Mysore

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 06. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಈಗಾಗಲೇ ಆರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ಗಜಪಡೆಯು ಆ. 21ರಂದು ಅರಮನೆಗೆ ಆಗಮಿಸಿ ಈಗಾಗಲೇ ತಾಲೀಮಿನಲ್ಲಿ ನಿರತವಾಗಿವೆ. ಇದೀಗ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 2ನೇ ತಂಡ ಐದು ಆನೆಗಳು ವಿವಿಧ ಶಿಬಿರಗಳಿಂದ ಅರಮನೆಗೆ ಆಗಮಿಸಿದ್ದು, ಪೂಜೆ ಸಲ್ಲಿಸಿ ಸ್ವಾಗತಿಸಲಾಗಿದೆ. ತಂಡದ ಐದು ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಪ್ರಶಾಂತ, ಹಿರಣ್ಯಾ, ಮಹೇಂದ್ರ, ದೊಡ್ಡ ಹರವೇಲಕ್ಷ್ಮೀ, ಸುಗ್ರೀವಾ ಆನೆಗಳು ಎರಡನೇ […]

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ Read More »

ಕರಾವಳಿ
crime, arrest, suspected

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಆ. 28. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ತೆಗದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತನನ್ನು ಶಿವಸ್ವಾಮಿ ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮರೆ ಮಾಚಿ ಸಾಗಾಣಿಕೆ ಮಾಡುತ್ತಿದ್ದಾಗ, ಗಸ್ತು ನಿರತರಾಗಿದ್ದ ಅಬಕಾರಿ ಸಿಬ್ಬಂದಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಿವಸ್ವಾಮಿಯಿಂದ 2,918 ರೂ ಮೌಲ್ಯದ ಮದ್ಯ ಹಾಗೂ 70 ಸಾವಿರ ರೂ

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 23.  ಸಾಂಸ್ಕೃತಿಕ ನಗರಿ ಮೈಸೂರು ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ,

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ Read More »

ಕರ್ನಾಟಕ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ. 14. ಈ ವರ್ಷದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಅವಕಾಶವನ್ನು ಕಲ್ಪಿಸುವ ಮೂಲಕ ಸರಕಾರವು ಗುಡ್ ನ್ಯೂಸ್ ನೀಡಿದೆ.   ಹೀಗಾಗಿ ಇನ್ನುಮುಂದೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಟಿಕೆಟ್ ಗಾಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ Read More »

ಕರ್ನಾಟಕ

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರುವ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ರಾಜ್ಯ ಸರಕಾರ ಗುರುವಾರದಂದು ತೀರ್ಮಾನಿಸಿದೆ. ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ Read More »

ಕರ್ನಾಟಕ

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 17. ಶಾಲೆಯ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ. ಬಂಧಿತನನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂದು ಗುರುತಿಸಲಾಗಿದೆ.  ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ವಿಷಯ ತಿಳಿದ ಪೋಷಕರು ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.  

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ

(ನ್ಯೂಸ್ ಕಡಬ)newskadaba.com ಹುಣಸೂರು, ಜು.22. ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಭೇಟೆಯಾಡಿ, ಜೋಳದ ಹೊಲದಲ್ಲಿ ಬಚ್ಚಿಟ್ಟಿದ್ದ ಮಾಂಸ, ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪ್ರದೀಪ್ ಅಲಿಯಾಸ್ ಕುಂಡ, ಮಧು ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕಿಯನ್ನು ಗಂಭೀರವಾಸ್ಥೆಗೆ ತಳ್ಳಿದ ವೀಲಿಂಗ್ ಗ್ಯಾಂಗ್ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮೈಸೂರು, ಜು. 21. ದಿನದಿಂದ ದಿನಕ್ಕೆ ಪುಂಡರ ಹಾವಳಿ ಹೆಚ್ಚುತ್ತಿದ್ದು, ರಸ್ತೆಗಳಲ್ಲಿ ವೀಲಿಂಗ್ ಮಾಡುವ ಮೂಲಕ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಅಂತಹದೇ ಘಟನೆಯೊಂದು ವರದಿಯಾಗಿದ್ದು, ವೀಲಿಂಗ್ ಮಾಡುತ್ತಿದ್ದ ಯುವಕರು ಶಿಕ್ಷಕಿಯೋರ್ವರ ಸ್ಕೂಟರ್ ಗೆ ಢಿಕ್ಕಿ ಹೊಡೆದು ಶಿಕ್ಷಕಿ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾರೆ. ಶಿಕ್ಷಕಿ ಎಂದಿನಂತೆ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಗಾಯತ್ರಿಪುರಂ ಚರ್ಚ್​ ಬಳಿ ಕೆಟಿಎಂ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ ಮೂಲಕ ವೀಲಿಂಗ್ ಮಾಡುತ್ತಾ ಬಂದ ಪುಂಡರು ಎದುರಿನಿಂದ ಬರುತ್ತಿದ್ದ ಸ್ಕೂಟರ್​ಗೆ

ಶಿಕ್ಷಕಿಯನ್ನು ಗಂಭೀರವಾಸ್ಥೆಗೆ ತಳ್ಳಿದ ವೀಲಿಂಗ್ ಗ್ಯಾಂಗ್ – ದೂರು ದಾಖಲು Read More »

ಕರ್ನಾಟಕ

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು

(ನ್ಯೂಸ್ ಕಡಬ) newsksdaba.com ಪಿರಿಯಾಪಟ್ಟಣ, ಜು. 18. ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಮುದಾಸೀರ್, ಮುಜಾಯಿದ್ ಹಾಗೂ ಅಹ್ಮದ್​​​ ಪಾಷಾ ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top