Mangalore

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ

(ನ್ಯೂಸ್ ಕಡಬ)newskadaba.com  ಕಡಬ, ಮಾ.25. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲೇ ಗಂಡು ಮಗುವಿಗೆ ತಾಯಿ ಜನ್ಮವಿತ್ತ  ಅಪರೂಪದ ಘಟನೆ ಕಡಬದಲ್ಲಿ ವರದಿಯಾಗಿದೆ. ಆಲಂಕಾರು ಸಮೀಪದ ಮಣಿಕ್ಕಲದ  ಗರ್ಭಿಣಿ ಮಹಿಳೆ ತನ್ನ ಪತಿ ಜೊತೆ  ಬಲ್ಯದ  ತನ್ನ ಕುಟುಂಬಸ್ಥರ ಮನೆಗೆ ಬಂದಿದ್ದರು. ಸಾಯಂಕಾಲದ ವೇಳೆ ಅವರಿಗೆ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿತ್ತು. ತಕ್ಷಣ ಆರೋ ರಿಕ್ಷಾದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ  ಕರೆದುಕೊಂಡು ಬಂದಿದ್ದು, ಆಸ್ಪತ್ರೆ ಮುಂಭಾಗಕ್ಕೆ ತಲುಪುತ್ತಿದ್ದಂತೆ ತಾಯಿ ಮಗುವಿಗೆ ಜನ್ಮನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು […]

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ Read More »

ಕರಾವಳಿ

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.25. ಮೊಬೈಲ್ ಶೋರೂಂ ವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಅವರು ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ನಗರದ ಬೆಂದೂರ್‌ವೆಲ್‌ ನಲ್ಲಿ ಖಾಸಗಿ ಬಸ್‌ ನಡಿಗೆ ಮಗುವೊಂದು ಬಿದ್ದು ಮೃತಪಟ್ಟು, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬರೆ ಜರಿದು ಕೆಲವು ಮಂದಿ ಮಣ್ಣಿನಡಿಗೆ..!

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.25. ಸುಳ್ಯದ ಗುರುಂಪು ಬಳಿ ಬರೆ ಜರಿದು ಕೆಲವು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿದಂತೆ ಅಧಿಕಾರಿಗಳು ಧಾವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ ಎನ್ನಲಾಗಿದೆ.  

ಸುಳ್ಯ: ಬರೆ ಜರಿದು ಕೆಲವು ಮಂದಿ ಮಣ್ಣಿನಡಿಗೆ..! Read More »

ಕರಾವಳಿ

ಬಂಟ್ವಾಳ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.25. ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತು ಗಳನ್ನು ಏಲಂ ಮಾಡುವುದು ಸಾಮಾನ್ಯವಾಗಿದ್ದು, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಮೂಲರಪಟ್ನ ಮಸೀದಿಯಲ್ಲಿ ಹಲಸಿನ ಹಣ್ಣೊಂದನ್ನು ವ್ಯಕ್ತಿಯೊಬ್ಬರು ಏಲಂನಲ್ಲಿ ಬರೋಬ್ಬರಿ 4.33 ಲಕ್ಷ ರೂ.ಗಳಿಗೆ ಪಡೆಯುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಮೂಲರಪಟ್ಣ ನವೀಕೃತ ಮಸೀದಿಯ ಉದ್ಘಾಟನೆಯ ಹಿನ್ನೆಲೆಯಲ್ಲಿ ಧಾರ್ಮಿಕ ಪ್ರಭಾಷಣವನ್ನು ಆಯೋಜಿಸಲಾಗಿದ್ದು, ಸಿರಾಜುದ್ದೀನ್‌ ಖಾಸಿಮಿ ಪತ್ತನಾಪುರಂ ಅವರ ಉಪನ್ಯಾಸದ ಬಳಿಕ ಮಸೀದಿಗೆ ಅರ್ಪಣೆಯಾಗಿದ್ದ ಹಲಸನ್ನು

ಬಂಟ್ವಾಳ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ Read More »

ಕರಾವಳಿ

ಹಣದೋಚಿ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.25. ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಹಣದ ಕಟ್ಟನ್ನು ಕಿತ್ತೊಯ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಈತನನ್ನು ಬಂಧಿಸಿ, ಆತನಲ್ಲಿದ್ದ 9 ಲಕ್ಷ ರೂ.ವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಮುಸ್ತಾಫಾ ಈ ಹಿಂದೆ ಹಾಸನ ಜಿಲ್ಲೆಯ ಬೇಲೂರು

ಹಣದೋಚಿ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವೆನ್ ಲಾಕ್ ಆಸ್ಪತ್ರೆಯಲ್ಲಿ 20 ಲಕ್ಷ ರೂ.ವೆಚ್ಚದ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ      ➤ ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ವೇದವ್ಯಾಸ್

ವೆನ್ ಲಾಕ್ ಆಸ್ಪತ್ರೆಯಲ್ಲಿ 20 ಲಕ್ಷ ರೂ.ವೆಚ್ಚದ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ      ➤ ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ Read More »

ಕರಾವಳಿ

ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು

ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ Read More »

ಕರಾವಳಿ

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.25. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ ಎಂಡಿಎಂಐ ಸಹಿತ ಮಾದಕ ವಸ್ತುವನ್ನು ಪೊಲೀಸ್ ಅಧಿಕಾರಿಗಳು ನಾಶ ಪಡಿಸಿದ್ದಾರೆ. ಜಿಲ್ಲೆಯ ಮೂಲ್ಕಿಯ Ramky Energy Environment Ltd ಎಂಬಲ್ಲಿ ಗಾಂಜಾ ಮತ್ತು ಎಂಡಿಎಂಐ ಅನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಾಶ ಪಡಿಸಲಾಯಿತು. ಸೆನ್ ಪೊಲೀಸ್ ಠಾಣೆ, ಕೊಣಾಜೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಸುರತ್ಕಲ್, ಬಜಪೆ, ಕಂಕನಾಡಿ ಪೊಲೀಸ್

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..! Read More »

ಕರಾವಳಿ
Scroll to Top