Mangalore

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ಪಾರ್ಟ್‌ಟೈಮ್‌ ಕೆಲಸ ಎಂಬ ಸಂದೇಶವಿರುವ ವಾಟ್ಸ್ ಆ್ಯಪ್‌ ಖಾತೆಯ ಲಿಂಕ್‌ ರವಾನೆ ಹಾಗೂ ಅದರ ಮೂಲಕ ಹಣ ವರ್ಗಾವಣೆ ಮಾಡಿರುವ ಎರಡು ವಂಚನೆ ಪ್ರಕರಣಗಳು ಮಂಗಳೂರು ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿವೆ. ಮೊದಲ ಪ್ರಕರಣದಲ್ಲಿ, ಏಪ್ರಿಲ್‌ನಲ್ಲಿ 6262948264 ಸಂಖ್ಯೆಯನ್ನು ಬಳಸಿಕೊಂಡು ದೂರುದಾರರ ವಾಟ್ಸಾಪ್ ಖಾತೆಗೆ ‘ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ಕೆಲಸ’ ಎಂಬ ಸಂದೇಶದೊಂದಿಗೆ ಲಿಂಕ್ ಅನ್ನು ಕಳುಹಿಸಿದ್ದಾರೆ. ಕೆಲಸಗಳನ್ನು ಮಾಡಲು URL ಅನ್ನು ಬಳಸಲು ಸೂಚಿಸಲಾಗಿದ್ದು, ನಂತರ ದೂರುದಾರರ ಖಾತೆಯಿಂದ ಕ್ರಮೇಣವಾಗಿ 3,01,505 […]

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ Read More »

ಕರಾವಳಿ

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.25. ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪುತ್ತೂರು‌ ಮಹಿಳಾ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ. ಕೆಯ್ಯೂರು ಮಾಡಾವು ನಿವಾಸಿ ನವೀನ್ ಎಂಬಾತನ ಮೇಲೆ ಕೇಸ್ ದಾಖಲಾಗಿದೆ. ನವೀನ್ ಕಾಸರಗೋಡು ಮೂಲದ ಅಪ್ರಾಪ್ತ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಪುತ್ತೂರು ಜಾತ್ರೆಯ ವೇಳೆ ಆಕೆಗೆ ಪುಸಲಾಯಿಸಿ ಮಾಡಾವು ಅಂಗನವಾಡಿ ಕೇಂದ್ರದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.  

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ

ರೈಲಿನ ಶೌಚಾಲಯದಲ್ಲಿ ಮೃತಪಟ್ಟ ವ್ಯಕ್ತಿ.!   ➤24 ಗಂಟೆ ಮೃತದೇಹ ಶೌಚಾಲಯದಲ್ಲೇ ಬಾಕಿ..!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.25 ಮುಂಬಯಿ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿ ರೈಲಿನ ಶೌಚಾಲಯದಲ್ಲೇ ಮೃತಪಟ್ಟು ರೈಲಿನ ಸಿಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋದ ಹೃದಯ ಕಲಕುವ ವಿದ್ಯಮಾನ ಘಟಿಸಿದೆ. ಇಲ್ಲಿನ ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದ ಯಾಘಾತದಿಂದ ಮೃತಪಟ್ಟಿದ್ದು ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿ ವರೆಗೂ ಹುಡುಕಾಡಿದ್ದಾರೆ. ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು

ರೈಲಿನ ಶೌಚಾಲಯದಲ್ಲಿ ಮೃತಪಟ್ಟ ವ್ಯಕ್ತಿ.!   ➤24 ಗಂಟೆ ಮೃತದೇಹ ಶೌಚಾಲಯದಲ್ಲೇ ಬಾಕಿ..! Read More »

ಕರಾವಳಿ

ಸುಬ್ರಮಣ್ಯ: ಅಸ್ವಸ್ತಗೊಂಡ ಕಾಡಾನೆ ಪ್ರತ್ಯಕ್ಷ  ➤ ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಏ.25. ಕಾಡಾನೆಯೊಂದು ಅಸ್ವಸ್ಥಗೊಂಡು ಕಾಡಂಚಿನಲ್ಲಿ ಸಂಚರಿಸುತ್ತಿರುವ ವೀಡಿಯೋ ಹರಿದಾಡುತ್ತಿದ್ದು ಅರಣ್ಯಾಧಿಕಾರಿಗಳು ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ    ಕಾಡಾನೆ ಅಸ್ವಸ್ಥಗೊಂಡ ರೀತಿಯಲ್ಲಿ ಸಂಚಾರ ಮಾಡಿರುವುದನ್ನು ಸ್ಥಳೀಯ ನಿವಾಸಿಗಳು ಗಮನಿಸಿದ್ದಾರೆ. ಎ25 ರಂದು ಮತ್ತೆ ಸುಬ್ರಹ್ಮಣ್ಯದ ಎರ್ಮಾಯಿಲ್ ಎಂಬಲ್ಲಿ ಮುಂಜಾನೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ಕಾಡಾನೆ ಸಾರ್ವಜನಿಕರಿಗೆ ಕಾಣಸಿಕ್ಕಿದೆ.  

ಸುಬ್ರಮಣ್ಯ: ಅಸ್ವಸ್ತಗೊಂಡ ಕಾಡಾನೆ ಪ್ರತ್ಯಕ್ಷ  ➤ ವಿಡಿಯೋ ವೈರಲ್ Read More »

ಕರಾವಳಿ

ಸಿಎಂ ಹಿಜಾಬ್ ಬಗ್ಗೆ ನೀಡಿರುವ ಹೇಳಿಕೆಯನ್ನು ಮುಸ್ಲಿಮ್ ಒಕ್ಕೂಟ ಖಂಡಿಸಿದೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.25, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಜಾಬ್-ಹಲಾಲ್ ವಿಷಯದಲ್ಲಿ ವಿವಾದ ಸೃಷ್ಟಿಸುವುದು ಸರಿಯಲ್ಲ. ಅದಕ್ಕೆ ನನ್ನ ಬೆಂಬಲ ಇಲ್ಲ ಎಂದು ಹೇಳಿಕೆ ನೀಡಿದ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಜಾಬ್, ಹಲಾಲ್ ನಂತಹ ವಿಷಯವನ್ನು ನಾವು ಮರೆತಿದ್ದೇವೆ. ಹೀಗೆಂದು ಪ್ರತಿಕ್ರಿಯೆ ನೀಡಿರುವುದನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಖಂಡಿಸಿದ್ದಾರೆ. ಬಿಜೆಪಿಯ ಉದ್ಯಮಿಗಳು ವಿದೇಶಕ್ಕೆ ಹಲಾಲ್ ಆದ ಮಾಂಸವನ್ನು ರಫ್ತು ಮಾಡುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಮರೆತಿ‌ದ್ದಾರೆಯೇ ಎಂದು ಅಶ್ರಫ್ ಪ್ರಶ್ನಿಸಿದ್ದಾರೆ.    

ಸಿಎಂ ಹಿಜಾಬ್ ಬಗ್ಗೆ ನೀಡಿರುವ ಹೇಳಿಕೆಯನ್ನು ಮುಸ್ಲಿಮ್ ಒಕ್ಕೂಟ ಖಂಡಿಸಿದೆ.! Read More »

ಕರಾವಳಿ

ಉಳ್ಳಾಲ: ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು. ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು ಖಾಲಿದನ್ನು ನೀರು ಪಾಲಾಗಿಸಿದೆ ಎಂದು

ಉಳ್ಳಾಲ: ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು Read More »

ಕರಾವಳಿ

ಮಂಗಳೂರು: ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ನೀರು ಸರಬರಾಜು ವ್ಯತ್ಯಯಗೊಳ್ಳಲಿದೆ. ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ ತಾಂತ್ರಿಕ ಕಾಮಗಾರಿ ಹಿನ್ನೆಲೆಯಲ್ಲಿ ಎ.27ರಂದು ಬೆಳಗ್ಗೆ 6ಗಂಟೆಯಿಂದ 29ರ ಬೆಳಗ್ಗೆ 6 ಗಂಟೆಯವರೆಗೆ 48ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.

ಮಂಗಳೂರು: ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ Read More »

ಕರಾವಳಿ

ಮಂಗಳೂರು: ಪುತ್ರಿಯರಿಂದ ಅತ್ಯಾಚಾರ ಆರೋಪ ➤ ಆರೋಪಿ ತಂದೆ ಖುಲಾಸೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.25. ತಮ್ಮ ತಂದೆಯ ವಿರುದ್ದ ಪುತ್ರಿಯರು ಆರೋಪ ಮಾಡಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಾಟಿಪಳ್ಳದ ನಿವಾಸಿ ಅಬ್ದುಲ್‌ ಹಕೀಂ(48) ಖುಲಾಸೆಗೊಂಡ ಆರೋಪಿ ಎಂದು ಗುರುತಿಸಲಾಗಿದೆ. ತಾವು ಅಪ್ರಾಪ್ತರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ತಂದೆ ಅತ್ಯಾಚಾರ ಎಸಗಿರುವ ಬಗ್ಗೆ ಇಬ್ಬರು ಮಕ್ಕಳು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಈ ಪೈಕಿ ಕಿರಿಯ ಮಗಳ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಎರಡು ತಿಂಗಳ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಮಂಗಳೂರು: ಪುತ್ರಿಯರಿಂದ ಅತ್ಯಾಚಾರ ಆರೋಪ ➤ ಆರೋಪಿ ತಂದೆ ಖುಲಾಸೆ Read More »

ಕರಾವಳಿ

ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.24 ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿರುವ ಕೌಶಲ್ಯ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೌಶಲ್ಯ ಸಾವನ್ನಪ್ಪಿದ್ದಾರೆ.      

ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ.! Read More »

ಕರಾವಳಿ

ಮಂಗಳೂರು: ವಾಹನಗಳ ಪ್ರಖರ ಬೆಳಕಿನ ವಿರುದ್ಧ ಕಾರ್ಯಾಚರಣೆ   ➤ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.24. ಸಂಚಾರಿ ನಿಯಮಗಳನ್ನು ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ. ವಾಹನಗಳಲ್ಲಿ ಅತ್ಯಾಕರ್ಷಣೆಯ ಉದ್ದೇಶದಿಂದ ಅನಗತ್ಯವಾಗಿ ಅಳವಡಿಸುವ ಇಂತಹ ಬೆಳಕುಗಳಿಂದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಹೀಗಾಗಿ ಪ್ರಖರ ಬೆಳಕಿನ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಮಂಗಳೂರು: ವಾಹನಗಳ ಪ್ರಖರ ಬೆಳಕಿನ ವಿರುದ್ಧ ಕಾರ್ಯಾಚರಣೆ   ➤ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ Read More »

ಕರಾವಳಿ
Scroll to Top