Mangalore

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »

ಕರಾವಳಿ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.21 ರವೆರೆಗೆ

ಜಿಲ್ಲೆಯಾದ್ಯಂತ ಜೂ.21 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ

ಕಲ್ಲಡ್ಕ ಗಲಭೆ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.13. ಅರಿವು ಯೊಜನೆಯಡಿಯಲ್ಲಿ ವೃತ್ತಿನಿರತ ವಿದ್ಯಾಭ್ಯಾಸಕ್ಕಾಗಿ ಅಂದರೆ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್, ಎಂ.ಬಿ.ಎ, ಎಂಸಿ.ಎ, ಎಂ.ಟೆಕ್, ಪಿ.ಹೆಚ್.ಡಿ, ಎಂ.ಇ, ಎಂ.ಎಸ್ (ಡಿಗ್ರಿ), ಎಂ.ಡಿ, ಎಂ.ಎಫ್.ಎ, ಎಂ.ಡಿ.ಎಸ್, ಎಂ.ಟಿ.ಎ, ಎಂ.ಐ.ಬಿ, ಬಿ.ಎ, ಬಿ.ಕಾಂ, ಡಿ.ಎಡ್, ಐ.ಟಿ.ಐ, ಡಿಪ್ಲೊಮೊ, ನಸಿರ್ಂಗ್, ಬಿ.ಡಿ.ಎಸ್, ಎಂ.ಎ, ಬಿ.ಎಸ್ಸಿ, ಬಿ.ಎ, ಬಿ.ಕಾಂ, ಏರ್ ಕ್ರಾಫ್ಟ್, ಮಂಟನೆನ್ಸ್ ಇಂಜಿನಿಯರಿಂಗ್, ಟೆಕ್ನಿಕಲ್ ಮ್ಯಾನೆಜ್ಮೆಂಟ್ ಇತ್ಯಾದಿ ವಿದ್ಯಾಭ್ಯಾಸಕ್ಕಾಗಿ ಅಭ್ಯರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷಕ್ಕೆ ರೂ. 10 ಸಾವಿರ ದಿಂದ ರೂ. 75 ಸಾವಿರದವರೆಗೆ

ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಲಾರಿ-ಬೈಕ್ ಢಿಕ್ಕಿ: ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.13. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಕಡಂಬು ಎಂಬಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಕಡೇಶಿವಾಲಯ ನಿವಾಸಿ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಗುರುಪ್ರಸಾದ್ ಎಂದ್ ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಕಡೇಶಿವಾಲಯದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾರಿ-ಬೈಕ್ ಢಿಕ್ಕಿ: ಯುವಕ ಮೃತ್ಯು Read More »

ಕರಾವಳಿ

ಮುಂದಿನ ನಾಲ್ಕು ದಿನ ಭಾರೀ ಮಳೆ ಸಂಭವ: ಸಾರ್ವಜನಿಕರು ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.12. ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 13 ರಿಂದ 16 ರವರೆಗೆ ಭಾರೀ ಮಳೆ ಬೀಳುವ ಸಂಭವವಿರುವುದರಿಂದ ಭಾರತ ಹವಾಮಾನ ಇಲಾಖೆ, ಬೆಂಗಳೂರು ಇವರು ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಿದ್ದಾರೆ. ತಗ್ಗು ಪ್ರದೇಶದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮುಂದಿನ ನಾಲ್ಕು ದಿನ ಭಾರೀ ಮಳೆ ಸಂಭವ: ಸಾರ್ವಜನಿಕರು ತಗ್ಗು ಪ್ರದೇಶ/ನದಿ ತೀರಕ್ಕೆ ತೆರಳದಂತೆ ಸೂಚನೆ Read More »

ಕರಾವಳಿ

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ Read More »

ಕರಾವಳಿ
Scroll to Top