News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.21: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,ಜ.20 : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,ಜ.20 : ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಹತೆಗಳು: ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ MBA/PGDBA/PGDBM/MMS/CA ಪೂರ್ಣಗೊಳಿಸಿರಬೇಕು.

ಇಂಡಿಯಾ ಎಕ್ಸಿಮ್ ಬ್ಯಾಂಕ್ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂತ್ರಾಲಯ ಯಾತ್ರೆ ವೇಳೆ ಮಹಾ ದುರಂತ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ಅಪಘಾತ ಓರ್ವ ಸಾವು

(ನ್ಯೂಸ್‌ ಕಡಬ) newskadaba.com,ಜ.20 : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

ಮಂತ್ರಾಲಯ ಯಾತ್ರೆ ವೇಳೆ ಮಹಾ ದುರಂತ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ಅಪಘಾತ ಓರ್ವ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ 106 ಕಿಲೋ ಗಾಂಜಾ ವಶ – 2ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಜ.20 : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 106 ಕಿಲೋ 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನ ಚಾಲಕ ರಫೀಕ್ ಪಿ. (37), ಹಾಗೂ ಗೂಡ್ಸ್ ವಾಹನದ ಚಾಲಕ ಅಬ್ದುಲ್ ಸಾದಿಕ್ (37), ಇಬ್ಬರೂ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾಗಿದ್ದು, ವಾಹನಗಳ ಪರಿಶೀಲನೆಯ ವೇಳೆ ಒಟ್ಟು 73 ಕಟ್ಟುಗಳಲ್ಲಿ 106.60 ಕಿಲೋ ಗಾಂಜಾ ಪತ್ತೆಯಾಗಿದೆ. ಗಾಂಜಾದ ಅಂದಾಜು ಮೌಲ್ಯ ರೂ.53.03 ಲಕ್ಷ ಎಂದು

ಪುತ್ತೂರಿನಲ್ಲಿ 106 ಕಿಲೋ ಗಾಂಜಾ ವಶ – 2ಮಂದಿ ಆರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲೆಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ. ಈ ಕುರಿತು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು, 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶನ ನೀಡಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ತಲಾ ಒಂದು ಜತೆ

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’ ವಿತರಿಸಲು ರಾಜ್ಯ ಸರ್ಕಾರದ ಚಿಂತನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು

(ನ್ಯೂಸ್‌ ಕಡಬ) newskadaba.com,ಜ.20 ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಸೋಮವಾರ, ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯಕ್ ಪೈಂಟಿಮುಗೇರು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ತೆಂಗಿನ ಮರದ ಮೇಲೆ ಬೆಳೆದಿದ್ದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯೊಂದಿಗೆ ಬಿದ್ದಿದ್ದಾರೆ. ಕೆಳಗೆ ಬಿದ್ದಾಗ ನಾರಾಯಣ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿವೆ. ಒಂದು ಕೆಜಿ ಬೆಳ್ಳಿಗೆ 3,15,000 ರೂ. ಮಾರುಕಟ್ಟೆ ದರವಿದೆ. ಅದೇ ರೀತಿ ಹಳದಿ ಲೋಹ ಚಿನ್ನದ ದರವೂ ನಿರಂತರ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನ ಇಂದು ಪ್ರತಿ ಗ್ರಾಂಗೆ 104 ರೂ. ಹೆಚ್ಚಳವಾಗಿದೆ.ಒಂದು ಗ್ರಾಂ ಚಿನ್ನದ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್​ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ

ಸಾರಿಗೆ ಇಲಾಖೆಯು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು.

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ. ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯರೊಂದಿಗೆ ಅಸಭ್ಯವಾಗಿ

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ; ಡಿಜಿಪಿ ರಾಮಚಂದ್ರರಾವ್ ಅಮಾನತು. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top