News Kadaba

ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ಗುಡ್‌ ಬೈ ಜಿನೀವಾ ಕಚೇರಿಯಲ್ಲಿ ಯುಎಸ್ ಧ್ವಜ ತೆರವು, 98 ವರ್ಷಗಳ ನಂಟಿಗೆ ಬ್ರೇಕ್!

(ನ್ಯೂಸ್‌ ಕಡಬ) newskadaba.com,ಜ,23 ವಾಷಿಂಗ್ಟನ್, : ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ . ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಲು ವಿಫಲವಾಗಿದೆ ಯುಎಸ್‌ ಆರೋಪಿಸಿತ್ತು.ರೋಗಗಳ ಕಣ್ಗಾವಲು ಮತ್ತು ನಿರ್ಣಾಯಕ ಆರೋಗ್ಯ ಸವಾಲುಗಳಂತಹ ವಿಷಯಗಳ ಕುರಿತು ಇತರ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಹಕಾರಕ್ಕೆ ಅಮೆರಿಕ ಆದ್ಯತೆ ನೀಡುತ್ತದೆ. ಆದರೆ, WHO […]

ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ಗುಡ್‌ ಬೈ ಜಿನೀವಾ ಕಚೇರಿಯಲ್ಲಿ ಯುಎಸ್ ಧ್ವಜ ತೆರವು, 98 ವರ್ಷಗಳ ನಂಟಿಗೆ ಬ್ರೇಕ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜ,23 ನವದೆಹಲಿ: 2026-27 ರ ಜನಗಣತಿಯ ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಇದನ್ನು ಮನೆ ಪಟ್ಟಿ ಮತ್ತು ವಸತಿ ಗಣತಿ ಎಂದೂ ಕರೆಯಲಾಗುತ್ತದೆ. ಗೃಹ ಸಚಿವಾಲಯ ಹೊರಡಿಸಿರುವ ಮತ್ತು ಗೆಜೆಟ್‌ನಲ್ಲಿ ಪ್ರಕಟವಾದ ಈ ಅಧಿಸೂಚನೆಯು, ದೇಶಾದ್ಯಂತ ಜನಗಣತಿ ಅಧಿಕಾರಿಗಳು ಮನೆಗಳಿಗೆ ಕೇಳುವ 33 ನಿರ್ದಿಷ್ಟ ಪ್ರಶ್ನೆಗಳನ್ನು ವಿವರಿಸಿದೆ. ಈ ಮೊದಲ ಹಂತವು ಮನೆಗಳ ಗುಣಮಟ್ಟ, ನೀರು, ವಿದ್ಯುತ್, ಶೌಚಾಲಯ, ಅಡುಗೆ ಸೌಲಭ್ಯಗಳು, ಆಸ್ತಿಗಳು ಮುಂತಾದವುಗಳನ್ನು

ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ? ಶಾಲಾ ಆವರಣದಲ್ಲೇ ಬಾಲಕ ಸಾವು

(ನ್ಯೂಸ್‌ ಕಡಬ) newskadaba.com,ಜ,23 ಯಾದಗಿರಿ : ಅಕ್ಷರ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲೇ ಅಕಾಲಿಕ ಮರಣಕ್ಕೀಡಾಗಿರುವ ಘಟನೆ ಯಾದಗಿರಿ ಜಿಲ್ಲೆಯ  ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕರ ನಿಂದನೆಯೇ ಬಾಲಕನ ಈ ನಿರ್ಧಾರಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. . ಈತ  ಸರ್ಕಾರಿ ಶಾಲೆಯಲ್ಲಿ  ವ್ಯಾಸಂಗ ಮಾಡುತ್ತಿದ್ದನು. ಜನವರಿ 21ರಂದು ಮಧ್ಯಾಹ್ನದ ವೇಳೆಗೆ ಶಾಲಾ ಆವರಣದಲ್ಲಿರುವ ಮರದ ಕೆಳಗೆ ಶವ ಪತ್ತೆಯಾಗಿದೆ. ಮರಕ್ಕೆ ಕಟ್ಟಿದ್ದ ಹಗ್ಗಕ್ಕೆ ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ

ಶಿಕ್ಷಕರು ಬೈದಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ದುರಂತ ಅಂತ್ಯ? ಶಾಲಾ ಆವರಣದಲ್ಲೇ ಬಾಲಕ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು”

(ನ್ಯೂಸ್‌ ಕಡಬ) newskadaba.com,ಜ,23 : ಉಗ್ರಂ’, ‘ಮ್ಯಾಕ್ಸ್’ ಮುಂತಾದ ಸಿನಿಮಾಗಳಲ್ಲಿ ಅಬ್ಬರಿಸಿರುವ ಮಂಜು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಉಗ್ರಂ ಮಂಜು ಅವರ ವಿವಾಹ ಮಹೋತ್ಸವ ಜರುಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಂ ಮಂಜು – ಸಂಧ್ಯಾ ಅವರ ಕಲ್ಯಾಣ ನೆರವೇರಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಮದುವೆ ಜರುಗಿದ್ದು, ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಸಂಧ್ಯಾ ಕೊರಳಿಗೆ ಉಗ್ರಂ ಮಂಜು ಮಾಂಗಲ್ಯಧಾರಣೆ ಮಾಡಿದ್ದಾರೆ…..

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

(ನ್ಯೂಸ್‌ ಕಡಬ) newskadaba.com,ಜ,23 ಅಯೋಧ್ಯೆ: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ. ಈ ಸ್ವರ್ಣ ಧನುಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ನೈಪುಣ್ಯದಿಂದ ರೂಪಿಸಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಸತು ಹಾಗೂ ಕಬ್ಬಿಣದ ಮಿಶ್ರಲೋಹದಿಂದ ಈ ಧನಸ್ಸು ತಯಾರಿಸಲ್ಪಟ್ಟಿದ್ದು, ಅದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮ

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು

(ನ್ಯೂಸ್‌ ಕಡಬ) newskadaba.com,ಜ,23 ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರಕು ಸಾಗಣೆ ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿಕೊಂಡ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರನ ದೇಹವು ಛಿದ್ರವಾಗಿತ್ತು. ಅಪಘಾತದಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಲಿಂಗ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ

ಹೆದ್ದಾರಿಯಲ್ಲಿ ಅಪ್ಪಳಿಸಿದ ಸಾವು ಲಾರಿ ಚಕ್ರದಡಿ ಸಿಲುಕಿ ಬ್ರಹ್ಮಾವರದ ಯುವಕ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ.

(ನ್ಯೂಸ್‌ ಕಡಬ) newskadaba.com,ಜ,23 ಮಂಗಳೂರು: 1997 ರಲ್ಲಿ ದಾಖಲಾದ ಸಂಚಲನ ಮೂಡಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಭಯಾನಕ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಮಂಗಳೂರು ನಗರದ ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ವೆಂಕಟಪ್ಪ ಎಂಬುವರ ಪುತ್ರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ ಕೃಷ್ಣಪ್ಪ ಅಲಿಯಾಸ್ ಕೃಷ್ಣ (55) ಎಂದು ಗುರುತಿಸಲಾಗಿದೆ. ಅವರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,ಜ,23   : ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ… . ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ. ಕಳೆದ ವರ್ಷ

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಗಿಲ್ಲಿ’ ನಟ: ಕಾವೇರಿ ನಿವಾಸದಲ್ಲಿ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ,23   ಬೆಂಗಳೂರು: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.. ನಿನ್ನೆ ಮಧ್ಯಾಹ್ನ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಸಚಿವ ಬೈರತಿ ಬಸವರಾಜ್‌, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಉಪಸ್ಥಿತರಿದ್ದರು. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಗಿಲ್ಲಿ ಅವರು ವಿಜೇತರಾಗಿದ್ದರೆ ರಕ್ಷಿತಾ ರನ್ನರ್‌ ಅಪ್‌, ಅಶ್ವಿನಿ ಗೌಡ ಅವರು ಎರಡನೇ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದರು.

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಗಿಲ್ಲಿ’ ನಟ: ಕಾವೇರಿ ನಿವಾಸದಲ್ಲಿ ಸನ್ಮಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,ಜ,23 : ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ… 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top