ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ
(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 07. ಶತಮಾನ ಕಂಡ ಕಡಬ ತಾಲೂಕಿನ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣವಾಗಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿನ ಎಲ್ಲಾ ತರಗತಿ ಕೊಠಡಿಗಳ ಬಳಕೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶಾಲಾ ಕಟ್ಟಡದ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು, ಮೇಲ್ಛಾವಣಿಯ ಭಾಗಗಳು ಉದುರುತ್ತಿರುವುದು ಹಾಗೂ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಣ ಇಲಾಖೆಯ […]








