Mangalore

ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ IPS ಅಧಿಕಾರಿ ಸಿಬಿ ರಿಷ್ಯಂತ್ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ಅವರನ್ನು ದ.ಕ. ಜಿಲ್ಲೆಗೆ ಪ್ರಭಾರ ಎಸ್.ಪಿ.ಯಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ದಾವಣಗೆರೆ ಜಿಲ್ಲೆ ಎಸ್ ಪಿ ಆಗಿದ್ದ ಸಿಬಿ ರಿಷ್ಯಂತ್ ಗೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿ ನೇಮಿಸಲಾಗಿತ್ತು ಎಂದು ವರದಿ ತಿಳಿಸಲಾಗಿದೆ.  

ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ IPS ಅಧಿಕಾರಿ ಸಿಬಿ ರಿಷ್ಯಂತ್ ನೇಮಕ Read More »

ಕರಾವಳಿ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಳಕೆ‌ಮಜಲು ನಿವಾಸಿ ಯುವಕ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಧೀರಜ್ ಬಿಸಿ ರೋಡ್ ಬಳಿ ಹೋಂಡಾ ಶೋರೂಂ ನಲ್ಲಿ ಕೆಲಸ‌ ಮಾಡುತ್ತಿದ್ದರು ಎನ್ನಲಾಗಿದೆ. ಧೀರಜ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.  

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ತ್ರಿವಳಿ ತಲಾಖ್ ಆರೋಪ ಪ್ರಕರಣ ದಾಖಲು.

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ, 31. ತ್ರಿವಳಿ ತಲಾಖ್ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ದೂರು ದಾಖಲಾಗಿದೆ. ನಗರದ ಮಾರ್ನಮಿಕಟ್ಟೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವ ಮುಹಮ್ಮದ್ ಹುಸೇನ್ ಹಾಗೂ ಆತನ ಹೆತ್ತವರ ಮೇಲೆ ಪತ್ನಿ ಶಬಾನಾ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾದ 8 ದಿನಗಳಲ್ಲಿ ಹುಸೇನ್ ಚಿನ್ನಾಭರಣಗಳನ್ನು ಕೊಂಡೊಯ್ದಿದ್ದನು. ಬಳಿಕ ಶಬಾನಾಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ತ್ರಿವಳಿ ತಲಾಖ್ ಆರೋಪ ಪ್ರಕರಣ ದಾಖಲು. Read More »

ಕರಾವಳಿ

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌‌ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ದಾಖಲೆಗಳನ್ನು ಪರಿಶೀಲಿಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಕಚೇರಿಗಳ

ಮಂಗಳೂರು: ಬೆಳ್ಳಂ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ ➤ ದಾಖಲೆಗಳ ಪರಿಶೀಲನೆ Read More »

ಕರಾವಳಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಬ್ಯಾನರ್ ವಿಚಾರದಲ್ಲಿ‌ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು ಎನ್ನಲಾಗಿದೆ. ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು, ಹಲವು ಮುಖಂಡರು ಬಂದು ಆರೋಗ್ಯ ವಿಚಾರಿಸಿದ್ದರು ಎಂದು ತಿಳಿದುಬಂದಿದೆ.  

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.  

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಮೇ, 30. ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಬಲಾಯಿಪಾದೆ ಜಂಕ್ಷನ್ ನಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿ ಎಂದು ತಿಳಿದುಬಂದಿದೆ. ಲಾರಿಯಲ್ಲಿ ಗೇರುಬೀಜ ತುಂಬಿ ಕೊಂಡು ಹೋಗುತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೆ ಮಗುಚಿ ಬಿದ್ದಿದೆ ಎಂದು ವರದಿ ತಿಳಿಸಿದೆ.

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ ,30. ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ.    

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.29. ಗೂನಡ್ಕದ ಸಮೀಪ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಆಲ್ಟೋ ಕಾರು ಗುದ್ದಿದ ಘಟನೆ ಸಂಭವಿಸಿದೆ. ಘಟನೆಯ ರಭಸಕ್ಕೆ ಅಲ್ಟೋ ಕಾರು ಬಸ್ಸಿನೊಳಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಿಂದ ಯಾವುದೇ ಪ್ರಾಣ ಹಾನಿ, ಗಾಯ ಸಂಭವಿಸಿಲ್ಲ. ಬಸ್‌ ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿತ್ತು. ಅದೇ ಮಾರ್ಗವಾಗಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ.

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top