News Kadaba

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.15:ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ […]

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ Read More »

ಕರಾವಳಿ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು

(ನ್ಯೂಸ್ ಕಡಬ) newskadaba, ತಮಿಳುನಾಡು ಜೂ.15: ತಮಿಳುನಾಡಿನಲ್ಲಿ ಕೊರೋನಾ ಕೇಸುಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 21ರವರೆಗೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ, ಇನ್ನು ಒಂದು ವಾರಗಳ ಕಾಲ ಲಾಕ್​ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನೂ ಮಾಡಲಾಗಿದೆ. ಅದರಂತೆ, ತಿಂಗಳುಗಳ ಬಳಿಕ ತಮಿಳುನಾಡಿನಲ್ಲಿ ಬಾರ್, ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ಮದ್ಯಪ್ರಿಯರು ಬಹಳ ಖುಷಿಯಾಗಿದ್ದು, ಮಧುರೈನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಬಾಟಲಿಗೆ ಆರತಿ ಬೆಳಗಿ, ತನ್ನ ಸಂತೋಷವನ್ನು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.     ಮಧುರೈನ ರಸ್ತೆಬದಿಯ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಮಂಗಳವಾರ 5041 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 1,32,600 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಪಾಸಿಟಿವಿಟಿ ದರ ಶೇ. 3.80ಗೆ ಕುಸಿದಿದೆ. ಬೆಂಗಳೂರಿನಲ್ಲಿ ಹೊಸ ಕೇಸ್‌ ಸಂಖ್ಯೆ ಸಾವಿರಕ್ಕಿಂತ ಕೆಳಕ್ಕಿಳಿದಿದ್ದು ಮಂಗಳವಾರ 985 ಪ್ರಕರಣ ಬೆಳಕಿಗೆ ಬಂದಿದೆ. ಹಾಸನದಲ್ಲಿ 522, ಮೈಸೂರಿನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ತುಮಕೂರಿನಲ್ಲಿ 329 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಹೊಸ ಕೊರೊನಾ ಕೇಸ್‌ 5 ಸಾವಿರಕ್ಕೆ ಇಳಿಕೆ Read More »

ಕರಾವಳಿ

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು

(ನ್ಯೂಸ್ ಕಡಬ) newskadaba,ಕುಕ್ಕೆ ಸುಬ್ರಹ್ಮಣ್ಯ ಜೂ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿದಿರುವ ನಡುವೆಯೇ, ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳನ್ನು‌ ಸೀಲ್ ಡೌನ್ ಮಾಡಲಾಗಿದೆ. ನಾಡಿನ ನಂಬರ್ ವನ್ ಮುಜರಾಯಿ ದೇಗುಲವಾದ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿ ಇರುವ ಸುಬ್ರಹ್ಮಣ್ಯ ಪಂಚಾಯಿತಿ ಕೂಡಾ ಸೀಲ್ ಡೌನ್ ಆಗಿದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಿಂದ ಭಕ್ತರು‌ ಸುಬ್ರಹ್ಮಣ್ಯಕ್ಕೆ ಬರುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಏಪ್ರಿಲ್ 28ರಿಂದ ಕುಕ್ಕೆ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೀಗ ಇಡೀ ಪ್ರದೇಶ ಸೀಲ್ ಡೌನ್ ಗೆ ಒಳಗಾಗಿದೆ.

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು Read More »

ಕರ್ನಾಟಕ

ಮರವೂರು ಸೇತುವೆ ದುರಸ್ತಿ ಬಗ್ಗೆ ಶೀಘ್ರವೇ ತಿರ್ಮಾನ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.15:ಮಂಗಳವಾರ ಕುಸಿತಕ್ಕೆ ಒಳಗಾದ ಮರವೂರು ಸೇತುವೆಯ ಪುನರ್‌ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿ ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ಅಗತ್ಯ ಅನುದಾನವನ್ನು ಸಿಎಂ ಜತೆ ಮಾತನಾಡಿ ಬಿಡುಗಡೆ ಮಾಡಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮರವೂರು ಸೇತುವೆಯ ಬಿರುಕನ್ನು ಪರಿಶೀಲಿಸಿದ ಅವರು ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ

ಮರವೂರು ಸೇತುವೆ ದುರಸ್ತಿ ಬಗ್ಗೆ ಶೀಘ್ರವೇ ತಿರ್ಮಾನ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ”ಕೋವಿಡ್‌ ಕಾರಣದಿಂದ ಈ ವರ್ಷದ ಸರಕಾರಿ ದಿನಾಚರಣೆ ಕೇವಲ 100 ಜನರ ಉಪಸ್ಥಿತಿಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ Read More »

ಕರ್ನಾಟಕ

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09: ಕೊರೋನಾ ನಿಯಂತ್ರಣಕ್ಕೆ ಜೂ 14ರವರೆಗೆ ಲಾಕ್​ಡೌನ್​ ವಿಸ್ತರಿಸಿ ಈಗಾಗಲೇ ಸಿಎಂ ಆದೇಶ ನೀಡಿದ್ದರು. ಜೂ. 14 ಬಳಿಕ ರಾಜ್ಯದಲ್ಲಿ ನಿರ್ಬಂಧವನ್ನು ಸಡಿಲಗೊಳಿಸಿ, ಹಂತ ಹಂತವಾಗಿ ಅನ್​ಲಾಕ್​ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ.   ಈಗಾಗಲೇ ಮೂರು ಬಾರಿ ಲಾಕ್​ಡೌನ್​ ವಿಸ್ತರಿಸಿರುವ ಮುಖ್ಯಮಂತ್ರಿಗಳು ಜೂ 14 ರಬಳಿಕ ಮತ್ತೊಮ್ಮೆ ಲಾಕ್​ಡೌನ್​ ಹೇರುವ ಸಂಭಾವ್ಯ ಕಡಿಮೆ ಇದೆ. ಇದೇ ಹಿನ್ನಲೆ ಯಾವ ರೀತಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಸೋಂಕು ನಿಯಂತ್ರಿಸಬೇಕು ಎಂಬ ಕುರಿತು

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ Read More »

ಕರ್ನಾಟಕ

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1 

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ತೆರಿಗೆ ಕಟ್ಟಲು ಆಗ್ತಿಲ್ಲ ➤ ಅಳಲು ತೋಡಿಕೊಂಡ ಬಾಲಿವುಡ್ ನಟಿ ಕಂಗನಾ

(ನ್ಯೂಸ್ ಕಡಬ) newskadaba,ಮುಂಬೈ ಜೂ.09: ಬಾಲಿವುಡ್ ನಟಿ ಕಂಗನಾ ರಣಾವತ್‍ರವರು ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.   ಕೊರೊನಾ ವೈರಸ್ ತಡೆಗಟ್ಟಲು ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‍ಡೌನ್ ಕೇವಲ ಜನ ಸಾಮಾನ್ಯರ ಮೇಲಷ್ಟೇ ಅಲ್ಲದೆ ಸೆಲೆಬ್ರೆಟಿಗಳ ಜೀವನದ ಮೇಲೂ ಹೊಡೆತ ಬಿದ್ದಿದೆ. ಅನೇಕ ಕಲಾವಿರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ ಕಂಗನಾ.ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ

ತೆರಿಗೆ ಕಟ್ಟಲು ಆಗ್ತಿಲ್ಲ ➤ ಅಳಲು ತೋಡಿಕೊಂಡ ಬಾಲಿವುಡ್ ನಟಿ ಕಂಗನಾ Read More »

ರಾಷ್ಟ್ರೀಯ ನ್ಯೂಸ್

ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ ಸೋಂಕು ಹೆಚ್ಚಾಗುತ್ತಿದೆ. ಬ್ಲಾಕ್ ಫಂಗಸ್ ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 2,490 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ರಾಜ್ಯಕ್ಕೆ ಕೇಂದ್ರದಿಂದ ಪೂರೈಕೆ ಮಾಡಲಾಗಿದೆ.   ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ಮತ್ತೆ 2,490 ವಯಲ್ಸ್ ಆಂಫೊಟೆರಿಸಿನ್- ಬಿ ಔಷಧಿ ಪೂರೈಕೆ ಮಾಡಲಾಗಿದೆ ಕೇಂದ್ರ ಸಚಿವ ಡಿವಿಎಸ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್ Read More »

ಕರಾವಳಿ
Scroll to Top