mla

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ!

(ನ್ಯೂಸ್‌ ಕಡಬ) newskadaba.com,  ಸೆ.09: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯ ಆರೋಪದಲ್ಲಿ ಬಂಧಿತರಾಗಿರುವ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ತನಿಖೆ ತೀವ್ರತೆಯನ್ನು ಪಡೆದುಕೊಂಡಿದ್ದು, ಇತ್ತೀಚೆಗೆ ಚಳ್ಳಕೆರೆಯಲ್ಲಿ ನಡೆಸಿದ ದಾಳಿಯಲ್ಲಿ ಇ.ಡಿ ಅಧಿಕಾರಿಗಳು ಸುಮಾರು ರೂ. 24 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಗಟ್ಟಿಗಳನ್ನು ಜಪ್ತಿ ಮಾಡಿದ್ದಾರೆ. ಈ ಜಪ್ತಿಯೊಂದಿಗೆ ಪ್ರಕರಣದಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿರುವ ಒಟ್ಟು ಅಕ್ರಮ ಆಸ್ತಿ ಮೌಲ್ಯವು ರೂ.100 ಕೋಟಿಗೂ ಮೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ! Read More »

ಕರಾವಳಿ

ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಕೆ ಕವಿತಾ ರಾಜೀನಾಮೆ

(ನ್ಯೂಸ್‌ ಕಡಬ) newskadaba.com, ಸೆ. 03: ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಂಡಿದ್ದ ಕೆ ಕವಿತಾ ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು. ತಮ್ಮನ್ನು ಬಿಆರ್​ಎಸ್ ಪಕ್ಷದಿಂದ ದಿಢೀರನೇ ಉಚ್ಛಾಟನೆ ಮಾಡುವ ಕ್ರಮದಿಂದ ಬಹಳ ನೋವಾಯಿತು ಎಂದು ಕವಿತಾ

ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಕೆ ಕವಿತಾ ರಾಜೀನಾಮೆ Read More »

ಕರಾವಳಿ

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 28. ಪುತ್ತೂರು ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದ್ದು ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಮುಂದಾಳು ಮೋಹನ್ ಗುರ್ಜಿನಡ್ಕ ನೇತೃತ್ವದಲ್ಲಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ. ಪ್ರತೀ ದಿನ ಬೆಳಿಗ್ಗೆ 8.30ರ ವೇಳೆಗೆ ಕಬಕಕ್ಕೆ ಬರುವ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆಯ ಕಾರಣವಿಟ್ಟು ಬೈಕ್ ಸವಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೋಷಕರು ಬೆಳಗ್ಗೆ ಶಾಲಾ ಮಕ್ಕಳನ್ನು ಬಸ್ಸಿಗೆ ಬಿಡಲು

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು Read More »

ಕರಾವಳಿ, ಕರ್ನಾಟಕ

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.   ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಇಲ್ಲಿನ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿರುವಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಮುಂಬಯಿಯ ಜಿಯೋ ಕನ್ವೆನ್ಶನ್ ಸೆಂಟರ್ ನಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಭಾಗವಹಿಸಿದರು. ಈ ಸಮ್ಮೇಳನದಲ್ಲಿ ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧೆಡೆಯಿಂದ ಸುಮಾರು‌ 2000 ಮಂದಿ ಸೇರಿದಂತೆ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮಾವೇಶಕ್ಕೆ ಜೂನ್‌ 17ರ ಶನಿವಾರ ತೆರೆ ಬೀಳಲಿದೆ.

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ Read More »

ಕರಾವಳಿ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಶಕುಂತಲಾ ಶೆಟ್ಟಿ ► ಬಿಜೆಪಿ ಸೇರಲಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.26. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ನಾನು ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಪುತ್ತೂರು ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಶಾಸಕಿಯಾಗಿರುವ ಶಕುಂತಲಾ ಶೆಟ್ಟಿಯವರು ಪುನಃ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರಿದ್ದು, ಪಕ್ಷ ಬಿಡುವ ಪ್ರಶ್ನೆಯೇ

ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಶಕುಂತಲಾ ಶೆಟ್ಟಿ ► ಬಿಜೆಪಿ ಸೇರಲಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಶಕುಂತಲಾ ಶೆಟ್ಟಿ Read More »

ಕರಾವಳಿ
Scroll to Top