ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ
(ನ್ಯೂಸ್ ಕಡಬ) newskadaba.com ಅರಂತೋಡು, ಆ. 16. 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು. 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗ 99 ಶೇಕಡಾ ಮತ್ತು ಎಸ್ಸೆಸ್ಸೆಲ್ಸಿ 97 ಶೇಕಡಾ ಫಲಿತಾಂಶ ದಾಖಲಿಸಿದೆ. […]

