mlc election

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ […]

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

ಎಂಎಲ್ ಸಿ ಉಪಚುನಾವಣೆ ➤ ಶೆಟ್ಟರ್, ತಿಪ್ಪಣ್ಣ, ಬೋಸರಾಜು ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 24. ವಿಧಾನಪರಿಷತ್​​ ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌.ಎಸ್ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಉಪಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿತ್ತು, ಆದರೆ, ಕಣದಲ್ಲಿ ಮೂವರೇ ಇದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಇನ್ನು. ಜೂನ್ 30ರಂದು ಚುನಾವಣೆ ನಿಗದಿಯಾಗಿತ್ತು.

ಎಂಎಲ್ ಸಿ ಉಪಚುನಾವಣೆ ➤ ಶೆಟ್ಟರ್, ತಿಪ್ಪಣ್ಣ, ಬೋಸರಾಜು ಅವಿರೋಧ ಆಯ್ಕೆ Read More »

ಕರ್ನಾಟಕ
Scroll to Top