navadehali

ನಾಳೆ ಉಪರಾಷ್ಟ್ರಪತಿ ಚುನಾವಣೆ

(ನ್ಯೂಸ್‌ ಕಡಬ) newskadaba.com,  ಸೆ.08 :  ಮುಂದಿನ ಉಪರಾಷ್ಟ್ರಪತಿ ಯಾರಾಗುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲ್ಲುವ ನಿರೀಕ್ಷೆ ಇದ್ದರೂ ಗೆಲುವಿನ ಅಂತರ ಕಡಿಮೆಯಾಗಬಹುದು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಪ್ರತಿ ಮತವನ್ನು ಕೂಡ ಲೆಕ್ಕ ಹಾಕುತ್ತಿದೆ. ಉಪರಾಷ್ಟ್ರಪತಿ ಚುನಾವಣೆಯು ರಹಸ್ಯ ಮತದಾನದ ಮೂಲಕ ನಡೆಯುತ್ತದೆ. ಹೀಗಾಗಿ ಎಲ್ಲ ಸಂಸದರು ತಮ್ಮ ಇಚ್ಛೆಯಂತೆ ಮತ ಚಲಾಯಿಸುತ್ತಾರೆ. ಹೀಗಾಗಿ ಇದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. […]

ನಾಳೆ ಉಪರಾಷ್ಟ್ರಪತಿ ಚುನಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ

(ನ್ಯೂಸ್‌ ಕಡಬ) newskadaba.com,  ಸೆ03 ತುಮಕೂರು:ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

(ನ್ಯೂಸ್‌ ಕಡಬ) newskadaba.com, ಆ.23  ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ನಡೆದ  ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆಗೆ ಅನುಮೋದಿಸಿದ್ದಾರೆ. ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್‌ಲೈನ್‌ ಗೇಮ್‌ಗಳನ್ನು ಕಾನೂನು ನಿಷೇಧಿಸುತ್ತದೆ. ಆನ್‌ಲೈನ್‌ ಗೇಮ್‌ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸಲಾಗುವುದು ಅಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷ

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com, ಆ. 22 ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶ ಮಾಡಿದ್ದಾನೆ. ಶುಕ್ರವಾರ ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ. ಬಳಿಕ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ – ಸರ್ಕಾರ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಆ.22 ನವದೆಹಲಿ : ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುವಾರ ದೃಢಪಡಿಸಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದ್ವಿಚಕ್ರ ವಾಹನಗಳ ಮೇಲೆ ಶುಲ್ಕ ವಿಧಿಸಲು ಯೋಜಿಸಿದೆ ಎಂಬ ಸಾಮಾಜಿಕ ಮಾಧ್ಯಮಗಳ ವದಂತಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008 ರ ಪ್ರಕಾರ ನಾಲ್ಕು ಚಕ್ರಗಳು ಮತ್ತು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ – ಸರ್ಕಾರ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್

(ನ್ಯೂಸ್‌ ಕಡಬ) newskadaba.com ಆ.20 ನವದೆಹಲಿ: ‘ಪಾಕಿಸ್ತಾನದೊಂದಿಗಿನ ಬಾಂಧವ್ಯ ಸಹಜ ಸ್ಥಿತಿಗೆ ತರುವ ವಿಚಾರದಲ್ಲಿ ಭಾರತಕ್ಕೆ ಇನ್ನೊಂದು ಹೆಜ್ಜೆ ಮುಂದಿಡುವ ಹಂಬಲವಿಲ್ಲ. ಇದಕ್ಕಾಗಿ ತನ್ನ ನೆಲದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ಮೊದಲ ಹೆಜ್ಜೆ ಇಡಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ನಡವಳಿಕೆಯನ್ನು ಗಮನಿಸಿದಾಗ, ಹೊಣೆಗಾರಿಕೆ ಅವರ ಮೇಲಿದೆ. ಪಾಕಿಸ್ತಾನವೇ ತನ್ನ ನೆಲದಲ್ಲಿರುವ ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು. 1950ರಲ್ಲಿ

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ,

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸಲಾಗಿದೇ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚನೆ ಮಾಡಿದೆ.

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top