Mangaluru

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 16.  ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ. ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಮಧ್ಯಾಹ್ನ […]

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 16. ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಈ ರೀತಿ ಅಕ್ರಮ

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ನ. 16. ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಸ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ

(ನ್ಯೂಸ್ ಕಡಬ) newskadaba.com ನ. 16. ವೈದ್ಯಕೀಯ ಶಿಕ್ಷಣದಲ್ಲಿ 25 ವರ್ಷಗಳ ಸ್ಮರಣಾರ್ಥ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಶುಕ್ರವಾರದಂದು ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿತು. ಈ ಸಂದರ್ಭದಲ್ಲಿ, ಫಾದರ್ ಮುಲ್ಲರ್ ಅವರು ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವಾಗಲು ಪ್ರಕ್ರಿಯೆಯ ಪ್ರಾರಂಭವನ್ನು ಗಣ್ಯರು ಅನುಮೋದಿಸಿದರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲೊ, ಎಫ್‌ಎಂಎಂಸಿಯ ಆಡಳಿತಾಧಿಕಾರಿ ಫಾ.ಅಜಿತ್ ಬಿ ಮೆನೆಜಸ್, ಡೀನ್ ಡಾ.ಆಂಟೋನಿ ಸಿಲ್ವನ್ ಡಿಸೋಜಾ ಮತ್ತು ಬಿಷಪ್

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ Read More »

ಕರಾವಳಿ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್ Read More »

ಕರಾವಳಿ

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು,

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪುನಾರಾವರ್ತಿತ ಹಾಸ್ಯ ಶೈಲಿಗೆ ಹಚ್ಚಿಕೊಂಡಿದ್ದ ಪ್ರೇಕ್ಷಕರಿಗೆ ವಿನೂತನ ಹಾಗೂ ವಿಭಿನ್ನ ಹಾಸ್ಯದ ಮೂಲಕ ಜನಮನಗೆದ್ದ ದೈಜಿವರ್ಲ್ಡ್ ವಾಹಿನಿಯ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿಯು ಭಾನುವಾರ ನವೆಂಬರ್ 10 ರಿಂದ ಆರಂಭವಾಗಲಿದೆ. ಕಲಾವಿದ ಜೋಡಿಗಳಾದ ಅರವಿಂದ ಬೋಳಾರ್ ಹಾಗೂ ವಾಲ್ಟರ್ ನಂದಳಿಕೆ ಜುಗಲ್ ಬಂಧಿಯು ಪ್ರೇಕ್ಷಕರ ಬೇಡಿಕೆಯ ಮೇರೆಗೆ ವಿದೇಶಗಳ ವೇದಿಕೆಯಲ್ಲೂ ಕರಾವಳಿ ಕರ್ನಾಟಕದ ಹೆಸರನ್ನು ರಾರಾಜಿಸುವಂತೆ ಮಾಡಿದ್ದಾರೆ. ಎಳೆ ಮಕ್ಕಳಿದಂದ ಹಿಡಿದು ವಯೋವೃದ್ದರ ತನಕ ಎಲ್ಲರ ಮನಮೆಚ್ಚಿದ

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ Read More »

ಕರಾವಳಿ
Scroll to Top