News Kadaba

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಡಿ. 27. ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ. ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದಿಂದ ಅಭಿಮನ್ಯ, ಭೀಮ ಆನೆಗಳು ಈಗಾಗಲೇ ಕರಡಿಗೋಡು ಗ್ರಾಮಕ್ಕೆ ಬಂದಿದ್ದು, ಕರಡಿಗೋಡು ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ತೋಟದಲ್ಲಿ ಬೀಡುಬಿಟ್ಟು, ಕೃಷಿ ಫಸಲು ನಾಶ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿಗೆ ಮುಂದಾಗುತ್ತಿದ್ದ ಕಾಡಾನೆಗಳನ್ನು ಸೆರೆ ಹಿಡಿಯಲು ಸಾಕಾನೆಗಳ ಜೊತೆ ಅರಣ್ಯಧಿಕಾರಿಗಳು ಸಜ್ಜಾಗಿದ್ದಾರೆ. […]

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ Read More »

ಕರ್ನಾಟಕ

2022 ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣ ದಾಖಲು- ಆರೋಪಿಗಳಿಗೆ ಇದುವರೆಗೆ ಶಿಕ್ಷೆಯಾಗಿಲ್ಲ ➤ ಗೃಹಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ.27. ರಾಜ್ಯದಲ್ಲಿ ಒಟ್ಟಾರೆಯಾಗಿ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಮಧ್ಯವರ್ತಿ ನಿಯಮಗಳು 2011 ಮತ್ತು 2022 ರ ಅಡಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ, ಅಸಭ್ಯ ಮತ್ತು ಸಾಮಾಜಿಕ ವಿರೋಧಿ ವಿಡಿಯೋಗಳು ಮತ್ತು ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಕಾರಣ, ಸರ್ಕಾರವು ಬೆಂಗಳೂರಿನಲ್ಲಿ ಎಂಟು ಸೈಬರ್  ಕ್ರೈಂ ಪೊಲೀಸ್ ಠಾಣೆಗಳನ್ನು ಮತ್ತು ಪ್ರತಿ ನಗರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಘಟಕಗಳನ್ನು ಸ್ಥಾಪಿಸಿದೆ

2022 ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣ ದಾಖಲು- ಆರೋಪಿಗಳಿಗೆ ಇದುವರೆಗೆ ಶಿಕ್ಷೆಯಾಗಿಲ್ಲ ➤ ಗೃಹಸಚಿವ ಆರಗ ಜ್ಞಾನೇಂದ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಯುವಕಯೋರ್ವ ಊಟ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕನಕಪುರದ ಪ್ರೈಡ್ ಹೋಟೆಲ್‌ವೊಂದರಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಪ್ರೀತಂ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಡಿ. 27. ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಚಿನ್ ಮುತ್ತಣ್ಣ (26) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆರ್ಮುಗ ಎಂದು ಗುರುತಿಸಲಾಗಿದೆ. ಇವರನ್ನು ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ➤ ಓರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ತಲೆ ಹಾವು ಮಾರಾಟಕ್ಕೆ ಯತ್ನ ➤ ಪಿಡಿಒ ಸೇರಿ ಮೂವರ ಬಂಧನ                                 

(ನ್ಯೂಸ್ ಕಡಬ) newskadaba.com ತಿಪಟೂರು, ಡಿ. 27. ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಪೊಲೀಸ್ ಇಲಾಖೆ ಬಂಧಿಸಿದ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಶೇಕ್ ಹುಸೇನ್, ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಜನರಲ್ಲಿ ಮೂಢನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ಆರೋಪಿಗಳು, ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ, ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು

ಎರಡು ತಲೆ ಹಾವು ಮಾರಾಟಕ್ಕೆ ಯತ್ನ ➤ ಪಿಡಿಒ ಸೇರಿ ಮೂವರ ಬಂಧನ                                  Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27.ಕೊರೋನಾ ರೂಪಾಂತರಿ ಬಿಎಫ್.7 ಹರಡುವಿಕೆಯ ಭೀತಿಯಿಂದ ಕಳೆದ ನಾಲ್ಕೈದು ದಿನಗಳಿಂದ ಜನರು ಬೂಸ್ಟರ್ ಡೋಸ್ ಪಡೆಯುವುದಕ್ಕೆ ಮುಗಿಬೀಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟಾಗಿ ಕಂಡುಬರದಿದ್ದರೂ, ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅಂಕಿಅಂಶ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 30 ದಿನಗಳಲ್ಲಿ ಮೊದಲ ಬಾರಿಗೆ ಒಂದು ದಿನದಲ್ಲಿ ಒಟ್ಟಾರೆ ವ್ಯಾಕ್ಸಿನೇಷನ್ 2,000 ಲಸಿಕೆಗಳನ್ನು ದಾಟಿದೆ. ಬೂಸ್ಟರ್ ಡೋಸ್ ಲಸಿಕೆ ಪಡೆದವರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..!  Read More »

ಕರಾವಳಿ

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಡಿ. 27. ಒಂದು ವರ್ಷದ ಹೆಣ್ಣು ಮಗುವಿನ ಗಂಟಲಲ್ಲಿ ಚಾಕಲೇಟ್ ಸಿಲುಕಿ‌ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ವರದಿಯಾಗಿದೆ. ಮೃತಪಟ್ಟ ಮಗುವನ್ನು ಶಾರ್ವರಿ ಸುಧೀರ್ ಜಾಧವ್ ಎಂದು ಗುರುತಿಸಲಾಗಿದೆ. ಮಗು ಚಾಕೊಲೇಟ್​ ನುಂಗಿ ಒದ್ದಾಡಿ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಇದನ್ನು ಕಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ರೋಧನ ಮುಗಿಲು ಮುಟ್ಟಿದೆ.  

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು 

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮೊಗ್ರು ಗ್ರಾಮದ ಮುರ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಮೀನಾಕ್ಷಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲ ಮೂಲಕ ಒಳನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಎರಡೂವರೆ ಪವನ್ ಚಿನ್ನದ ಸರ ಹಾಗೂ 32,500 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನಾಕ್ಷಿಯವರು ಗುರುವಾಯನಕೆರೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿ, ವಾಪಸ್ ಬಂದಾಗ

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು  Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top