news adaba

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.30 ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ . ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ- […]

ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್‌ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್‌‍ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ

(ನ್ಯೂಸ್ ಕಡಬ) newskadaba.com, ಜು. 10. ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ. ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ Read More »

ಕರ್ನಾಟಕ

ಪಾಕ್‌ ಪರ ಬೇಹುಗಾರಿಕೆ ಆರೋಪ: ಪಂಜಾಬ್‌ನ ಯೂಟ್ಯೂಬರ್‌ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ:04, ಪಾಕ್‌ ಪರ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜ್ಯೋತಿ ಮಲ್ಹೋತ್ರಾ ಬೆನ್ನಲ್ಲೇ ಇದೀಗ ಪಂಜಾಬ್‌ನ ಮತ್ತೊಬ್ಬ ಯೂಟ್ಯೂಬರ್‌ ಬಂಧಿಸಲಾಗಿದೆ. ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಚರಣೆಯ ಕೋಶ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಸ್ಟೀರ್‌ ಸಿಂಗ್‌ ಒಳಗೊಂಡ ಮಹತ್ವದ ಬೇಹುಗಾರಿಕೆ ಜಾಲವನ್ನು ಪತ್ತೆ ಹಚ್ಚಿದೆ. ಶಂಕಿತ ವ್ಯಕ್ತಿ ಪಂಜಾಬ್‌ನ ರೋಪರ್ ಜಿಲ್ಲೆಯ ರೂಪನಗರದಲ್ಲಿರುವ ಮಹ್ಲಾನ್ ಗ್ರಾಮದ ನಿವಾಸಿ. “ಜಾನ್ ಮಹಲ್” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿರುವ ಜಸ್ಬೀರ್ ಸಿಂಗ್, ಭಯೋತ್ಪಾದನಾ ಬೆಂಬಲಿತ ಬೇಹುಗಾರಿಕೆ

ಪಾಕ್‌ ಪರ ಬೇಹುಗಾರಿಕೆ ಆರೋಪ: ಪಂಜಾಬ್‌ನ ಯೂಟ್ಯೂಬರ್‌ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

(ನ್ಯೂಸ್ ಕಡಬ) newskadaba.com, ಮೇ.09: ಇಸ್ಲಾಮಾಬಾದ್: ಭಾರತದ ಸೇನಾ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದ ಪಾಕ್‌ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರಾಚಿಯ 15 ಕಡೆ ಭಾರತವು ಭಾರೀ ದಾಳಿ ನಡೆಸಿದೆ. ಐಎನ್‌ಎಸ್‌ ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌ ಮಾಡಲಾಗಿದೆ. 1971 ರ ಬಳಿಕ ಕರಾಚಿ ಮೇಲೆ ಭಾರತ ದಾಳಿ ಮಾಡಿದೆ. ಕರಾಚಿ ಬಂದರನ್ನು ಭಾರತೀಯ ನೌಕಾಪಡೆ ನಾಶಪಡಿಸಿದೆ. ಪಾಕ್ ವಿರುದ್ಧ ವಿಶ್ವದ 10ನೇ ಅತಿದೊಡ್ಡ ಹಡಗು ಐಎನ್‌ಎಸ್‌ ವಿಕ್ರಾಂತ್ ಅಖಾಡಕ್ಕಿಳಿದಿದೆ. ಯುದ್ಧನೌಕೆಗಳು ನಿಯೋಜನೆಯಾಗಿವೆ.

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌ Read More »

ಬ್ರೇಕಿಂಗ್ ನ್ಯೂಸ್

ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಮ್‌ ಘಟನೆಯ ನಂತರ ಉಗ್ರರ ವಿರುದ್ದ ಕಾರ್ಯಾಚಾರಣೆ ನಡೆಸಲು ಸೇನಾ ಪಡೆಗಳಿಗೆ ಮುಕ್ತ ಸ್ವತಂತ್ರ್ಯ ನೀಡಿರುವ ಬೆನ್ನಲ್ಲೇ, ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತ ತೆಗೆದುಕೊಂಡಿರುವ ಕೆಲವು ಬಿಗಿಯಾದ ಕ್ರಮಗಳಿಂದ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ.

ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ನಟಿ ರನ್ಯಾಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ!

(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ! Read More »

ಕರಾವಳಿ
Scroll to Top