Mangaluru

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.  

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಭಾರತೀಯ ಹಜ್ ಕಮಿಟಿ ಮೂಲಕ 2025ರಲ್ಲಿ ಹಜ್ ಯಾತ್ರೆ ಕೈಗೊಳ್ಳಲು ರಾಜ್ಯ ಹಜ್ ಸಮಿತಿ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ. ಆಯ್ಕೆಯಾದ ಎಲ್ಲಾ ಯಾತ್ರಿಕರು ಆರಂಭದಲ್ಲಿ ಮುಂಗಡ ಹಜ್ ಮೊತ್ತ ರೂ.1,28,000, ಮರುಪಾವತಿಸಲಾಗದ ಸಂಸ್ಕರಣಾ ಶುಲ್ಕ 300 ರೂ. ಮತ್ತು ಇತರ ವೆಚ್ಚಗಳಿಗೆ 2,000 ರೂ. ಸೇರಿದಂತೆ ಒಟ್ಟು 1,30,300 ರೂ.ಗಳನ್ನು 2024 ಅಕ್ಟೋಬರ್ 8 ರಿಂದ ಅ.21ರೊಳಗಾಗಿ ಪಾವತಿಸಬೇಕಾಗಿದೆ. 1,30,300 ರೂ.

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ Read More »

ಕರಾವಳಿ

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ Read More »

ಕರಾವಳಿ
crime, arrest, suspected

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ. ಬಂಧಿತರು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..! Read More »

ಕರಾವಳಿ

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 05.  ದಕ್ಷಿಣ ಭಾರತದ ಅತಿ ದೊಡ್ಡ ಹೆಸರಾಂತ, ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಮಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಮಂಗಳೂರಿನ ಚಿಲಿಂಬಿಯ Aura the place ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾದ ವೈಟ್ ಗೋಲ್ಡ್ ಶಾಖೆಯನ್ನು ಸೇಲ್ಸ್ ಹೆಡ್ ಮಿಥುನ್ ಶೆಟ್ಟಿ ಉದ್ಘಾಟಿಸಿದರು. ಗ್ರಾಹಕರಿಗೆ ಚಿನ್ನ ಮಾರಾಟ ಮಾಡಲು ಹಾಗೂ ಅಡ ಇಟ್ಟಿರುವ ಚಿನ್ನ ಬಿಡಿಸಲು ವೈಟ್ ಗೋಲ್ಡ್, ಉತ್ತಮ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 37 ವೈಟ್ ಗೋಲ್ಡ್

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ Read More »

ಕರಾವಳಿ

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 04. 2024-25ನೇ ಸಾಲಿನಲ್ಲಿ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ಅಕ್ಟೋಬರ್ 06 ರಂದು ಬೆಳಗ್ಗೆ 10.30 ರಿಂದ ಮಧಾಹ್ನ 2.45ರ ವರೆಗೆ ವೇಳಾಪಟ್ಟಿ ನಿಗದಿಯಾಗಿದ್ದು, ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ https://sevasindhu.karnataka.gov.in/ minorityhallticket_app/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣhttps://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ Read More »

ಕರಾವಳಿ

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಮಂಗಳೂರು, ಅ.04.  ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ Read More »

ಕರಾವಳಿ
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30. ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದ್ದಾರೆ. ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ರವಿವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ’ ತುಳು

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ Read More »

ಕರಾವಳಿ
Scroll to Top