Mangalore

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಮಾ.29. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ದ.ಕ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಟೆ IPS, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ […]

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಡಾ.ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.29. ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕನ್ನ ಕಳವು ಮಾಡಲಾಗಿದೆ.  

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ Read More »

ಕರಾವಳಿ

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.29. ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ‌. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.28. 2022ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಸಬ್‌ ಇನ್‌ ಸ್ಪೆಕ್ಟರ್‌ಗಳ ನೇಮಕಾತಿ ಹಗರಣದ ಭಾಗವಾಗಿ ವಿಚಾರಣೆ ಎದುರಿಸಿದ್ದ ಭಟ್ ಅವರು ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ತಮ್ಮ ನಿವಾಸದ ಪಂಪ್‌ ಹೌಸ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..! Read More »

ಕರಾವಳಿ

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಇತಿಹಾಸ ಪ್ರಸಿದ್ಧ ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಮಾ.27 ಸೋಮವಾರದಂದು ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ರಮೇಶ್ ಭಟ್ ಕೆರ್ಮಾಯಿ ನೇತೃತ್ವದಲ್ಲಿ ದೇವರಿಗೆ ಹಾಗೂ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಕರಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಪಿಲಿಮಜಲು,  ಉಪಾಧ್ಯಕ್ಷರಾದ ನಾರಾಯಣ ಶೆಟ್ಟಿ ಅತ್ಯಡ್ಕ, ಪೂವಪ್ಪ ಗೌಡ ಪೂಜಾರಿ ಮನೆ, ಪ್ರಧಾನ ಕಾರ್ಯದರ್ಶಿ ಸತೀಶ್ ಕೆ.ಬಸ್ತಿ ಕೊಡೆಂಕಿರಿ,

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.28. ಇದೇ ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ..! ➤ ನಿಷೇಧಾಜ್ಞೆ  ಹೊರಡಿಸಿದ ಜಿಲ್ಲಾಧಿಕಾರಿ Read More »

ಕರಾವಳಿ

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದ ಲಕ್ಷಾಂತರ ರೂಪಾಯಿ ನಗದು ಹಣ ಪತ್ತೆಯಾಗಿದ್ದು, ವಿಟ್ಲ ಪೊಲೀಸರ ಕಾರ್ಯಾಚರಣೆ ವೇಳೆ ನಗದು ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ. ಕರ್ನಾಟಕ ರಾಜ್ಯ ಚುನಾವಣೆ ಪ್ರಯುಕ್ತ ಅಂತರರಾಜ್ಯ ಚೆಕ್‌ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಸಿಬ್ಬಂದಿಗಳ ಜೊತೆ ಕರ್ತವ್ಯದಲ್ಲಿರುವ ವೇಳೆ ವಾಹನ ತಪಾಸಣೆ ನಡೆಸುತ್ತಿರುವಾಗ ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಗಮನಕ್ಕೆ

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ Read More »

ಕರಾವಳಿ
Scroll to Top