News Kadaba

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು […]

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಜ. 02. ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟ ಹಲವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ವರದಿಯಾಗಿದೆ. ಮೃತಪಟ್ಟಿರುವವರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಹಾಗೂ ಗಾಯಗೊಂಡವರನ್ನು ಪವನ್ ಕುಮಾರ್ (38), ರೋಹಿತ್ ಪಂಡಿತ್ (27), ಸರೋಜ್ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ 

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯ, ಜ. 02. ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನ ದಕ್ಷಿಣದಲ್ಲಿರುವ ಗೋಲ್ಡ್ ಕೋಸ್ಟ್ ಮೇನ್ ಬೀಚ್‌ ನ ಪ್ರವಾಸೋದ್ಯಮ ತಾಣದಲ್ಲಿ ವರದಿಯಾಗಿದೆ. ಎರಡು ಹೆಲಿಕಾಪ್ಟರ್‌ ಗಳು, ಡಿಕ್ಕಿಯಾಗಿ ಸೀ ವರ್ಲ್ಡ್ ರೆಸಾರ್ಟ್‌ನಿಂದ ಹೊರಗಿರುವ ಮರಳಿನ ದಂಡೆಯ ಮೇಲೆ ಬಿದ್ದವು. ತುರ್ತು ಸೇವೆಗಳು ಕರಾವಳಿಯಿಂದ ದೂರದಲ್ಲಿರುವ ಮರಳು ದಂಡೆಗೆ ಪ್ರವೇಶಿಸಲು ಕಷ್ಟಕರವಾಗಿದೆ. ಆದರೂ ಕಾರ್ಯಾಚರಣೆ ಆರಂಭವಾಗಿದೆ ಎಂದು ಆಗ್ನೇಯ ಪ್ರದೇಶದ

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬಯಿ, ಜ. 02. ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಕೇರಳ ಮೂಲದ ಆರ್. ಕೃಷ್ಣಕುಮಾರ್(84) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರು ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದು, ನನ್ನ ಸ್ನೇಹಿತ, ಸಹೋದ್ಯೋಗಿಯ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ.

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                             Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                    

(ನ್ಯೂಸ್ ಕಡಬ) newskadaba.com ಕೇರಳ, ಜ. 02. ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಅಸ್ವಸ್ಥರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದ ಆರೋಗ್ಯ ಸಚಿವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಶುದ್ಧೀಕರಣ / ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅಹಮದಾಬಾದ್‌, ಜ. 02. ಮನೆಯೊಂದರ ಮೊದಲ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಅಹಮದಾಬಾದ್‌ನಲ್ಲಿ ವರದಿಯಾಗಿದೆ. ಮೃತರನ್ನು ಜಯೇಶ್ ವಘೇಲಾ (40), ಮತ್ತು ಅವರ ಪತ್ನಿ ಹಂಸಾ (35) ಹಾಗೂ ಅವರು ಮಗ ರೆಹಾನ್ (8) ಎಂದು ಗುರುತಿಸಲಾಗಿದೆ.

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02.  ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು ಕಾನೂನುಬಾಹಿರ ಎಂದು ಕರೆದಿರುವ ಅವರು, “ನನ್ನ ಪ್ರಕಾರ ನ. 08 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ Read More »

ರಾಷ್ಟ್ರೀಯ ನ್ಯೂಸ್

ಪಪ್ಪಾಯ ಎಲೆಯ ರಸ – ಡೆಂಗ್ಯೂ ಮತ್ತು ಮಲೇರಿಯಾಕ್ಕೆ ರಾಮಬಾಣ ➤ ಪಪ್ಪಾಯ ಎಲೆಯ ರಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com , ಜ. 02. ಪಪ್ಪಾಯಿ ಎಲೆಗಳು ತುಂಬಾ ಪರಿಣಾಮಕಾರಿ ಆಗಿ ಡೆಂಗ್ಯೂ ಮತ್ತು ಮಲೇರಿಯಾವನ್ನು ತಡೆಯುವುದು. ಪಪ್ಪಾಯಿ ಎಲೆಯ ರಸವನ್ನು ಕುಡಿದರೆ ಅದರಿಂದ ಡೆಂಗ್ಯೂ ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ. ಪಪ್ಪಾಯಿ ಎಲೆಯ ರಸವು ತುಂಬಾ ಕಹಿಯಾಗಿರುವುದು. ಆದರೆ ಇದರಿಂದ ಹಲವಾರು ಲಾಭಗಳು ಇವೆ ಮತ್ತು ದೇಹದಲ್ಲಿ ಇದು ರಕ್ತಕಣವನ್ನು ಹೆಚ್ಚಿಸುವುದು ಎಂದು ತಿಳಿದುಬಂದಿದೆ. ಪಪ್ಪಾಯಿ ಎಲೆಯ ರಸ ತಯಾರಿಸುವ ವಿಧಾನ 10-15 ಚಿಗುರು ಪಪ್ಪಾಯಿ ಎಲೆ ತೆಗೆದುಕೊಂಡು ಸರಿಯಾಗಿ ತೊಳೆಯಿರಿ, ಇದನ್ನು

ಪಪ್ಪಾಯ ಎಲೆಯ ರಸ – ಡೆಂಗ್ಯೂ ಮತ್ತು ಮಲೇರಿಯಾಕ್ಕೆ ರಾಮಬಾಣ ➤ ಪಪ್ಪಾಯ ಎಲೆಯ ರಸ ಮಾಡುವ ವಿಧಾನ Read More »

ಆರೋಗ್ಯ ಮಾಹಿತಿ

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 02. ಉಳ್ಳಾಲದಿಂದ ಮಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಸಿಕ್ಕ ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಪ್ರಮಾಣಿಕತೆ ಮೆರೆದ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಬಿ.ಸಿ,ರೋಡ್ ಮೂಲದ ಮಹಿಳೆ ತಸ್ಲಿಮಾ ಫಾರೂಕ್ ಎಂಬವರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ನಲ್ಲಿ ತೆರಳುತ್ತಿದ್ದ ವೇಳೆ 18 ಗ್ರಾಂನ ಚಿನ್ನದ ಬಳೆಯೊಂದನ್ನು ಕಳೆದುಕೊಂಡಿದ್ದರು. ಈ ಬಳೆ ಬಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ
Scroll to Top