Murder

Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. […]

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ..29: ಅಕ್ಟೋಬರ್ 24 ರಂದು ಕನ್ನಿಕಾ ಲೇಔಟ್‌ನಲ್ಲಿರುವ ನಿವಾಸದಲ್ಲಿ ತನ್ನ ಏಳು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ದರ್ಶನ್ ಎಂಬಾತನನ್ನು ಸೋಮವಾರ (ಅಕ್ಟೋಬರ್ 27) ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಸಿರಿ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ನಂತರ ದರ್ಶನ್ ಪತಿಯಿಂದ ದೂರಾಗಿದ್ದ ಶಿಲ್ಪಾಳನ್ನು ಮದುವೆಯಾಗಿದ್ದ. ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ : ಮದುವೆಯಾದ ನಾಲ್ಕೇ ತಿಂಗಳಲ್ಲಿ ಹೆಂಡತಿಯನ್ನು ಕೊಂದು ಮಂಚದೊಳಗಿಟ್ಟು ಗಂಡ ಪರಾರಿ

(ನ್ಯೂಸ್‌ ಕಡಬ) newskadaba.com,  ಅ.09  ಬೆಳಗಾವಿ: ಪತ್ನಿಯನ್ನು ಕೊಂದು ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ (20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 4 ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. 3 ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್

ಬೆಳಗಾವಿ : ಮದುವೆಯಾದ ನಾಲ್ಕೇ ತಿಂಗಳಲ್ಲಿ ಹೆಂಡತಿಯನ್ನು ಕೊಂದು ಮಂಚದೊಳಗಿಟ್ಟು ಗಂಡ ಪರಾರಿ Read More »

ಕರಾವಳಿ

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com, ಆ.26 ಕಾರ್ಕಳ:  ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com, ಆ.20: ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಕೇರಳದ ಕಣ್ಣೂರು ಜೆಲ್ಲೆ ಕುಟ್ಟಿಯತ್ತೂರ್‌ಬಳಿಯ ಉರುವಾಂಚಲ್‌ನಲ್ಲಿ ನಡೆದಿದೆ. ಪ್ರವೀಣಾ(39) ಕೊಲೆಯಾದ ಮಹಿಳೆ ದುಷ್ಕರ್ಮಿ ನೀರು ಕೇಳುವ ನೆಪದಲ್ಲಿನ ಮನೆಗೆ ನುಗ್ಗಿ ಆಕೆಯನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪ್ರವೀಣಾ ಅವರ ಮಾವ,ಅತ್ತೆ ಹಾಗೂ ಅವರ ಅತ್ತಿಗೆಯ ಮಕ್ಕಳು ಮನೆಯಲ್ಲಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಪ್ರವೀಣಾ ಅವರ ಪತಿ ಅಜೀಜ್‌ ವಿದೇಶದಲ್ಲಿದ್ದಾರೆ.ಜಿಜೇಶ್‌ ಎಂಬಾತ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್

(ನ್ಯೂಸ್‌ ಕಡಬ) newskadaba.com ಜು.22: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್‌ ಜಗದೀಶ್ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್‌ ಕೊಟ್ಟಿರುವುದು ಬೆಳಕಿಗೆ ಬಂದಿದೆ.   ಪ್ರಕರಣದ ಪ್ರಮುಖ ಆರೋಪಿ ಜಗ್ಗ ಡಿಂಪಲ್‌ ಕ್ವೀನ್‌ಗೆ ಸೀರೆ ಹಾಗೂ ಗೋಲ್ಡ್ ಗಿಫ್ಟ್ ನೀಡಿರುವ ಫೋಟೋ ವೈರಲ್‌ ಆಗಿದೆ. ರವಿ ಬೋಪಣ್ಣ ಸಿನಿಮಾ ಶೂಟಿಂಗ್‌ ವೇಳೆ ಜಗ್ಗ ನಟಿಗೆ ಈ

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್ Read More »

ಕರ್ನಾಟಕ

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ!

(ನ್ಯೂಸ್ ಕಡಬ) newskadaba.com, ಜು. 10. ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ  ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ !

(ನ್ಯೂಸ್‌ ಕಡಬ) newskadaba.com ಜು.01: ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ 28 ವರ್ಷ ವಯಸ್ಸಿನ ರಾಘವೇಂದ್ರ ಜಾಧವ್ ಮತ್ತು 26ರ ಪ್ರಾಯದ ರಂಜೀತಾ ಚೋಬರಿ ಮೃತ ಪ್ರೇಮಿಗಳು. ಈ ಇಬ್ಬರು ಆಟೋದಲ್ಲೇ ಸಾವಿಗೆ ಶರಣಾಗಿದ್ದಾರೆ. ಈ ಪ್ರೇಮಿಗಳು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದಕ್ಕೆ ಯುವತಿ ಪೋಷಕರ ವಿರೋಧವಿತ್ತು. ಹಾಗಾಗಿ, 15

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ ! Read More »

ಕರಾವಳಿ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್
Scroll to Top