ಅಪಘಾತದಲ್ಲಿ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ‘ಪಿಎಂ ರಾಹತ್’ಗೆ ದಕ್ಷಿಣ ಕನ್ನಡ ಮಾದರಿಯಾಗಲಿ ಯೋಜನೆ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ಚೌಟ ಖಡಕ್ ಸೂಚನೆ
(ನ್ಯೂಸ್ ಕಡಬ) newskadaba.com ಜು. 27. ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ ಜತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಆ ಮೂಲಕ, ಪಿಎಂ ರಾಹತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡವನ್ನು ಮಾದರಿ ಜಿಲ್ಲೆಯಾಗಿಸುವಂತೆ ಅವರು ಮನವಿ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ […]

