1569ರ ‘ಮೆರ್ಕೆಟರ್ ಪ್ರೊಜೆಕ್ಷನ್’ ಭೂಮಿಯ ನಿಜವಾದ ವಿಸ್ತೀರ್ಣಕ್ಕಿಂತ ಉತ್ತರ ಅಮೆರಿಕ ಹಾಗೂ ಯುರೋಪ್ ಖಂಡಗಳನ್ನು ದೊಡ್ಡದಾಗಿ ತೋರಿಸುತ್ತಿತ್ತು.ಹಳೆಯ ನಕ್ಷೆಯಲ್ಲಿ ಗ್ರೀನ್‌ಲ್ಯಾಂಡ್ ಮತ್ತು ಆಫ್ರಿಕಾ ಒಂದೇ ಗಾತ್ರದಲ್ಲಿ ಕಾಣಿಸುತ್ತಿದ್ದವು. ಆದರೆ ನೈಜವಾಗಿ ಆಫ್ರಿಕಾ ಗ್ರೀನ್‌ಲ್ಯಾಂಡ್‌ಗಿಂತ 14 ಪಟ್ಟು ದೊಡ್ಡದಾಗಿದೆ.
ಖಂಡಗಳ ನೈಜ ಗಾತ್ರ ಮತ್ತು ವಿಸ್ತೀರ್ಣವನ್ನು ನಿಖರವಾಗಿ ಬಿಂಬಿಸಲು ಈ ಬದಲಾವಣೆ ಅಗತ್ಯ ಎಂದು ಭಾರತ ಬೆಂಬಲಿಸಿದೆ.ವಿಶ್ವದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿರುವಾಗ 16ನೇ ಶತಮಾನದ ನಕ್ಷೆಯ ಬಗ್ಗೆ ಚರ್ಚಿಸುವುದು ಅನಗತ್ಯ ಎಂದು ಅಮೆರಿಕ ಆಕ್ಷೇಪ ವ್ಯಕ್ತಪಡಿಸಿದೆ.ಫ್ರಾನ್ಸ್ ತಕ್ಷಣವೇ ಹಳೆಯ ನಕ್ಷೆಯ ಬಳಕೆಯನ್ನು ಕೈಬಿಡಲು ನಿರ್ಧರಿಸಿದೆ.
]]>ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬದಿಯಡ್ಕದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ಈಗಾಗಲೇ ಬದಿಯಡ್ಕ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ಕೂಡ ದಾಖಲಾಗಿದೆ.
]]>ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.
]]>ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಬಡವರು, ವೃದ್ಧರು ಹಾಗೂ ದೂರದ ಊರುಗಳಿಂದ ಬರುವ ಜನರು ಊಟವಿಲ್ಲದೆ ಸಂಕಷ್ಟಪಡುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ, ಗಂಟೆಗಟ್ಟಲೆ ಕಾಯುವ ಸಾರ್ವಜನಿಕರ ಹಸಿವನ್ನು ನೀಗಿಸುವ ಈ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
]]>ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಮಂಗಳವಾರ ಬೆಳಿಗ್ಗೆ ಏಕಕಾಲದಲ್ಲಿ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ತೆರಳಿ ದಿಢೀರ್ ತಪಾಸಣೆ ಆರಂಭಿಸಿವೆ. ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಳಕೆ, ನರೇಗಾ ಕಾಮಗಾರಿಗಳ ಬಿಲ್ ಪಾವತಿ, ಸಾರ್ವಜನಿಕ ಅರ್ಜಿಗಳ ವಿಲೇವಾರಿ, ಕಟ್ಟಡ ನಿರ್ಮಾಣ ಪರವಾನಗಿ, ಖಾತಾ ಬದಲಾವಣೆ ಹಾಗೂ ಕಚೇರಿ ಹಾಜರಾತಿ ಪುಸ್ತಕಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.
ಕಚೇರಿಯಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಲೋಕಾಯುಕ್ತ ತಂಡ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದೆ.ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹಲಾಮೂರ್ತಿ ರಾವ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದ್ದು, ತಂಡದಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ನಾಗರಾಜ್, ಪ್ರಸನ್ನ, ಸುದೀಪ್ ಹಾಗೂ ಜಲಾಲ್ ಭಾಗವಹಿಸಿದ್ದಾರೆ.
ಉಳಿದಂತೆ ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಲ್ಲೂ ಪ್ರತ್ಯೇಕ ತಂಡಗಳು ದಾಖಲೆಗಳ ಪರಿಶೀಲನೆಯನ್ನು ಮುಂದುವರಿಸಿದೆ. ಲೋಕಾಯುಕ್ತರ ಈ ದಿಢೀರ್ ದಾಳಿಯಿಂದಾಗಿ ತಾಲೂಕಿನ ಇತರೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಲ್ಲಿ ಭಾರಿ ಸಂಚಲನ ಮೂಡಿಸಿದೆ.
]]>ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ 4:00 ರಿಂದ ರಾತ್ರಿ 10:00 ಗಂಟೆಯವರೆಗೆ ಸರಕು ಆಟೋ ಸೇರಿದಂತೆ ಇತರೆ ಎಲ್ಲಾ ಸರಕು ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
]]>ಆಗಸ್ಟ್ 23ರ ಬೆಳಿಗ್ಗೆ 6.30ಕ್ಕೆ ಉಡುಪಿಯ ಗೀತಾ ಮಂದಿರದ ಶ್ರೀ ಪುತ್ತಿಗೆ ನರಸಿಂಹ ಸಭಾಂಗಣದಲ್ಲಿ ಪ್ರಾರಂಭವಾದ ಈ ಗಾಯನ ಯಜ್ಞವು ಆಗಸ್ಟ್ 24ರ ಬೆಳಿಗ್ಗೆ 7.40ಕ್ಕೆ ಮುಕ್ತಾಯಗೊಂಡಿತು.25 ಗಂಟೆಗಳ ಕಾಲ ನಿರಂತರವಾಗಿ ಹರಿದಾಸರ 250 ದಾಸರಪದಗಳನ್ನು ಭಕ್ತಿಪೂರ್ವಕವಾಗಿ ಪ್ರಸ್ತುತಪಡಿಸಲಾಯಿತು.
ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಸಲಹೆಯಂತೆ, ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ವಿದುಷಿ ಸಂಗೀತಾ ಅವರಿಗೆ ‘ಗೀತ ಗಂಗೋತ್ರಿ’ ಬಿರುದು ನೀಡಿ ಗೌರವಿಸಿದರು.ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥ ಡಾ. ಮನೀಶ್ ವಿಶ್ನೋಯಿ ಅವರು ಈ ಸಾಧನೆಯನ್ನು ವಿಶ್ವದಾಖಲೆ ಎಂದು ಘೋಷಿಸಿ ಪ್ರಮಾಣಪತ್ರ ಹಸ್ತಾಂತರಿಸಿದರು.ಭಕ್ತಿ ಸಂಗೀತ ಕ್ಷೇತ್ರಕ್ಕೆ ಉಡುಪಿಯ ಈ ಸಾಂಸ್ಕೃತಿಕ ಮೈಲಿಗಲ್ಲು ಹೊಸ ಹೆಮ್ಮೆಯನ್ನು ತಂದಿದೆ.
]]>ರಫ್ತು ಮುಂದುವರಿದಿದ್ದು, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿದೆ.ಶ್ರಾವಣ ಮತ್ತು ಹಬ್ಬದ ಋತು ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕೆ.ಜಿ.ಗೆ ₹100 ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.
]]>ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಆರ್ಥಿಕ ನೆರವಿನೊಂದಿಗೆ ಒಟ್ಟು 1,750 ಕೋಟಿ ರೂ. ವೆಚ್ಚದಲ್ಲಿ ಮುಂದಿನ 4 ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 75,000 ಹುದ್ದೆಗಳ ಪೈಕಿ ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.1000 KPS ಶಾಲೆಗಳ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಧಿಯಿಂದ ಉರ್ದು ಸೇರಿದಂತೆ ದ್ವಿಭಾಷಾ KPS ಶಾಲೆಗಳನ್ನು ಆರಂಭಿಸಲಾಗುವುದು.
]]>ಎಥೆನಾಲ್ ಉತ್ಪಾದನೆಗೆ ಬಳಸುವ ಸಕ್ಕರೆಯ ಪ್ರಮಾಣವು 2022-23ರಲ್ಲಿ ಶೇ. 12 ರಷ್ಟಿದ್ದು, 2025-26ರ ಋತುವಿನಲ್ಲಿ ಶೇ. 9ಕ್ಕೆ ಇಳಿಕೆಯಾಗಿದೆ. ಅಲ್ಲದೆ, ದೇಶದ ಒಟ್ಟು ಎಥೆನಾಲ್ ಉತ್ಪಾದನೆಯ ಕಾಲು ಭಾಗ ಮೆಕ್ಕೆಜೋಳದಂತಹ ಧಾನ್ಯಗಳಿಂದ ಸರಬರಾಜಾಗುತ್ತಿದೆ.
ಈ ಋತುವಿನಲ್ಲಿ 34.3 ದಶಲಕ್ಷ ಟನ್ ಸಕ್ಕರೆ ಉತ್ಪಾದನೆಯ ನಿರೀಕ್ಷೆಯಿತ್ತು. ಆದರೆ, ಬೆಳೆ ರೋಗ, ಕೀಟ ಬಾಧೆ ಹಾಗೂ ಅತಿಯಾದ ಮಳೆಯಿಂದಾಗಿ ಕಬ್ಬು ಹಾನಿಗೊಳಗಾಗಿ ಉತ್ಪಾದನೆ 30.6 ದಶಲಕ್ಷ ಟನ್‌ಗೆ ಕುಸಿದಿದೆಬೆಲೆ ಏರಿಕೆ ನಿಯಂತ್ರಿಸಲು ಮತ್ತು ಲಭ್ಯತೆ ಹೆಚ್ಚಿಸಲು ವ್ಯಾಪಾರಿಗಳ ಮೇಲೆ ಸ್ಟಾಕ್ ಮಿತಿ ವಿಧಿಸಲಾಗಿದೆ ಹಾಪ್ರಸ್ತುತ ದೇಶೀಯ ಅಗತ್ಯಗಳನ್ನು ಪೂರೈಸಲು ಅಗತ್ಯವಿರುವಷ್ಟು ಸಕ್ಕರೆ ದಾಸ್ತಾನು ಲಭ್ಯವಿದೆ ಎಂದು ಸರ್ಕಾರ ಭರವಸೆ ನೀಡಿದೆ.
]]>