ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ
(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.19, ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ ಗಾಯಗೊಂಡವರು. ಚಲುವರಾಜು ಮತ್ತು ನಾಗರಾಜು ಮನೆ ಅಕ್ಕಪಕ್ಕದಲ್ಲಿದ್ದು, ಮನೆಯ ಸಮೀಪ ಓಡಾಡುವ ಜಾಗದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಆದರೆ ಕಳೆದ ರಾತ್ರಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಚಲುವರಾಜು ಪಕ್ಕದ ಮನೆಯ […]
ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »
ಕರ್ನಾಟಕ






