Mangalore

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೊಲಿಸ್ ಇಲಾಖೆ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ತಳ ಮಟ್ಟದ ಯಾವುದೇ ಪೊಲೀಸರು ಭಾಗಿಯಾಗಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಇತ್ತೀಚೆಗೆ ನೀಡಿದ ಹೇಳಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ  ನನಗೆ […]

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ Read More »

ಕರಾವಳಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ವೆಂಟೆಡ್ ಡ್ಯಾಂ ನಲ್ಲಿ 5 ಮೀ. ನೀರಿನ ಮಟ್ಟ ಏರಿಕೆಯಾಗಿದ್ದು, ಸದ್ಯ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಅಭಾವ ದೂರವಾಗಿದೆ. ಸದ್ಯ ನೀರಿನ ಅಭಾವ ಹಿನ್ನಲೆ ಮಂಗಳೂರಿನಲ್ಲಿ ಮೇ. 04ರಿಂದ ನೀರಿನ ರೇಷನಿಂಗ್ ಆರಂಭ ಮಾಡಲಾಗಿತ್ತು. ಮಂಗಳೂರು ನಗರ ಪ್ರದೇಶ, ಸುರತ್ಕಲ್ ಪ್ರದೇಶಕ್ಕೆ ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ

ಹಜ್ ಭವನ ನಿರ್ಮಾಣದ ಝಮೀರ್ ಅಹ್ಮ್ ಹೇಳಿಕೆ ಸ್ವಾಗತಾರ್ಹ ➤ ಜಿಲ್ಲಾ ಕಾಂಗ್ರೆಸ್ ಸದಸ್ಯ ಎಂ.ಪಿ. ಮೊಯ್ದಿನಬ್ಬ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಜ್ ಯಾತ್ರೆ ಕೆೃಗೊಳ್ಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂಬ ಸಚಿವ ಝಮೀರ್ ಅಹಮದ್ ಖಾನ್ ಅವರ ಹೇಳಿಕೆಯನ್ನು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರೂ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಎಂ ಪಿ. ಮೊಯಿದಿನಬ್ಬ ಸ್ವಾಗತಿಸಿದ್ದಾರೆ. ಹಜ್ ಭವನ ನಿರ್ಮಾಣ ಕಾರ್ಯವನ್ನು ಅತ್ಯಂತ ಶೀಘ್ರವಾಗಿ ಕೆೃಗೆತ್ತಿಕೊಂಡು ದ.ಕ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಂದ ಹಜ್

ಹಜ್ ಭವನ ನಿರ್ಮಾಣದ ಝಮೀರ್ ಅಹ್ಮ್ ಹೇಳಿಕೆ ಸ್ವಾಗತಾರ್ಹ ➤ ಜಿಲ್ಲಾ ಕಾಂಗ್ರೆಸ್ ಸದಸ್ಯ ಎಂ.ಪಿ. ಮೊಯ್ದಿನಬ್ಬ Read More »

ಕರಾವಳಿ

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC || (POCSO) ನ್ಯಾಯಾಲಯವು ಆರೋಪಿ ಮಲತಂದೆಗೆ 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ತನ್ನ ಮೊದಲ ಪತ್ನಿ ಹೆರಿಗೆಗೆ ಹೋಗಿದ್ದ  ವೇಳೆ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದಿದಲ್ಲದೇ, ಈ ವಿಷಯವನ್ನು ಯಾರಲ್ಲಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಸಿದ್ದ ಎಂಬುವುದಾಗಿ ಮಂಗಳೂರು ಮಹಿಳಾ ಠಾಣೆಯಲ್ಲಿ

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ Read More »

ಕರಾವಳಿ

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೋಗ ಗುರು ಜಗದೀಶ್ ಶೆಟ್ಟಿ ಬಿಜೈ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯು ನಗರದ ಕೋಡಿಕಲ್ ಎಸ್‍ಎನ್‍ಡಿಪಿ ಮಂದಿರದಲ್ಲಿ ಜೂ.21ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮ ಉದ್ಘಾಟಿಸುವರು. ರೆಡ್‍ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್,

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಮಂಗಳೂರು ಮಾಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಮನ್ಸೂರ್ ಅಲಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರು  ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿದ್ದರು. ಆದರೆ ಇದೀಗ ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು Read More »

ಕರ್ನಾಟಕ

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top