News Kadaba

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..!

 (ನ್ಯೂಸ್ ಕಡಬ) newskadaba.com ಬೇತಮಂಗಲ, ಜ.07.  ಮದುವೆ ಆಮಂತ್ರಣ ಕೊಡುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಮನೆಯವರನ್ನೆಲ್ಲಾ ಪ್ರಜ್ಞೆ ತಪ್ಪಿಸಿ 200 ಗ್ರಾಂ ಆಭರಣ ದೋಚಿದ್ದರು ಎಂದು ದೂರು ದಾಖಲಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಬೇತಮಂಗಲ ಪಟ್ಟಣದ 2ನೇ ಬ್ಲಾಕ್ ನಿವಾಸಿ ನೂರ್ ಅಮೀನ್ ಎಂಬಲ್ಲಿ ವರದಿಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಶ್ವಾನದಳ ಸೇರಿದಂತೆ ಇತರ ವಿಶೇಷ ಪೊಲೀಸ್ ತಂಡಗಳು ಪರಿಶೀಲನೆ […]

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ದ.ಕ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಧಿಕಾರಿ ಡಾ.ದೀಪಕ್ ರೈ ಅವರನ್ನು ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ.ನಿಖಿಲ್ ಕೆ, ಉಪಾಧ್ಯಕ್ಷರಾಗಿ ಬಂಟ್ವಾಳ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಪ್ರಶಾಂತ್, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಡಾ.ಕೃಷ್ಣಾನಂದ ಕೆ ಮತ್ತು ಜಿಲ್ಲಾ ವೆನ್ಲಾಕ್

ದ.ಕ. ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ Read More »

ಕರಾವಳಿ, ಕರ್ನಾಟಕ

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಇಲ್ಲಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿರುವುದಾಗಿ ತಿಳಿದುಬಂದಿದೆ. ಬೆಂಗಳೂರಿನ ರಾಜಾಜಿನಗರದ ಎನ್.​ಪಿ.ಎಸ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆವರಣದಲ್ಲಿ

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು       Read More »

ಕರ್ನಾಟಕ, ಕ್ರೈಮ್ ನ್ಯೂಸ್

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಕರ್ತವ್ಯ ಸ್ಥಳ: ಭಾರತದ ಎಲ್ಲೆಡೆ ಹುದ್ದೆಗಳ ಸಂಖ್ಯೆ: 1458 ಹುದ್ದೆ, ಹೆಡ್ ಕಾನ್ಸ್ಟೇಬಲ್ ವೇತನ: 25,500- 81,100 ರೂ. ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ವೇತನ: 29,200-92,300 ರೂ. ಶೈಕ್ಷಣಿಕ ಅರ್ಹತೆ: 10+2/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ Read More »

ಉದ್ಯೋಗ
crime, arrest, suspected

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

PSI ನೇಮಕಾತಿ ಹಗರಣ ಆರೋಪಿಗಳಿಗೆ ಜಾಮೀನು..!!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.06. ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ PSI ನೇಮಕಾತಿ ಹಗರಣದ ದಿವ್ಯ ಹಾಗರಗಿ, DYSP ಮಂಜುನಾಥ ಸಾಲಿ ಮತ್ತು ಕಾಶೀನಾಥ್ ಸೇರಿದಂತೆ ಎಲ್ಲಾ 26 ಆರೋಪಿಗಳಿಗೆ ನ್ಯಾಯಾಲಯ ಷರತ್ತು ಜಾಮೀನು ನೀಡಿದ್ದು, PSI ನೇಮಕಾತಿಗೆ ಆರೋಪಿಗಳಿಂದ ಹಣ ಪಡೆದು ಸಹಕಾರ ನೀಡಿದ್ದ ಆರೋಪ ಇವರ ಮೇಲಿದೆ. ಹಲವು ರಾಜಕೀಯ ನಾಯಕರು ಮತ್ತು ಅಧಿಕಾರಿಗಳ ಹೆಸರು ತನಿಖೆ ವೇಳೆ ಕೇಳಿ ಬಂದಿತ್ತು ಎಂದು ವರದಿ ತಿಳಿಸಿದೆ.  

PSI ನೇಮಕಾತಿ ಹಗರಣ ಆರೋಪಿಗಳಿಗೆ ಜಾಮೀನು..!!     Read More »

ಕರ್ನಾಟಕ

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಚರ್ಚೆ ಪಕ್ಷದ ಹಂತದಲ್ಲಿದೆ. ಈ ವಿಚಾರದಲ್ಲಿ  ನಳಿನ್ ಕುಮಾರ್ ಕಟೀಲ್ ಜೊತೆ ಮಾತನಾಡುತ್ತೇನೆ. ಸದ್ಯ ಸರ್ಕಾರದ ಮುಂದೆ ಈ ವಿಚಾರ ಇಲ್ಲ ಎಂದು ಸಿ.ಎಂ ಬೊಮ್ಮಾಯಿ ತಿಳಿಸಿದ್ದಾರೆ.  

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!!

(ನ್ಯೂಸ್ ಕಡಬ) newskadaba.com  ಭೋಪಾಲ್, ಜ.06. ತರಬೇತಿ ವೇಳೆ ಲಘು ವಿಮಾನವೊಂದು ದೇವಾಸ್ಥಾನದ ಮೇಲಿನ ಗರ್ಭಗುಡಿಗೆ ಢಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂಧರ್ಭದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಎಂಬಲ್ಲಿ ಸಂಭವಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top