Mangalore

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ […]

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು.08. ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥಹ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಉದ್ರೇಕಕಾರಿ ಸ್ಟೇಟಸ್ ಅಪ್‍ಡೇಟ್ ಮಾಡಲಾಗಿದೆ. ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ.. ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ. ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು,

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ Read More »

ಕರಾವಳಿ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಇತ್ತೀಚೆಗೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಜುಲೈ 4 ರಂದು ರಾತ್ರಿ ಶರತ್ ಬಿ.ಸಿ.ರೋಡ್‌ನ ತನ್ನ ತಂದೆಯ ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್ Read More »

ಕರಾವಳಿ

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಸಂಘ ಪರಿವಾರದ ಮುಖಂಡರನ್ನು ಪೊಲೀಸರು ಬಂಧಿಸಿದರು. ಇಂದು ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದ ಕಾರಣ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ Read More »

ಕರಾವಳಿ

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು

(ನ್ಯೂಸ್ ಕಡಬ) newskadaba.com ಬಿಹಾರ, ಜು.06. ಊರಿನ ಮುಸ್ಲಿಮರು ಇಸ್ಲಾಂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಅರೋಪಿಸಿ ಮುಸ್ಲಿಂ ವಕೀಲರೋರ್ವರು ತನ್ನ ಇಬ್ಬರು ಪುತ್ರರೊಂದಿಗೆ ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯ ಪೊಖಾರಿಯ ಎಂಬ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮುಹಮ್ಮದ್ ಅನ್ವರ್(46) ತನ್ನ ಪುತ್ರರಾದ ಮುಹಮ್ಮದ್ ಅಮೀರ್(11) ಹಾಗೂ ಮುಹಮ್ಮದ್ ಶಬೀರ್‌(9) ರೊಂದಿಗೆ ಮತಾಂತರಗೊಂಡಿದ್ದಾರೆ. ಇವರು ತಮ್ಮ ಹೆಸರನ್ನು ಆನಂದ್ ಭಾರ್ತಿ, ಅಮನ್ ಭಾರ್ತಿ ಹಾಗೂ ಸುಮನ್ ಭಾರ್ತಿ ಎಂದು ಮರು ನಾಮಕರಣ ಮಾಡಿಕೊಂಡಿದ್ದಾರೆ.

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು Read More »

ರಾಷ್ಟ್ರೀಯ ನ್ಯೂಸ್

RSS ಕಾರ್ಯಕರ್ತನಿಗೆ ಚೂರಿ ಇರಿದಾಗ ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕ ►ಮಾನವೀಯತೆಯ ಮೂಲಕ ಹೀರೋ ಆದ ಬಂಟ್ವಾಳದ ಯುವಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಬೇರೊಂದಿಲ್ಲ ಎಂಬುದನ್ನು ಬಿ.ಸಿ. ರೋಡಿನ ಯುವಕನೊಬ್ಬ ತನ್ನ ಮಹತ್ಕಾರ್ಯದ ಮೂಲಕ ಸಾದರಪಡಿಸಿದ್ದಾನೆ. ಕೋಮು ಸಂಘರ್ಷದಿಂದ ಕರಾವಳಿ ಜಿಲ್ಲೆ ಉರಿಯುತ್ತಿದ್ದರೆ ಜಾತಿ, ಧರ್ಮದ ಹಂಗು ತೊರೆದು ಗೆಳೆಯನ ರಕ್ಷಣೆಗೆ ಧಾವಿಸಿ ಬಂದಿದ್ದಾರೆ ಹಣ್ಣಿನ ವ್ಯಾಪಾರಿ ಅಬ್ದುಲ್ ರವೂಫ್. ಹೌದು, ಕಳೆದ ಮಂಗಳವಾರ ರಾತ್ರಿ ಸುಮಾರು ಹತ್ತು ಗಂಟೆಗೆ ಬಿ.ಸಿ.ರೋಡಿನ ಉದಯ ಲಾಂಡ್ರಿ ಮಾಲೀಕ, RSS ಕಾರ್ಯಕರ್ತ ಶರತ್‍ನಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತಕ್ಷಣವೇ ಅಕ್ಕಪಕ್ಕದವರು

RSS ಕಾರ್ಯಕರ್ತನಿಗೆ ಚೂರಿ ಇರಿದಾಗ ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕ ►ಮಾನವೀಯತೆಯ ಮೂಲಕ ಹೀರೋ ಆದ ಬಂಟ್ವಾಳದ ಯುವಕ Read More »

ಕರಾವಳಿ

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಕರೋಪಾಡಿ ಗ್ರಾಮ ಪಂಚಾಯತ್ನ ಮಿತ್ತನಡ್ಕ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ಜಲೀಲ್ ಕರೋಪಾಡಿ ಅವರ ಸಹೋದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನ್ವರ್ ಕರೋಪಾಡಿ 449 ಮತಗಳನ್ನು ಗಳಿಸುವ ಮೂಲಕ ಜಯಗಳಿಸಿದ್ದಾರೆ. ಅನ್ವರ್ ಕರೋಪಾಡಿಯವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಕೋಡ್ಲ 320 ಮತಗಳನ್ನು ಗಳಿಸಿದ್ದಾರೆ. ಜುಲೈ 2ರಂದು ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಮತದಾನ ನಡೆದಿದ್ದು 790 ಮತಗಳು ದಾಖಲಾಗಿತ್ತು. ಅವುಗಳಲ್ಲಿ 21

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ Read More »

ಕರಾವಳಿ

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಘಟನೆಯನ್ನು ಪತ್ತೆಹಚ್ಚಿರುವ ವಿಟ್ಲ ಪೊಲೀಸರು 14 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಜಾನುವಾರುಗಳನ್ನು ಕೇರಳದ ಗೋಶಾಲೆಯ ನೆಪದಲ್ಲಿ ದಾಖಲಿ ಸೃಷ್ಟಿಸಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಅನೇಕ ಸಮಯಗಳಿಂದ ಕೇಳಿಬರುತ್ತಿತ್ತು. ಅದರಂತೆ ಇಂದು ಕೇರಳ ನೋಂದಣಿಯ ಈಚರ್ ಲಾರಿಯೊಂದರಲ್ಲಿ 14 ಗೋವುಗಳನ್ನು ಸಾಗಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿರುವ ವಿಟ್ಲ ಪೊಲೀಸರು ಲಾರಿ ಸಹಿತ ಗೋವುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು Read More »

ಕರಾವಳಿ

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು ಜು.02. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 2 ರವರೆಗೆ ವಿಧಿಸಲಾಗಿದ್ದ  ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.  ದಕ್ಷಿಣ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ,

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ
Scroll to Top