News Kadaba

ಚಿರತೆ ದಾಳಿ ➤ 10 ಕುರಿಗಳು ಮೃತ್ಯು.!

 (ನ್ಯೂಸ್ ಕಡಬ) newskadaba.com ಗುಬ್ಬಿ, ಡಿ. 24. ಚಿರತೆಯೊಂದು ದಾಳಿ ನಡೆಸಿ, 10 ಕುರಿಗಳನ್ನು ಕೊಂದುಹಾಕಿರುವ ಘಟನೆ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದನಹಳ್ಳಿಯಲ್ಲಿ ವರದಿಯಾಗಿದೆ. ರೈತರಾದ ಲಕ್ಷ್ಮಮ್ಮ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿವೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳ ಬಳಿ ಚಿರತೆಯನ್ನು ಶೀಘ್ರವಾಗಿ ಹಿಡಿಯುವಂತೆ ಮುದ್ದನಹಳ್ಳಿಯ ಗ್ರಾಮಸ್ಥರು ಒತ್ತಾಯಿಸಿದರು ಎಂದು ತಿಳಿದು ಬಂದಿದೆ.

ಚಿರತೆ ದಾಳಿ ➤ 10 ಕುರಿಗಳು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಇದಲ್ಲದೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                  Read More »

ಕರಾವಳಿ

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು,

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                        Read More »

ಕರಾವಳಿ

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟಿಸುತ್ತಿದ್ದು, ಸಾವಿರಾರು ಜನರು ಸಾವನಪ್ಪುತ್ತಿದ್ದಾರೆ. ರೂಪಾಂತರಿ ಕೊರೊನಾ ಭಾರತಕ್ಕೂ ಕಾಲಿಡುತ್ತಿದೆ. ಇದರ ಮಧ್ಯೆ ಕ್ರಿಸ್​ಮಸ್ ಹಾಗೂ ಹೊಸ ವರ್ಷ ಬರುತ್ತಿದ್ದು, ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ಅದರಲ್ಲೂ ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣಿಟ್ಟಿದೆ.   ಹೊಸ ವರ್ಷಾಚರಣೆ ನೆಪದಲ್ಲಿ ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಈ ವರ್ಷ ಇವುಗಳಿಗೆ ಬ್ರೇಕ್​

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು Read More »

ರಾಷ್ಟ್ರೀಯ ನ್ಯೂಸ್

ಲಾರಿ ಹರಿದು ಬೈಕ್ ಸಹಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 24. ಲಾರಿ ಹರಿದು ಬೈಕ್ ನ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಮಸ್ಕಿ ತಾಲ್ಲೂಕಿನ ಬೇಡರ ಕಾರಲಕುಂಟಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟಿ ಗ್ರಾಮದ ಶಿವಗ್ಯಾನಪ್ಪ ತಳವಾರ (38) ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ. ಮಸ್ಕಿಯಿಂದ ಲಿಂಗಸುಗೂರಿಗೆ ಬೈಕ್ ನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲಾರಿ ಹರಿದು ಬೈಕ್ ಸಹಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಇನ್ಮುಂದೆ ಮಾಸ್ಕ್ ಹಾಕದೇ ಹೊರಗೆ ಬರುವ ಹಾಗಿಲ್ಲ. ಮಾಸ್ಕ್ ಹಾಕದೇ ರಸ್ತೆಗಿಳಿದ್ರೆ ಮತ್ತೆ ಫೈನ್ ಬೀಳುತ್ತೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಕೊರೋನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಮಾಸ್ಕ್ ಕಡ್ಡಾಯ ಧರಿಸಿ, ಮಾಸ್ಕ್ ಧರಿಸದೇ ಬಸ್ ಏರಿದ್ರೆ ಫೈನ್ ಬೀಳೋದು ಗ್ಯಾರಂಟಿ. ನಿಯಮ ಪಾಲಿಸದೇ ಇದ್ದಲ್ಲಿ ದಂಡ ಅಥವಾ ಶಿಸ್ತಿನ ಕ್ರಮಕ್ಕೆ ಸೂಚನೆ ನೀಡಿದೆ.        

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ Read More »

ಕರಾವಳಿ

ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತ್ಯು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಸಂಭವಿಸಿದೆ. ಉಡೇವಾ ಗ್ರಾಮದ ಶಂಕರ್ ಎಂಬುವರಿಗೆ ಸೇರಿದ ಎತ್ತುಗಳಾಗಿದ್ದು, ಆರೋಗ್ಯ ಸರಿಇಲ್ಲವೆಂದು ಎತ್ತುಗಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಶುವೈದ್ಯ ಬಸವರಾಜ್ ಎಂಬಾತ ಎತ್ತುಗಳಿಗೆ ಇಂಜೆಕ್ಷನ್ ನೀಡಿದ್ದಾನೆ. ಇನ್ನು ವೈದ್ಯರು ಇಂಜೆಕ್ಷನ್ ನೀಡಿದ ಮರುದಿನವೇ ರಾಸುಗಳು ಮೃತಪಟ್ಟಿವೆ ಎನ್ನಲಾಗಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಎತ್ತುಗಳು ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅಲಹಾಬಾದ್, ಡಿ. 24. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರು ಎರಡು ವರ್ಷಗಳ ಬಳಿಕ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.   ಕಪ್ಪನ್ ವರದಿಗಾರ ಮತ್ತು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್(ಕೆಯುಡಬ್ಲ್ಯುಜೆ)ನ ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದ ಇವರು, 2020ರ ಅಕ್ಟೋಬರ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆಯ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿತ್ತು. ಇಡಿ ಪ್ರಕರಣದಲ್ಲಿ ಲಖನೌ ನ್ಯಾಯಾಲಯವು

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ವಿಶ್ವದಾದ್ಯಂತ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಹಿನ್ನಲೆ ಶಿಕ್ಷಣ ಸಂಸ್ಥೆಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸರ್ಕಾರ ಸಾರ್ವಜನಿಕರಿಗೆ ಅಥವಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗೈಡ್ಸ್ ಲೈನ್ಸ್ ಬಿಡುಗಡೆ ಮಾಡುವ ಮುನ್ನವೇ ಖಾಸಗಿ ಶಾಲೆಗಳು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಖಾಸಗಿ ಶಾಲೆಯ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಪದಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮತ್ತೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಇನ್ನು ಚರ್ಚೆ ನಡೆಸಿದ ಬಳಿಕ

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..!

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಡಿ. 24. ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯೇ ಪತಿಯ ಕುತ್ತಿಗೆಗೆ ವಸ್ತ್ರದಿಂದ ಬಿಗಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ಸಮೀಪದ ಬೊಳ್ಳುಮಾಡು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಸುಂದರ (36) ಎಂದು ಗುರುತಿಸಲಾಗಿದೆ. ಇವರು ಬೊಳ್ಳುಮಾಡು ಗ್ರಾಮದ ತೋಟವೊಂದರ ಮನೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು ಎನ್ನಲಾಗಿದೆ. ಸುಂದರ್ ಹಾಗೂ ಶೋಭ ಅವರ ನಡುವೆ ಕ್ಷುಲಕ ಕಾರಣಕ್ಕಾಗಿ ಕಲಹ ಉಂಟಾಗಿದೆ. ಇದೇ ಕಲಹ ವಿಕೋಪಕ್ಕೆ ತಿರುಗಿ, ಪತ್ನಿ ಶೋಭ ವೇಲ್ ನಿಂದ ಪತಿಯ ಕುತ್ತಿಗೆಗೆ ಬಿಗಿದು

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top