Mysore

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್‌ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು. ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಸ್ಥಳಗಳಲ್ಲಿ […]

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.23  ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಶಿವಾರ್ಚಕರ ನಿಧನದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ. ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ ಹಿನ್ನಲೆ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ದೇವಿ ದರ್ಶನಕ್ಕೆ

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ ಉದ್ಘಾಟನೆ ವೇಳೆ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

(ನ್ಯೂಸ್‌ ಕಡಬ) newskadaba.com,  ಸೆ.02: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.  

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮೈಸೂರು, ಆ. 19. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಗೊಂದಲವನ್ನು ತಡೆಗಟ್ಟಲು ಮುಂದಾಗಿರುವ ಜಿಲ್ಲಾಡಳಿತ, ಈ ಬಾರಿ 11,600 ಆಸನಗಳ ಕಡಿತಕ್ಕೆ ಮುಂದಾಗಿದೆ.   ಹೌದು, ಕಳೆದ ಬಾರಿ 59 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಆಸನಗಳ ಸಂಖ್ಯೆ 48 ಸಾವಿರದ ಆಸುಪಾಸಿನಲ್ಲಿ ಇರಲಿದೆ ಎನ್ನಲಾಗಿದೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಅವಘಡದಿಂದ ಎಚ್ಚೆತ್ತಿರುವ ಸರಕಾರ

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ Read More »

ಕರ್ನಾಟಕ

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ

(ನ್ಯೂಸ್‌ ಕಡಬ) newskadaba.com, ಆ.07: ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ. ಪುರದಕಟ್ಟೆ ಮಾರ್ಗವಾಗಿ ನಂಜನಗೂಡಿಗೆ ಭತ್ತ ಹೊತ್ತೊಯ್ಯುತ್ತಿದ್ದ ಲಾರಿ ಸೇತುವೆ ಮೇಲೆ ಸಾಗುತ್ತಿದ್ದಾಗಲೇ ಹಠಾತ್ ಆಗಿ ಸೇತುವೆ ಕುಸಿದಿದೆ.  ಲಾರಿಯಲ್ಲಿದ್ದ ಲೋಡರ್ಸ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬಿನಿ ಬಲದಂಡೆ ನಿರ್ಮಾಣವಾದಾಗ ಕಟ್ಟಿದ್ದ ಸೇತುವೆ ಇದ್ದಾಗಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ‌ಲಾರಿಯನ್ನು ಮೇಲೆತ್ತುವುದರ

ಮೈಸೂರು: ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.05: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಗಜಪಡೆಯ ಮೊದಲ ಹಂತದ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪೂಜೆ ಸಲ್ಲಿಸಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ ಮೈಸೂರಿಗೆ ಬೀಳ್ಕೊಡಲಾಗಿದೆ. ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಆರಂಭವಾಗಿದೆ. ಈ ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ Read More »

ಕರ್ನಾಟಕ

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top