಸಂಪರ್ಕಿಸಬೇಕೆಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ದ.ಕ  ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲಾ ನ್ಯಾಯಾಂಗ ಘಟಕ ➤ಸಂದರ್ಶನ ದಿನ ಮುಂದೂಡಿಕೆ Read More »

ಕರಾವಳಿ

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.16.ಮುಂದಿನ ಕೆಲವು ದಿನಗಳಲ್ಲಿ ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು. ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪ್ರತಿದಿನ ಪುನರ್ ವಿಮರ್ಶೆ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಯನ್ನು ನಂಬಬೇಕು ಎಂದು ಕೇಂದ್ರ ಸುಪ್ರೀಂಗೆ ನೀಡಿದ ಉತ್ತರದಲ್ಲಿ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕಾಶ್ಮೀರ ಟೈಮ್ಸ್ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್ ಸುಪ್ರೀಂಕೋರ್ಟ್ ಗೆ

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್ Read More »

ರಾಷ್ಟ್ರೀಯ ನ್ಯೂಸ್

ಮಾರ್ ಇವಾನಿಯೋಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.16.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಗಳ ಪದವಿ ಮತ್ತು ಬಿ.ಎಡ್. ವಿಭಾಗಗಳ ವಿದ್ಯಾರ್ಥಿ ಸಂಘಗಳು ಹಾಗೂ ಭಾಷಾ ಸಂಘದ ಉದ್ಘಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾರ್ ಇವಾನಿಯೋಸ್ ಆಂಗ್ಲ ಮಾದ್ಯಮ ಶಾಲೆ ಕುಂತೂರು, ಇಲ್ಲಿನ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಸ್ಮಿನ್ ತೆರೆಸ್ ಡಿ.ಎಂ. ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿ ಜೀವನದಲ್ಲಿ ಕಲಿಕಾ ಪ್ರಕ್ರಿಯೆಯ ಜೊತೆಯಲ್ಲಿಯೇ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು

ಮಾರ್ ಇವಾನಿಯೋಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ಶಾಪ್ ನಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆಗಸ್ಟ್.16.ಉಪ್ಪಿನಂಗಡಿ ಶಾಲಾ ರಸ್ತೆಯಲ್ಲಿರುವ ಆರ್‌. ಕೆ ಜ್ಯುವೆಲ್ಲರಿ ಶಾಪ್ ಗೆ  ತಡರಾತ್ರಿ ಕಳ್ಳರು ನುಗ್ಗಿದ್ದು ಜ್ಯುವೆಲ್ಲರಿಯಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದೋಚಲಾಗಿದೆ. ಕಳ್ಳರು ಗ್ಯಾಸ್‌ ಕಟ್ಟರ್‌ ಬಳಸಿ, ಅಂಗಡಿಯ ಶಟರ್‌ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಆದರೆ ಒಳಗಿದ್ದ ಲಾಕರ್ ರೂಮ್‌ ದೋಚಿಲ್ಲ.ಈ ಜ್ಯುವೆಲ್ಲರಿಗೆ ಒಬ್ಬ ಕಾವಲುಗಾರನಿದ್ದು, ಉಪ್ಪಿನಂಗಡಿ ಪೇಟೆಗೂ ಆತನೆ ಕಾವಲುಗಾರನಾಗಿದ್ದಾನೆ. ಆತ ರಾತ್ರಿ 1 ರಿಂದ 3 ಗಂಟೆಯವರೆಗೆ ಪೇಟೆಯ ರೌಂಡ್ಸ್‌ ಗೆ ಹೋಗುತ್ತಾನೆ. ಆ

ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ಶಾಪ್ ನಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳವು Read More »

ಕರಾವಳಿ

ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಬಾಬುಮುಗೇರ ಧ್ವಜಾರೋಹಣ ನೆರವೇರಿಸಿದರು.   ತಾ.ಪಂ ಸದಸ್ಯ ಫಝಲ್ ಕೋಡಿಂಬಾಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು, ಗ್ರಾ.ಪಂ ಉಪಾಧ್ಯಕ್ಷೆ ಜ್ಯೋತಿ.ಡಿ ಕೋಲ್ಪೆ, ಸದಸ್ಯರಾದ ನೀಲಾವತಿಶಿವರಾಂ,ಸರೋಜಿನಿ ಆಚಾರ್ಯ, ಜಯಂತಿಗಣಪಯ್ಯ, ಕೆ.ಎಂ ಹನೀಫ್, ಆದಂ ಕುಂಡೋಳಿ, ಹರ್ಷ ಕೋಡಿ, ಸುಶೀಲ, ರೇವತಿ, ಯಶೋಧ, ಸಂಧ್ಯಾಮೋಹನ್, ಉಪಸ್ಥಿತರಿದ್ದರು. ಗ್ರಾ.ಪಂ ಅಬಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು. ಗ್ರಾ.ಪಂ ಸಿಬ್ಬಂದಿ ಹರೀಶ್

ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕೊಂಬಾರು ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಕೊಂಬಾರು ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಅಜೀತ್ ಎಸ್ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಉಪಾಧ್ಯಕ್ಷೆ ಜಯಶ್ರೀರಾಮಚಂದ್ರ, ಸದಸ್ಯರಾದ ಮಧುಸೂದನ್ , ದೇವಕಿ , ಲಲಿತ, ಪುರುಷೋತ್ತಮ, ರಮೇಶ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಅಂಗನವಾಡಿ ಪುಟಾಣಿ ಮಕ್ಕಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಕೊಂಬಾರು ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಬೆಥನಿ ಕಾಲೇಜಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ನಿವೃತ್ತ ಸೇನಾನಿ ಐಸಕ್ ಎಮ್.ಜೆಯವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ನಿರ್ದೇಶಕರಾದ ರೆ|ಫಾ|ಸಕರಿಯಾಸ್ ನಂದಿಯಾಟ್ ಶುಭಹಾರೈಸಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಥನಿ ವಿದ್ಯಾಸಂಸ್ಥೆಯಿಂದ ಗೋಳಿಯಡ್ಕ ಜಂಕ್ಷನ್‍ವರೆಗೆ ಮೆರವಣಿಗೆ ನಡೆದು ಬಳಿಕ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯರಾದ ಜಾರ್ಜ್ ಟಿ.ಎಸ್ ಸ್ವಾಗತಿಸಿ, ಪ್ರೌಢವಿಭಾಗದ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ವಂದಿಸಿದರು. ಉಪನ್ಯಾಸಕರು, ಶಿಕ್ಷಕರು-ಶಿಕ್ಷಕೇತರರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ Read More »

ಕರಾವಳಿ

ಆತೂರು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಉಪ್ಪಿನಂಗಡಿ ವಲಯದ ಫ್ರೀಡಂ ಸ್ಕ್ವಾರ್ ವತಿಯಿಂದ ➤73ನೇ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಆತೂರು, ಆಗಸ್ಟ್.15.ಬದ್ರಿಯ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಬದ್ರಿಯಾ ಮಸೀದಿಯ ಜಮಾಅತ್ ಅಧ್ಯಕ್ಷರಾದ ಜ| ಅಬ್ದುಲ್ ರಝಾಕ್ ಬಿ. ಕೆ ಇವರ ಧ್ವಜಾರೋಹಣ ಮಾಡಿದರು. ಆತೂರು ತದ್ಬೀರುಲ್ ಇಸ್ಲಾಂ ಮದರಸದ ಅಬ್ದುಲ್ ಸಮದ್ ಅನ್ಸಾರಿ ಸ್ವಾಗತಸಿದರು. ಕಾರ್ಯಕ್ರಮದಲ್ಲಿ ಆತೂರು ಬದ್ರಿಯಾ ಮಸೀದಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಸಿರಾಜ್, ಉಪಾಧ್ಯಕ್ಷರು ಅಜೀಜ್, ಸದಸ್ಯರು ಕಾಸಿಮ್, ಗ್ರಾಮ ಫಂಚಾಯತ್ ಸದಸ್ಯರು ಕೆ ಎ ಸುಲೈಮಾನ್, ಎಸ್.ಕೆ.ಎಸ್.ಎಸ್.ಎಫ್ ಕ್ಲಸ್ಟರ್ ಅಧ್ಯಕ್ಷರಾದ ಸಿದ್ದೀಕ್ ನೀರಾಜೆ, ತದ್ಬೀರುಲ್ ಇಸ್ಲಾಂ ಮದರಸದ

ಆತೂರು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಉಪ್ಪಿನಂಗಡಿ ವಲಯದ ಫ್ರೀಡಂ ಸ್ಕ್ವಾರ್ ವತಿಯಿಂದ ➤73ನೇ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ಏಣಿತ್ತಡ್ಕ : ಅಂಗನವಾಡಿ ಕೇಂದ್ರ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಕಡಬ ತಾಲೂಕು ಕೊೈಲ ಗ್ರಾಮದ ಏಣಿತ್ತಡ್ಕ (1) ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅದ್ಯಕ್ಷೆ ತೃಪ್ತಿ ಕಡೆಂಬ್ಯಾಲು ದ್ವಜರೋಹಣಗೈದರು. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಶುಭಹಾರೈಸಿದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಬಳೂರು ಒಕ್ಕೂಟ ಗಣೇಶ್ ಗೌಡ ಎರ್ಮಡ್ಕ, ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷ ಗುರುಪ್ರಸಾದ್ ಸಬಳೂರು ಮೊದಲಾದವರು ಇದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ ಸ್ವಾಗತಿಸಿ ವಂದಿಸಿದರು. ಸಹಾಯಕಿ ಮೀನಾಕ್ಷಿ ಸಹಕರಿಸಿದರು.

ಏಣಿತ್ತಡ್ಕ : ಅಂಗನವಾಡಿ ಕೇಂದ್ರ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ Read More »

ಕರಾವಳಿ

ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆ ➤ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಡಿ.ಎಮ್.ಸಿ. ಅಧ್ಯಕ್ಷ ಶಿವಪ್ಪ.ಗೌಡ ಹಾಕೋಟೆಕಾನ ಧ್ವಜಾರೋಹಣ ನೆರವೇರಿಸಿ ನಮ್ಮ ರಾಷ್ಟ್ರಇನ್ನು ಮುಂದಿನ ದಿನಗಳಲ್ಲಿ ಅಖಂಡವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಂತೋಷ ವ್ಯಕ್ತಪಡಿಸಿದರು ಶುಭಹಾರೈಸಿದರು. ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಯಶೋಧರ ಗೌಡ ಪಲ್ಲತ್ತಡ್ಕ, ಸದಸ್ಯ ಪೆÇಡಿಯ ಗೌಡ , ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಪಳ್ಳಿಗದ್ದೆ, ಕಡಬ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ರಘುಚಂದ್ರ ಮನೆಜಾಲು, ಸಿ.ಎ ಬ್ಯಾಂಕ್ ವ್ಯವಸ್ಥಾಪಕ

ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆ ➤ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ Read More »

ಕರಾವಳಿ
Scroll to Top