ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 09. ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿಸೋಜಾ ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಡ್ಡಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿಸೋಜಾ ರವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್