micro finance

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com ಸೆ.06 ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಮೃತ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು. […]

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 1 ಲಕ್ಷ ಜನರು ಗ್ರಾಮಗಳ ತೊರೆದಿದ್ದು, 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ಹೇಳಿದರು. ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್ Read More »

ಕರ್ನಾಟಕ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ತಡೆ) ಸುಗ್ರೀವಾಜ್ಞೆ 2025 ರ ಪರಿಷ್ಕೃತ ಕರಡನ್ನು ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿದ್ದು, ಕಾನೂನು ಉಲ್ಲಂಘನೆಗಾಗಿ ದೀರ್ಘಾವಧಿ ಶಿಕ್ಷೆಯನ್ನು ಒಳಗೊಂಡಿದೆ. ಗರಿಷ್ಠ ಶಿಕ್ಷೆಯ ಪ್ರಮಾಣವನ್ನು ಮೂರು ವರ್ಷದಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಶಿಕ್ಷೆಯ ಅವಧಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ Read More »

ಕರ್ನಾಟಕ

ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..!

(ನ್ಯೂಸ್ ಕಡಬ) newskadaba.com, ಫೆ.01 ಬೆಂಗಳೂರು: ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು 2-3 ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್​​​ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕರು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಎಲ್ಲ ಜಿಲ್ಲಾಧಿಕಾರಿ ಮತ್ತು ಎಸ್​ಪಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚಿಂತನೆ

ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..! Read More »

ಕರ್ನಾಟಕ
Scroll to Top