Mangalore

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2.ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನವನ್ನು ಗೃಹ ಕೆಲಸಕ್ಕೆ ನೇಮಿಸಿಕೊಳ್ಳುವ ಕಾರ್ಮಿಕರಿಗೆ ಕಡ್ಡಾಯವಾಗಿ ನೀಡಬೇಕು.  ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನದ ದರಗಳು ಇಂತಿವೆ: ತೊಳೆಯುವುದು, ಸ್ವಚ್ಛತೆ,  ತರಕಾರಿ ಅಥವಾ ಮಾಂಸಹಾರ ಅಡುಗೆ ತಯಾರಿಸುವುದು, ರುಬ್ಬುವುದು, ಅಡುಗೆ ತಯಾರಿಸುವುದು ಮತ್ತು ಅಡುಗೆ ಮನೆ ಸ್ವಚ್ಛಗೊಳಿಸುವುದು ದಿನಕೂಲಿ ರೂ. 496. 20/-, ತಿಂಗಳಿಗೆ ರೂ. 13,421. 20/-.ಬಟ್ಟೆಒಗೆಯುವುದು, ಪಾತ್ರೆ ತೊಳೆಯುವುದು, ಮನೆ ಸ್ವಚ್ಛಗೊಳಿಸುವುದು, ಮನೆಕೆಲಸ ಹಾಗೂ ಮಕ್ಕಳನ್ನು ನೋಡಿಕೊಳ್ಳುವುದು. ದಿನಕೂಲಿ ರೂ. 456. 20/-, […]

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ Read More »

ಕರಾವಳಿ

ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2.ವೀರ ರಾಣಿ ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಈಗಾಗಲೇ ಒಂದು ಸುತ್ತಿನ ಸಭೆಯನ್ನು ನಡೆಸಿದ್ದು, ಎಲ್ಲರ ಸಲಹೆಗಳನ್ನು ಪರಿಗಣಿಸಿ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸೂಚನೆ ನೀಡಿದರು.  ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಅಬ್ಬಕ್ಕ ಉತ್ಸವ ಕುರಿತಾದ ಸಭೆಯಲ್ಲಿ ಎಲ್ಲರೂ ಜತೆಯಾಗಿ ಸೇರಿ ವೀರರಾಣಿ ಅಬ್ಬಕ್ಕ ಉತ್ಸವ ಮಾಡೋಣ ಎಂದು ಸಚಿವರು ಅಭಿಪ್ರಾಯಪಟ್ಟರು.  ಈ ಬಾರಿಯ ಅಬ್ಬಕ್ಕ ಉತ್ಸವವನ್ನು ಫೆ.೨-೩ರಂದು ಉಳ್ಳಾಲದಲ್ಲಿ

ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ Read More »

ಕರಾವಳಿ

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2 ನಗರದ ನೆಹರು ಮೈದಾನಕ್ಕೆ  ಜನವರಿ 19ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಆಗಮನದ ವೇಳೆ ಕೈಗೊಳ್ಳಬೇಕಾಗಿರುವ ಬಂದೋಬಸ್ತ್ ಸಂಬಂಧ ಕಾರ್ಯಕ್ರಮ ಆಯೋಜಕರು ಮತ್ತು ಜಿಲ್ಲಾಡಳಿತ, ಪೊಲೀಸ್ ಕಮಿಷನರೇಟ್ ಅವರು ಪರಸ್ಪರ ಸಹಯೋಗದೊಂದಿಗೆ ಸಮಿತಿ ರಚಿಸಿ ಕ್ರಮಗಳನ್ನು ರೂಪಿಸಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸಲಹೆ ಮಾಡಿದರು.    ನಗರದ ನಾಗರಿಕರಿಗೆ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮ ಆಯೋಜನೆ ವ್ಯವಸ್ಥಿತವಾಗಿ ನಡೆಯುವಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ನುಡಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ Read More »

ಕರ್ನಾಟಕ

ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ ► ಜನವರಿ 12 ಮತ್ತು 13ರಂದು ಮೂರು ಕಿನಾರೆಗಳಲ್ಲಿ ರಿವರ್ ಫೆಸ್ಟಿವಲ್

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ಹಾಗೂ ನದಿ ಕಿನಾರೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರವಾಸೋದ್ಯಮ ತಾಣವಾಗಿ ಆಕರ್ಷಿಸಲು ರಿವರ್ ಫೆಸ್ಟಿವಲ್ ನಡೆಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನದಿ ಉತ್ಸವದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜನವರಿ 12 ಮತ್ತು 13ರಂದು ಉತ್ಸವ ಮೂರು ಕಿನಾರೆಗಳಲ್ಲಿ ನಡೆಯಲಿದೆ.  ನದಿ ತೀರಗಳನ್ನು, ದ್ವೀಪಗಳನ್ನು ಹೊಂದಿರುವ ತಾಲೂಕು ಮಟ್ಟದಲ್ಲೂ ಉತ್ಸವಗಳನ್ನು ಮಾಡಲು ಜಿಲ್ಲಾ ಮಟ್ಟದ ಕಾರ್ಯಕ್ರಮ ಮಾದರಿಯಾಗಿರಲಿ ಎಂದು

ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ ► ಜನವರಿ 12 ಮತ್ತು 13ರಂದು ಮೂರು ಕಿನಾರೆಗಳಲ್ಲಿ ರಿವರ್ ಫೆಸ್ಟಿವಲ್ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1.ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2018-19 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳಿಂದ ಅವಿರತವಾಗಿ ಸೇವೆ ಸಲ್ಲಿಸಿರುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಸ್ವಯಂ ಸೇವಾ ಸಂಸ್ಥೆಗಳಿಂದ ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವ ಅಪಾಯದಿಂದ ಪಾರು ಮಾಡಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಜನವರಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1. ಸಾವಯವ ಕೃಷಿ ಪ್ರಮಾಣೀಕೃತ ಪ್ರದೇಶವನ್ನು ಹೆಚ್ಚಿಸುವುದೊಂದಿಗೆ ಮಾರುಕಟ್ಟೆಗೆ ನಿರಂತರವಾಗಿ ಒಳ್ಳೆಯ ಗುಣಮಟ್ಟದ ಸಾವಯವ ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡಲು ‘ಸಾವಯವ ಕೃಷಿ ಮತ್ತು ದೃಢೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯ ಸಾವಯವ ಪ್ರಮಾಣೀಕರಣ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಕ್ಷೇತ್ರವನ್ನು ಸಾವಯವ ಪ್ರಮಾಣೀಕರಣಕ್ಕೆ ಈಗಾಗಲೇ ಮೊದಲನೇ ವರ್ಷಕ್ಕೆ ನೊಂದಾಯಿಸಲಾಗಿರುವ ಮತ್ತು ನೊಂದಾಯಿಸಲು ಆಸಕ್ತಿ ಇರುವ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು, ಕೃಷಿಕರ ಸಂಘಗಳು, ಖಾಸಗಿ ಸಂಸ್ಥೆಗಳು,ರೈತ ಉತ್ಪಾದನಾ ಸಂಸ್ಥೆಗಳು,ಕೃಷಿಕರು,

ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ Read More »

ಕರಾವಳಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26. ದಕ್ಷಿಣ ಕನ್ನಡ ಜಲ್ಲಾ ಗೃಹರಕ್ಷಕದಳದ 14 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 23-12-2018ರಂದು ಜರುಗಿತು. ಇದು 2018ನೇ ಇಸವಿಯ 04ನೇ ಸಭೆಯಾಗಿದ್ದು ಗೃಹರಕ್ಷದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 75 ಮಂದಿ ಗೃಹರಕ್ಷಕರನ್ನು ಆದಷ್ಟು ಬೇಗ ಭರ್ತಿ ಮಾಡಲು ಘಟಕಾಧಿಕಾಧಿಕಾರಿಗಳಿಗೆ ಆದೇಶ ನೀಡಲಾಯಿತು. ಪ್ರಸಕ್ತ ಮಂಜೂರಾತಿಯಾದ 1000 ಗೃಹರಕ್ಷಕರಲ್ಲಿ 925 ಮಂದಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26.  ಸಿಐಡಿ ಪೊಲೀಸರೆಂದು ನಂಬಿಸಿ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡುವ ತಂಡವೊಂದು ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಇದರ ಬಗ್ಗೆ ಜನ ಜಾಗೃತರಾಗಬೇಕು ಎಂದು ಡಿಸಿಪಿ ಉಮಾಪ್ರಶಾಂತ್ ಜಿಲ್ಲಾ ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಿಸಿಪಿ ಉಮಾ ಪ್ರಶಾಂತ್, ಉಡುಪಿ ಜಿಲ್ಲಾ ಪೊಲೀಸರು ಈ ಬಗ್ಗೆ ಅಲರ್ಟ್ ಮಾಹಿತಿ ನೀಡಿದ್ದಾರೆ. ಬಂದರು ಠಾಣಾ ವ್ಯಾಪ್ತಿಯಲ್ಲಿ ದಾರಿಹೋಕ ವೃದ್ದರೊಬ್ಬರ ಬಳಿ ಬಂದ ಕಳ್ಳರು ತಾವು ಪೊಲೀಸರೆಂದು ವಂಚಿಸಿ ಚಿನ್ನಾಭರಣ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ Read More »

ಕರಾವಳಿ

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ ನೆಲೆಸಿ ಸಾಕಷ್ಟು

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್ Read More »

ವಿಶೇಷ ಲೇಖನಗಳು

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21.    ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ವತಿಯಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಭಾಗ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮದಲ್ಲಿ Mandovi Motors Pvt Ltd, Matrix Honda, Saggraha Management Pvt Ltd, Eurekha Forbes Ltd., BSL India Pvt Ltd, Arena. Animation ಕಂಪೆನಿಗಳು ಭಾಗವಹಿಸಲಿದ್ದು,

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ. Read More »

ಕರಾವಳಿ
Scroll to Top