News Kadaba

ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ !

(ನ್ಯೂಸ್ ಕಡಬ) newskadaba.com ಮಾಲೂರು, ಡಿ. 17. ಶೌಚಾಲಯಕ್ಕೆ ತೆರಳಿದ್ದ ಗರ್ಭಿಣಿ ಮಹಿಳೆಯೊಬ್ಬರು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಪುರಸಭೆಯಲ್ಲಿ ನಡೆದಿದೆ.   ಉತ್ತರಪ್ರದೇಶದ ಮಹಿಳೆ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ಬಿ.ಪಿ ಜಾಸ್ತಿಯಾಗಿತ್ತು. ತಕ್ಷಣವೇ ಅವರನ್ನು ಕೋಲಾರ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸೂಚಿಸಿದ್ದರು. ಆಂಬುಲೆನ್ಸ್ ಬರುವಷ್ಟರಲ್ಲಿ ಮಹಿಳೆಗೆ ಶೌಚಾಲಯದಲ್ಲೇ ಹೆರಿಗೆಯಾಗಿದೆ. ನಂತರ ಆಶಾ ಕಾರ್ಯಕರ್ತೆಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರು.

ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ ! Read More »

ಕರ್ನಾಟಕ

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 17. ಜ್ವರದಿಂದ ಬಳಲುತ್ತಿದ್ದವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಮಾಡ್ನೂರು ಗ್ರಾಮದ ಕಾವು ನಿವಾಸಿ ಧರ್ಮಲಿಂಗಮ್ ಮತ್ತು ತಮಿಳ್ ಸೆಲ್ವಿ ದಂಪತಿಯ ಪುತ್ರಿ, 9ನೇ ತರಗತಿಯ ಅನುಶ್ರೀ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಪುತ್ತೂರಿನ ಆಸ್ಪತ್ರೆಯೊಂದರಿಂದ ಔಷಧಿ ಪಡೆದಿದ್ದರು. ಆರೋಗ್ಯ ತೀರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ        

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಕ್ಕಿ  ಸಂಭವಿಸಿದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ಸೇತುವೆ ಬಳಿ ಸಂಭವಿಸಿದೆ. ಬಿ.ಸಿ.ರೋಡ್ ನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ನಡೆದಿದ್ದು, ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀರಾನೆ ಬಾಯಿಯಿಂದ ಬದುಕಿಬಂದ ಪುಟ್ಟ ಪೋರ.. !

(ನ್ಯೂಸ್ ಕಡಬ) newskadaba.com ಉಗಾಂಡ, ಡಿ. 17. ಹಸಿದ ನೀರಾನೆಯೊಂದು 2 ವರ್ಷದ ಬಾಲಕನ್ನು ನುಂಗುತ್ತಿದ್ದಾಗ ದಾರಿಹೋಕನ ಕಲ್ಲೇಟಿಗೆ ಹೆದರಿ ಮಗುವನ್ನು ಹೊರ ಉಗುಳಿದ ಘಟನೆ ಆಫ್ರೀಕಾದ ಉಗಾಂಡದಲ್ಲಿ ನಡೆದಿದೆ.   ಕಾಡಿನಿಂದ ಬಂದ ನೀರಾನೆಯೊಂದು ರಸ್ತೆಯಲ್ಲಿ ಆಡುತ್ತಿದ್ದ 2 ವರ್ಷದ ಮಗುವನ್ನು ಬಾಯಿಯಲ್ಲಿ ಕಚ್ಚಿ ಇನ್ನೇನು ನುಂಗಬೇಕು ಅನ್ನುವ ಹೊತ್ತಿನಲ್ಲಿ ಅದೇ ರಸ್ತೆಯಲ್ಲಿ ಬಂದ ವ್ಯಕ್ತಿಯೊಬ್ಬರು ಕಲ್ಲು ಹೊಡೆದ ಪರಿಣಾಮ ಮಗುವನ್ನು ನೀರಾನೆ ಹೊರಕ್ಕೆ ಉಗುಳಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಗು ಸದ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ

ನೀರಾನೆ ಬಾಯಿಯಿಂದ ಬದುಕಿಬಂದ ಪುಟ್ಟ ಪೋರ.. ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು  

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 17. ಇತ್ತೀಚೆಗೆ ಭರ್ಜರಿ ಮಳೆಯಾದ ಹಿನ್ನೆಲೆ ಜಗಳೂರು ತಾಲೂಕಿನ ಹಿರೇಅರಕೆರೆ ಗ್ರಾಮ ಕೆರೆ ಭರ್ತಿಯಾಗಿದ್ದು, 125 ಎಕರೆ ಪ್ರದೇಶದ ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಡಲಾಗಿತ್ತು. ಆದ ಇಂತಹ ಮೀನುಗಳು ಸಾವನ್ನಪ್ಪಿ ತೇಲಾಡುತ್ತಿವೆ. ಸತ್ತ ಮೀನುಗಳನ್ನ ತಿಂದ ನಾಯಿಗಳು, ಕೆರೆ ನೀರು ಕುಡಿದ ಜಾನುವಾರುಗಳು ಕೂಡ ಸಾವನ್ನಪ್ಪುತ್ತಿವೆ ಎನ್ನಲಾಗಿದೆ. ಬಸವರಾಜ್ ಎಂಬವರು ಸಣ್ಣ ನೀರಾವರಿ ಇಲಾಖೆಯಿಂದ ಗುತ್ತಿಗೆ ಪಡೆದು ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಟ್ಟಿದ್ದರು. ಇದಕ್ಕಾಗಿ

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ???

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ಬಂದ್ ಕರೆ ನಡುವೆಯೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬೆಳಗ್ಗೆ ಕಾಲೇಜಿನಲ್ಲಿ ತರಗತಿಗಳು ಆರಂಭಗೊಂಡಿವೆ. ಹೀಗಾಗಿ ಎನ್​ಎಸ್​ಯುಐ ಕಾಲೇಜು ಒಳಗೆ ಪ್ರವೇಶಿಸಲು ಮುಂದಾಗಿದೆ. ಇವತ್ತು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಕಾಲೇಜು ಆರಂಭಗೊಳ್ಳಲು ಬಿಡಲ್ಲ. ಬಂದ್ ಗೆ ಸಹಕರಿಸಲು ಪ್ರಾಂಶುಪಾಲಾರ ಬಳಿ ಮನವಿ ಮಾಡಿಕೊಂಡಿದ್ದೇವೆ ಎಂದು NSUI ಹೇಳಿಕೊಂಡಿದೆ. ವಿದ್ಯಾರ್ಥಿಗಳ ಸಮಸ್ಯೆ ಏನು? – ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ಫಲಿತಾಂಶ ವಿಳಂಬ – ರಾಷ್ಟ್ರೀಯ

ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ??? Read More »

ಕರ್ನಾಟಕ

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದ್ದು, ಮೃತ ಯುವತಿಯನ್ನು ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಕಾಲೇಜಿಗೆ ಹೋಗಿದ್ದ ಯುವತಿ ಸಂಜೆಯಾದ್ರು ಮನೆಗೆ ಬಂದಿರಲಿಲ್ಲ, ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಇದೀಗ ಸೃಷ್ಟಿ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                       

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು ಎನ್ನಲಾಗಿದೆ. ಸುರೇಂದ್ರ ಕುಮಾರ್ ಹಾಗೂ ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಅನ್ನು ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                        Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 17. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಯಜಮಾನ ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ (45) ಹಾಗೂ ಇಬ್ಬರು ಮಕ್ಕಳು, ಪದ್ಮಾರವರ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಭೀಕರ ಅಗ್ನಿ ಅವಘಢ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                        

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 16. ಚಿಕ್ಕಮಕ್ಕಳಿಂದ 18ನೇ ವಯೋಮಾನದವರೆಗಿನ ಮಕ್ಕಳನ್ನು ಕಾಡುವ ದಡಾರ –ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಸಕಾಲದಲ್ಲಿ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು. ಅವರು ದಡಾರ-ರುಬೆಲ್ಲಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಲಸಿಕಾ ಅಭಿಯಾನ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಸಿಕೆಯನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿಗಳಲ್ಲಿ, ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಸಾರ್ವಜನಿಕರು

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                         Read More »

ಕರ್ನಾಟಕ
Scroll to Top