Mangalore

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಕೇರಳ ಮೂಲದ ದಂತ ವೈದ್ಯ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದ ಎಂದು ಆರೋಪಿಸಲಾಗಿದೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು…! Read More »

ಕರಾವಳಿ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಮಂಗಳೂರಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು ಸ್ಥಳೀಯ ಬಿಜೆಪಿ ಕಾರ್ಯಕರ್ತರಾಗಿದ್ದರು. ನಂತರ ನೀರ್ಮಾರ್ಗದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಚುಲರ್ ಆಗಿರುವ ಮೊಗರು ವಿಮಾ ಏಜೆಂಟ್ ಆಗಿ ಕೆಲಸ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ Read More »

ಕರಾವಳಿ

ಮಂಗಳೂರಿನಲ್ಲಿ ಇಂದು ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಡೆಯಲಿದೆ. ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌, ಸಚಿವರಾದ ಎಸ್‌.ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಸಹಿತ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮಂಗಳೂರಿನಲ್ಲಿ ಇಂದು ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ Read More »

ಕರಾವಳಿ

ಮಂಗಳೂರು: ಜುಗಾರಿ ಆಡುತ್ತಿದ್ದ ಮೂವರ ಬಂಧನ ➤ 75 ಸಾವಿರ ಮೌಲ್ಯದ ಸ್ವತ್ತು ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಬಂಧಿತರನ್ನು ಪ್ರವೀಣ್‌ (33), ಮನೋಜ್‌ (43), ರಾಕೇಶ್‌ (47) ಎಂದು ಗುರುತಿಸಲಾಗಿದೆ. ಇನ್ನು ನಗರದ ಜ್ಯೋತಿ ಜಂಕ್ಷನ್‌ ಬಳಿ ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ 3000 ನಗದು, ಎರಡು ಮೊಬೈಲ್‌, ಎರಡು ಕಂಪ್ಯೂಟರ್‌ ಸೇರಿದಂತೆ 75 ಸಾವಿರ

ಮಂಗಳೂರು: ಜುಗಾರಿ ಆಡುತ್ತಿದ್ದ ಮೂವರ ಬಂಧನ ➤ 75 ಸಾವಿರ ಮೌಲ್ಯದ ಸ್ವತ್ತು ವಶ Read More »

ಕರಾವಳಿ

ಮನೆಯಂಗಳಕ್ಕೆ ಬರೋಬ್ಬರಿ 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.16. ದುರ್ಗ ಗ್ರಾಮದಲ್ಲಿ ಪರಿಸರದಲ್ಲಿ ಹರಿದಾಡುತ್ತಾ ನಾಗರಿಕ ನಿದ್ದೆಗೆಡಿಸಿದ, 17 ಅಡಿ ಉದ್ದದ ಕಾಳಿಂಗವೊಂದನ್ನು ಉರಗಪ್ರೇಮಿ ಅನಿಲ್ ಪ್ರಭು ಸೆರೆಹಿಡಿದ್ದಾರೆ. ಕಳೆದ ಕೆಲ ದಿನಗಳಿಂದ ಇದೇ ಪರಿಸರದಲ್ಲಿ ಕಾಣಸಿಕ್ಕಿರುವ ಕಾಳಿಂಗವನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖಾಧಿಕಾರಿಗೆ ಗ್ರಾಮಸ್ಥರು ದುಂಬಾಲು ಬಿದ್ದಿದ್ದರು. ಗ್ರಾಮಸ್ಥರ ಕೋರಿಕೆ ಮನ್ನಣೆ ಸಿಗದೆ ಇದ್ದಾಗ ಮಂಗಳವಾರ ರಾತ್ರಿ ಸುಮಾರು 10ಗಂಟೆಯ ವೇಳೆಗೆ ಕಾಳಿಂಗ ಕಾಣಸಿಕ್ಕಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಭಯ ಹೆಚ್ಚುಮಾಡಲು ಕಾರಣವಾಗಿತ್ತು.  

ಮನೆಯಂಗಳಕ್ಕೆ ಬರೋಬ್ಬರಿ 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ Read More »

ಕರಾವಳಿ

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.16. ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎನ್ನಲಾಗಿದೆ. ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು. ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು Read More »

ಕರಾವಳಿ

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.15. ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್- ಬಂಟಿಂಗ್ಸ್ ಮತ್ತು ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು

ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top