Mangalore

ಮಂಗಳೂರು: ಹಳಿಗೆ ಬಿದ್ದ ಮರ, ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ !

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ. ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಚಂದ್ರಾವತಿ(70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ ಎನ್ನಲಾಗಿದೆ. ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು.  

ಮಂಗಳೂರು: ಹಳಿಗೆ ಬಿದ್ದ ಮರ, ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ ! Read More »

ಕರಾವಳಿ

4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಜೀವ ಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ 2006ರಲ್ಲಿ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌ ಗೆ ಕಾಂಗ್ರೆಸ್‌ ಸರಕಾರ ಭದ್ರತೆ ನೀಡಿತ್ತು. ಅದಾದ ನಂತರದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್‌,

4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..! Read More »

ಕರಾವಳಿ
Theft, crime, Robbery

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಕಳ್ಳನೋರ್ವ ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ವರದಿಯಾಗಿದೆ. ವ್ಯಾಪಾರಿಯು ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದ ವೇಳೆ, ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನು ಈ ಬ್ಯಾಗ್ ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಕಳ್ಳನ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.  

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಏ. 04. ಶಂಕಿತ ರೇಬಿಸ್‌ ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಎಂದು ಗುರುತಿಸಲಾಗಿದೆ. ಈತನಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ ಈತ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ➤ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 04. ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ➤ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು Read More »

ಕರಾವಳಿ

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರ್ಕಶ ಹಾರ್ನ್ ಬಳಕೆ ! ➤ ಮೂರು ದಿನಗಳಲ್ಲಿ 130 ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಕರ್ಕಶ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾನ್೯ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದು, ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾನ್೯ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ತಪಾಸಣೆ ನಡೆಸಿದ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು: ಕರ್ಕಶ ಹಾರ್ನ್ ಬಳಕೆ ! ➤ ಮೂರು ದಿನಗಳಲ್ಲಿ 130 ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ತನ್ನ ಮನೆಯ ಒಂದು ಮಹಡಿಯಲ್ಲಿ ಸುಮಾರು ಐದು ತಿಂಗಳಿಂದ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಚುನಾವಣೆ ನೀತಿ‌ ಸಂಹಿತೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರವಿಕುಮಾರ್ ಎಂ.ಆರ್ ಅವರು ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಡಿಸಿ, ಮಾಲ್‍ಗಳು, ಮದುವೆ ಮಂಟಪಗಳು, ಸಭಾ ಭವನಗಳು, ಚಲನಚಿತ್ರ ಮಂದಿರಗಳು ಇತ್ಯಾದಿಗಳ ಮಾಲೀಕರೊಂದಿಗೆ ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳ ಸಂಪರ್ಕ ಇದ್ದಲ್ಲಿ ಅವರು ಈ ವೇದಿಕೆಗಳನ್ನು ಬಳಸಿಕೊಂಡು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲು ಅವಕಾಶ ನೀಡಬಾರದು.ಒಂದು ವೇಳೆ

ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..! Read More »

ಕರಾವಳಿ
Scroll to Top