Muda case

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ […]

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ರಾಜ್ಯಾದ್ಯಂತ ಆ. 19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಂದು ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವಂತ ಕಾಂಗ್ರೆಸ್, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ Read More »

ಕರ್ನಾಟಕ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಕೇಸ್ ಗೆ ಸಂಬಂಧಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ. ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ

ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ Read More »

ಕರ್ನಾಟಕ

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿಕೆಶಿ ನೇತೃತ್ವದ ಸಚಿವರ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ

CM ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ- ರಾಜ್ಯಪಾಲರನ್ನು ಭೇಟಿಯಾಗಲಿರುವ ಡಿಸಿಎಂ ನೇತೃತ್ವದ ಸಚಿವರ ನಿಯೋಗ Read More »

ಕರ್ನಾಟಕ

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರವಾಗಿದ್ದು, ಅಲ್ಲದೇ ರಾಜ್ಯಪಾಲರ ಈ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.   ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಇದೊಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ.‌ ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ.‌

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ
Scroll to Top