national

crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.    

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

‘ರದ್ದಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು’- ಕಂಗನಾ ರಣಾವತ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಭಾರತೀಯ ಜನತಾ ಪಕ್ಷದ ನಾಯಕಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳ ಸಂಬಂಧ ನೀಡಿದ ಹೇಳಿಕೆಯನ್ನು ಕೇಂದ್ರದಲ್ಲಿ ಆಡಳಿತಾರೂಢ ಪಕ್ಷವೇ ಅಲ್ಲಗಳೆದ್ದಿದೆ. ರೈತರ ಪ್ರತಿಭಟನೆ ಬಳಿಕ ರದ್ದುಪಡಿಸಲಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಹೇಳಿಕೆ ನೀಡುವ ಮೂಲಕ ಕಂಗನಾ ರಣಾವತ್ ರೈತರ ಕೆಂಗಣ್ಣಿಗೆ ಗುರಿಯಾಗಿದ್ದರು. “ರೈತರು ಸ್ವತಃ ತಾವೇ ಈ ಬೇಡಿಕೆ ಮುಂದಿಡಬೇಕು” ಎಂದು ಕಂಗನಾ ಹೇಳಿದ್ದಾರೆ.

‘ರದ್ದಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು’- ಕಂಗನಾ ರಣಾವತ್ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ ಚುನಾವಣೆ: 2ನೇ ಹಂತದ ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 25. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ 26 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. 40 ವಿಧಾನಸಭಾ ಸ್ಥಾನಗಳಿಗೆ ಮೂರನೇ ಹಂತದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದ್ದು,

ಜಮ್ಮು-ಕಾಶ್ಮೀರ ಚುನಾವಣೆ: 2ನೇ ಹಂತದ ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ದೇಶದಲ್ಲಿ ಆಧಾರ್‌ ನಷ್ಟೇ ಇನ್ನೊಂದು ಪ್ರಮುಖ ಗುರುತಿನ ಚೀಟಿ ಎಂದರೆ ಅದು ಪ್ಯಾನ್‌ ಕಾರ್ಡ್‌. ಪರ್ಮನೆಂಟ್‌ ಅಕೌಂಟ್‌ ನಂಬರ್‌ ಅನ್ನು ದೇಶದಲ್ಲಿ ಇದುವರೆಗೆ ಕಡ್ಡಾಯಗೊಳಿಸದಿದ್ದರೂ ಆರ್ಥಿಕ ವ್ಯವಹಾರಗಳಿಗೆ ಅತ್ಯಗತ್ಯ ದಾಖಲೆ ಎನಿಸಿಕೊಂಡಿದೆ. ಆದಾಯ ತೆರಿಗೆ ಇಲಾಖೆ ನೀಡುವ 10 ಅಂಕಿಗಳ ವಿಶಿಷ್ಟ ಗುರುತಿನ ಚೀಟಿ ಮುಖ್ಯವಾಗುತ್ತದೆ. ಅದಾಗ್ಯೂ ನೀವು ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ ಭಾರಿ ದಂಡ ಪಾವತಿಸಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..! Read More »

ರಾಷ್ಟ್ರೀಯ ನ್ಯೂಸ್

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ

(ನ್ಯೂಸ್ ಕಡಬ) newskadaba.com  ಸೆ. 24. ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಒಂದರ ಹಿಂದೆ ಒಂದು ಕಂಪನಿಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಮಧ್ಯೆ ಹೊಸ ಹೊಸ ಕಂಪನಿಗಳು ಸೃಷ್ಟಿಯಾಗುತ್ತಿದ್ದು, ಇದೀಗ ‘ಶಂಖ್ ಏರ್’ ಎಂಬ ಏರ್ ಲೈನ್ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯವು ಅನುಮೋದನೆ ನೀಡಿದೆ. ವಿಮಾನಯಾನ ಮಹಾ ನಿರ್ದೇಶನಾಲಯದಿಂದ (ಡಿಸಿಸಿಎ) ಒಪ್ಪಿಗೆ ಮುದ್ರೆ ಪಡೆದ ಬಳಿಕ ಶಂಖ್ ಏರ್ ವಿಮಾನ ಹಾರಾಟ ಕಾರ್ಯಾರಂಭಿಸಬಹುದು. ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ನಡೆಸಲು ಮೂರು ವರ್ಷಗಳಿಗೆ ನಿರಾಕ್ಷೇಪಣ ಪತ್ರ  ನೀಡಲಾಗಿದೆ.

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೇರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯನಿರ್ವಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿ ಸ್ಥಾನಕ್ಕೆ ಕರೆತರುತ್ತಾರೆ ಎಂದು ಭಾವಿಸುತ್ತೇನೆ. ಅಲ್ಲಿಯವರೆಗೆ ಅವರ ಕುರ್ಚಿ ಸಿಎಂ ಕಚೇರಿಯಲ್ಲೇ

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ Read More »

ರಾಷ್ಟ್ರೀಯ ನ್ಯೂಸ್

ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ ಪತ್ತೆ

(ನ್ಯೂಸ್ ಕಡಬ) newskadaba.com ಪಂಜಾಬ್, ಸೆ. 23. ಬಟಿಂಡಾ ಜಿಲ್ಲೆಯಲ್ಲಿ ಹಳಿಗಳ ಮೇಲೆ ಒಂಬತ್ತು ಕಬ್ಬಿಣದ ರಾಡ್‌ಗಳು ಪತ್ತೆಯಾಗಿದ್ದು, ಸ್ವಲ್ಪ ಸಮಯದವರೆಗೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ. ಸ್ಥಳದಿಂದ ಒಂಬತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಸರ್ಕಾರಿ ರೈಲ್ವೆ ಪೋಲಿಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.    

ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಈದ್- ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ ಉಚಿತ: ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ಜಮ್ಮುಕಾಶ್ಮೀರ, ಸೆ.21. ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರದಲ್ಲಿ ಘೋಷಿಸಿದ್ದಾರೆ. ಜಮ್ಮು ಕಾಶ್ಮೀರದ ಮೆಂದಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅಬ್ದುಲ್ಲಾ, ಮುಫ್ತಿ ಮತ್ತು ನೆಹರೂ-ಗಾಂಧಿ ಕುಟುಂಬವು 90 ರ ದಶಕದಿಂದಲೂ ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರವನ್ನು ಹರಡಿದೆ. ಅದ್ರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ಕೊನೆಗೊಳಿಸಿದೆ. ಇಲ್ಲಿನ

ಈದ್- ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ ಉಚಿತ: ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top