news kadab

ನಾಳೆ ರಾಜ್ಯಕ್ಕೆ ಶಾ ಭೇಟಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಮುಂದಿನ ವಿಧಾನಸಭಾ ಚುನವಣೆಯ ಗೆಲುವಿನ ಮೇಲೆ ಕಣ್ಣಿಟ್ಟು ಕೇಂದ್ರ ಬಿಜೆಪಿ ನಾಯಕರಗಳು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದು, ನಾಳೆ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ತಿಂಗಳಲ್ಲಿ ಅವರದ್ದು 2ನೇ ರಾಜ್ಯ ಭೇಟಿಯಾಗಿದೆ. ಪ್ರಧಾನಿ ಮೋದಿ ಒಂದು ವಾರದಲ್ಲಿ ರಾಜ್ಯಕ್ಕೆ 2 ಸಲ ಭೇಟಿ ನೀಡಿದ್ದರು. ಹಾಗೆಯೇ ಜೆ.ಪಿ. ನಡ್ಡಾ ಸಹ ಈ ತಿಂಗಳಲ್ಲೇ 3 ಬಾರಿ ರಾಜ್ಯಕ್ಕೆ ಬಂದಿದ್ದರು. ನಾಳೆ ಕೇಂದ್ರ ಗೃಹ ಸಚಿವ ಅಮಿತ್ […]

ನಾಳೆ ರಾಜ್ಯಕ್ಕೆ ಶಾ ಭೇಟಿ Read More »

ಕರ್ನಾಟಕ
crime, arrest, suspected

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ ಯೋಜನೆ ರೂಪಿಸಲು ಸೂಚನೆ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಬೆಳಗಾವಿ, ಜ.07.  ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಇಲಾಖೆಗೆ ಸೇರಿದ 19 ಎಕರೆ ಜಾಗದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಕುರಿತು ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಭಿವೃದ್ಧಿ ಸಮಿತಿ ರಚಿಸಿ ಕಾರ್ಯಸಾಧ್ಯತೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ಮೆನನ್‌ ರಾಜೇಂದ್ರನ್‌ ಅವರಿಗೆ

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ ಯೋಜನೆ ರೂಪಿಸಲು ಸೂಚನೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ

ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ವರದಿಯಾಗಿದೆ . ಸಂತ್ರಸ್ತೆಯರನ್ನು ಪ್ರಿಯಾಲಕ್ಷ್ಮಿ, ಲಲಿತಮ್ಮ, ಜಯಪ್ರಭಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆಯ ಹೆಸರು ತಿಳಿದು ಬಂದಿಲ್ಲ.   ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಯಶವಂತಪುರ ಮತ್ತು ಪೀಣ್ಯ ಠಾಣೆಗಳಲ್ಲಿ ತಲಾ ಒಂದು ಘಟನೆ ವರದಿಯಾಗಿದೆ. ಮುಂಜಾನೆ 5.30ರ ಸುಮಾರಿಗೆ ಎಂಇಐ ಲೇಔಟ್‌ನ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!

(ನ್ಯೂಸ್ ಕಡಬ) newskadaba.com ಲಖನೌ, ಜ. 05.  ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.  ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಮೈಸೂರು, ಜ.04. ಗ್ಯಾಸ್ ಸಿಲಿಂಡರರೊಂದು ಸ್ಫೋಟಗೊಂಡು ಪರಿಣಾಮ ಸುಮಾರು 10 ಮಂದಿಗೆ ಗಾಯವಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 31. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಚಾಲಕನ ಮೇಲೆ ಎಫ್ಐಆರ್ ದಾಖಲಿಕೊಂಡಿದ್ದಾರೆ. ಡಿ. 27ರಂದು ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಟಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು. ಈ ಅಪಘಾತಕ್ಕೆ ಸಂಬಂಧಿಸಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಐಪಿಸಿ ಕಲಂ

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top