Mangalore

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ […]

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಕಡಬದ ಯುವಕನೋರ್ವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಕಾಣಿಯೂರು ಕಾಯ್ಮಣ ನಿವಾಸಿ ದಿವಾಕರ್ (36) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ದಿವಾಕರ್ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಶುಕ್ರವಾರದಂದು ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.05. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಕಡಬ ಲೀಜನ್ ವತಿಯಿಂದ ಕಡಬ ಮಿನಿ ವಿಧಾನಸೌಧದ ವಠಾರದಲ್ಲಿ ಬುಧವಾರದಂದು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಡಬ ತಹಶೀಲ್ದಾರ್ ರಮೇಶ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿನಿ ವಿಧಾನ ಸೌಧದ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಕಡಬ ಲೀಜನ್ ಅಧ್ಯಕ್ಷರಾದ ಪಿ.ವಿಲ್ಸನ್, ಕಾರ್ಯದರ್ಶಿ ಪಿ.ಕೆ.ಚೆರಿಯನ್, ಕೋಶಾಧಿಕಾರಿ ಯೋಹನ್ನಾನ್, ಪೂರ್ವಾಧ್ಯಕ್ಷರಾದ ಟೈಟಸ್ ವರ್ಗೀಸ್, ಇ.ಸಿ.ಚೆರಿಯನ್ ಮೊದಲಾದವರು ಉಪಸ್ಥಿತರಿದ್ದರು.

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ Read More »

ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ,

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು  Read More »

ಕರಾವಳಿ, ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top