News Kadaba

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                        

ನ್ಯೂಸ್ ಕಡಬ) newskadaba.com  ಕೊಕ್ಕಡ, ಜ.03. ಕೊಕ್ಕಡದ ಪಟ್ರಮೆ ಸಮೀಪದ ಸೇತುವೆ ಬಳಿ ಗಂಡು ಕಾಡಾನೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ.ಬ ಸೇತುವೆ ಬಳಿ ಇದ್ದ ಕಾಡಾನೆ ಜನರನ್ನು ಕಂಡು  ಮಸೀದಿ ಬಳಿಯಿಂದ ಪಂಚವಟಿ ಶ್ಯಾಮ್ ಪ್ರಸಾದ್ ಎಂಬವರ ತೋಟಕ್ಕೆ ಹೋಗಿತ್ತು ಎನ್ನಲಾಗಿದೆ. ಕೆಲ ಸಮಯದ ಬಳಿಕ ನಂತರ ಹೊಳೆದಾಟಿ ಮರ್ಲಾಜೆ ಹರಿರಾವ್ ರವರ ತೋಟದ ಮೂಲಕ ಕಾಡು ಸೇರಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.    

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                         Read More »

ಕರಾವಳಿ, ಕರ್ನಾಟಕ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 03:  ಪಡಿತರದಾರದ ವಿತರಣೆ ಪ್ರತಿ ಕುಟುಂಬಕ್ಕೆ ವಿತರಣೆ ಮಾಡುತ್ತಿರುವ ಅಕ್ಕಿಗಿಂತ ಈ ತಿಂಗಳಿನಿಂದಲೇ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಆಹಾರ ಇಲಾಖೆ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ Read More »

ಕರ್ನಾಟಕ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ Read More »

ಕರಾವಳಿ, ಕರ್ನಾಟಕ

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

(ನ್ಯೂಸ್ ಕಡಬ) newskadaba.com .   ಚೆನ್ನೈ, ಜ. 03:  ಆರು ವಾಹನಗಳ ಸರಣಿ ಅಪಘಾತದಿಂದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು. ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

(ನ್ಯೂಸ್ ಕಡಬ) newskadaba.com  ಪುತ್ತೂರು, ಜ.03. ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ಸಂಭವಿಸಿದೆ. ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.    

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                         

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03.  ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್  ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                          Read More »

ರಾಷ್ಟ್ರೀಯ ನ್ಯೂಸ್

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!!

 (ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜ.03.  ದನಕರುಗಳನ್ನು ಖರೀದಿ ಮಾಡಿದ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ರೂ.51 ಸಾವಿರ ಹಾಗೂ ಏಳು ದನಕರುಗಳನ್ನು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಬಾಗೇಪಲ್ಲಿ ವರದಿಯಾಗಿದೆ. ಬಂಧಿತರನ್ನು ಚಿಂತಮಾಕಲದಿನ್ನೆಯ ನವೀನ್, ಇಂದೋಕೊರೊಳ್ಳಪಲ್ಲಿಯ ಅಭಿ, ಕಲ್ಲಿಪಲ್ಲಿಯ ಮಹೇಶ್, ಸಜ್ಜಲವಾರಿಪಲ್ಲಿಯ ಮಣಿಕಂಠ, ದೇವನಹಳ್ಳಿಯ ಗಣೇಶ್ ಗಾಹೂ ಸುಧಾಕರ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕಿನ ಭತ್ತಲಪಲ್ಲಿ ಗ್ರಾಮದ ಸುರೇಶ, ಶ್ರೀರಾಮಪ್ಪ, ಶ್ರೀನಿವಾಸ ಎಂಬುವರು

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.03. ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕೊಣಾಲು ಗ್ರಾಮದ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮರವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.      

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top