News Kadaba

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 22. 3 ವರ್ಷದ ಗಂಡು ಚಿರತೆಯೊಂದು ಅರಣ್ಯಧಿಕಾರಿಗಳು ಇಟ್ಟ ಬೋನಿಗೆ ಬಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ ಎಂಬವರು ತೋಟದಲ್ಲಿ ಈ ಚಿರತೆ ಸಿಕ್ಕಿಬಿದ್ದಿದೆ. ಕಳೆದ 3-4 ದಿನದ ಹಿಂದೆ ನಾಯಿ ಮೇಲೆ ದಾಳಿ ಮಾಡಿದ ಚಿರತೆ ಜನರ ಅತಂಕ ಕಾರಣವಾಗಿತ್ತು. ಅದರಿಂದ ಜನರು ಚಿರತೆಯನ್ನು ಸೆರೆಯಿಡಿಯಲು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಚಿರತೆಯ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಚಿರತೆ ದಾಳಿಯಿಂದ […]

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ Read More »

ಕರ್ನಾಟಕ

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಮುಂಬೈ , ಡಿ 22 :  ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.   ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.  ಆರೋಪಿಯ ವಿರುದ್ಧ 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ  ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನವೀನ್ ವಾಟ್ಸ್ ಆಪ್

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ         

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ          Read More »

ಕರಾವಳಿ

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಡಿ. 22. ಮಗಳೊಂದಿಗೆ ಆಸ್ಪತ್ರೆಗೆ ಆಗಮಿಸಿದ ವೃದ್ಧರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವಾಗಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ತಾಲ್ಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಹೆಮರ್ಲಹಳ್ಳಿ ಮೂಲದ ಚಿನ್ನಪ್ಪ (61) ಎಂದು ಗುರುತಿಸಲಾಗಿದೆ. ತಂದೆಯನ್ನು ಕಳೆದುಕೊಂಡ  ಮಗಳು ಆಕ್ರೋಶ ಭರಿತರಾಗಿ ಆಸ್ಪತ್ರೆಯಲ್ಲಿದ್ದ ದಾಖಲಾತಿ ಪುಸ್ತಕ, ಪೀಠೋಪಕಣ ಎಸೆದು ರಂಪಾಟ ಮಾಡಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು.    

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 3ನೇ ಡೋಸ್‌

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌  Read More »

ಕರಾವಳಿ

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕುಡುಕ ತಂದೆಯ ಹುಚ್ಚಾಟಕ್ಕೆ ಮಗನೋರ್ವ ಆಸ್ಪತ್ರೆ ಸೇರಿದ ಘಟನೆ ನಗರದ ಮಹದೇವಪುರದ ರಂಗನಾಥ ಲೇಔಟ್ ನಲ್ಲಿ ಸಂಭವಿಸಿದೆ. ಆರೋಪಿಯನ್ನು ವೆಂಕಟರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಆರೋಪಿಯು ಹಣಕ್ಕಾಗಿ ಪದೇ ಪದೇ ಮಗನನ್ನು ಪೀಡಿಸುತ್ತಿದ್ದು, ಮಗ ಹಣ ಕೊಡಲು ನಿರಾಕರಿದ್ದಾನೆ  ಇದರಿಂದ ಕೋಪಗೊಂಡ ತಂದೆ ಮಗನ ತಲೆಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ರೇಷನ್ ಕಾರ್ಡ್ ನಿಂದ ಹಲವು ಸೌಲಭ್ಯ   ➤ ಶಾಸಕ ಕೆ. ಮಹದೇವ್ ..!!                   

(ನ್ಯೂಸ್ ಕಡಬ) newskadaba.com ಪಿರಿಯಾಪಟ್ಟಣ, ಡಿ. 22. ಸರ್ಕಾರದಿಂದ ನೀಡಲಾಗುವ ರೇಷನ್ ಕಾರ್ಡ್ ಕೇವಲ ಪಡಿತರ ಪಡೆಯಲು ಮಾತ್ರವಲ್ಲ ಆರೋಗ್ಯ ಸಂಬಂಧಿಸಿದ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ನೆರವಾಗಲಿದೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದ್ದಾರೆ. ಆಹಾರ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಆಯ್ದ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಿ ಮಾತನಾಡಿ, ಮುಖ್ಯಮಂತ್ರಿಗಳು ಮತ್ತು ಆಹಾರ ಇಲಾಖೆ ನಿರ್ದೇಶಕರ ಕಚೇರಿಗಳಿಗೆ ಎಡೆಬಿಡದೆ ಅಲೆದು ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳಿಗೆ

ರೇಷನ್ ಕಾರ್ಡ್ ನಿಂದ ಹಲವು ಸೌಲಭ್ಯ   ➤ ಶಾಸಕ ಕೆ. ಮಹದೇವ್ ..!!                    Read More »

ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಲಾರಿಯೊಂದು ತಿರುಗಿಸುವ ಸಂದರ್ಭದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬಂಟ್ವಾಳದ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಸಂಭವಿಸಿದೆ. ಬಂಟ್ವಾಳ – ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಟಿಕೇಟ್ ರಹಿತ ಪ್ರಯಾಣ ➤ 6 ಲಕ್ಷ ರೂ. ದಂಡ ವಸೂಲಿ..!         

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್ ಪಡೆಯದೇ ಸಂಚರಿಸುವ ಪ್ರಯಾಣಿಕರಿಂದ 6,56,030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ನವೆಂಬರ್-2022 ರ ಮಾಹೆಯಲ್ಲಿ ಒಟ್ಟು 15,530 ಟ್ರಿಪ್ ಗಳನ್ನು ತಪಾಸಣೆ ನಡೆಸಿ, 3326 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ

ಟಿಕೇಟ್ ರಹಿತ ಪ್ರಯಾಣ ➤ 6 ಲಕ್ಷ ರೂ. ದಂಡ ವಸೂಲಿ..!          Read More »

ಕರ್ನಾಟಕ
Scroll to Top