Mangalore

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.  

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.29. ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಇದ್ದು ತಪಾಸಣೆಯ ವೇಳೆ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೈಂದೂರು, ಮೇ.29. ಯುವತಿಯೋರ್ವಳು ನಿರುದ್ಯೋಗದಿಂದ ಮನನೊಂದು ಡೆತ್‌ ನೋಟ್‌ ಬರೆದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಎಂಬಲ್ಲಿ ಸಂಭವಿಸಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.27. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ತಿಂಗಳ‌ ಒಳಗಾಗಿ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ’ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.27. ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ‌ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ

ಮಂಗಳೂರು: ‘ತಿಂಗಳ‌ ಒಳಗಾಗಿ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ’ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.27 ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ‌ ಕೊಡಿಸಿತ್ತು.‌ ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ.‌ ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು.ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್ Read More »

ಕರಾವಳಿ

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.27. ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು,

ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ Read More »

ಕರ್ನಾಟಕ

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.27. ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ ಎನ್ನಲಾಗಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆ ಸವರಿದ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಕುತ್ತು ➤ ನೇಮಕಾತಿ ರದ್ದುಗೊಳಿಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.27. ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ. ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ ಎಂದು ವರದಿ ತಿಳಿಸಿದೆ.  

ಮಂಗಳೂರು: ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಕುತ್ತು ➤ ನೇಮಕಾತಿ ರದ್ದುಗೊಳಿಸಿ ಆದೇಶ Read More »

ಕರಾವಳಿ
Scroll to Top