News Kadaba

ಬೆಂಗಳೂರು: ಎಂಜಿ ರೋಡ್ ರಷ್‌ನಲ್ಲಿ ಮಡದಿ ಕಣ್ಮರೆ; ಆಘಾತ ತಾಳಲಾರದೆ ಗಂಡನಿಗೆ ಪಿಟ್ಸ್!

(ನ್ಯೂಸ್‌ ಕಡಬ) newskadaba.com, ಜ.01 ಬೆಂಗಳೂರು : ಹೊಸ ವರ್ಷದ ಮುನ್ನಾದಿನದ ಸಂಭ್ರಮಕ್ಕಾಗಿ ಬೆಂಗಳೂರಿನ ಎಂ.ಜಿ. ರಸ್ತೆಗೆ ದಂಪತಿಗಳು ಆಗಮಿಸಿದ್ದರು. ಆದರೆ, ಮಿತಿಮೀರಿದ ಜನದಟ್ಟಣೆಯ ನಡುವೆ ಪತ್ನಿ ಪತಿಯಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾರೆ. ಎಷ್ಟು ಹುಡುಕಿದರೂ ಪತ್ನಿ ಸಿಗದಿದ್ದಾಗ ಪತಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ… ತನ್ನ ಕಣ್ಣೆದುರೇ ಪತ್ನಿ ಕಣ್ಮರೆಯಾದ ಆಘಾತ ಮತ್ತು ಮಾನಸಿಕ ಒತ್ತಡದಿಂದಾಗಿ ಪತಿಗೆ ಸ್ಥಳದಲ್ಲೇ ಪಿಟ್ಸ್ (ಫಿಟ್ಸ್) ಕಾಣಿಸಿಕೊಂಡಿದೆ. ರಸ್ತೆಯಲ್ಲೇ ಅಸ್ವಸ್ಥಗೊಂಡು ಬಿದ್ದ ಪತಿಯನ್ನು ಕಂಡು ಸಾರ್ವಜನಿಕರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿದ್ದವರ ನೆರವಿನೊಂದಿಗೆ […]

ಬೆಂಗಳೂರು: ಎಂಜಿ ರೋಡ್ ರಷ್‌ನಲ್ಲಿ ಮಡದಿ ಕಣ್ಮರೆ; ಆಘಾತ ತಾಳಲಾರದೆ ಗಂಡನಿಗೆ ಪಿಟ್ಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ

(ನ್ಯೂಸ್‌ ಕಡಬ) newskadaba.com, ಜ.01  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com, ಜ.01 : ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ನವೀಕರಿಸಲಾಗಿದೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಈಗ 1795 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿಯೂ 111

ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ – ಅಪಾರವಾದ ನಷ್ಟ

(ನ್ಯೂಸ್‌ ಕಡಬ) newskadaba.com, ಜ.01 ವಿಟ್ಲ: ನಗರದ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ತಡ ರಾತ್ರಿ ಆಕಸ್ಮಿಕವಾಗಿ ಕಾಣಿಸಿಕೊಂಡ ಭೀಕರ ಬೆಂಕಿಯು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ್ದು, 5-6 ಮಳಿಗೆಗಳಿಗೆ ಹಬ್ಬಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿ ಕೊಂಡಿದೆ. ಅಂಗಡಿಯೊಳಗಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿಂದಾಗಿ ಜ್ವಾಲೆಯ ತೀವ್ರತೆ ಏಕಾಏಕಿ ಹೆಚ್ಚಾಗಿದೆ. ಸ್ಥಳೀಯರು

ವಿಟ್ಲ : ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ – ಅಪಾರವಾದ ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.01 :  ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಂಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಕ್ಕು ಆಮದಿನ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಭಾರತ

(ನ್ಯೂಸ್‌ ಕಡಬ) newskadaba.com,ಡಿ.31: ಅಗ್ಗದ ಆಮದುಗಳನ್ನು ತಡೆಯಲು ಭಾರತ ಉಕ್ಕಿನ ಉತ್ಪನ್ನಗಳ ಮೇಲೆ 3 ವರ್ಷಗಳ ಕಾಲ ಸುಂಕ ವಿಧಿಸಿದೆ.ಸ್ಥಳೀಯವಾಗಿ ಸುರಕ್ಷತಾ ಸುಂಕ ಎಂದು ಕರೆಯಲ್ಪಡುವ ಈ ತೆರಿಗೆಯನ್ನು ಮೊದಲ ವರ್ಷದಲ್ಲಿ 12% ಮತ್ತು ನಂತರ ಎರಡನೇ ವರ್ಷದಲ್ಲಿ 11.5% ಮತ್ತು ನಂತರ ಮೂರನೇ ವರ್ಷದಲ್ಲಿ 11% ವಿಧಿಸಲಾಗುತ್ತದೆ. ಅಗ್ಗದ ಆಮದುಗಳನ್ನು ತಡೆಯಲು ಭಾರತ ಉಕ್ಕಿನ ಉತ್ಪನ್ನಗಳ ಮೇಲೆ 3 ವರ್ಷಗಳ ಕಾಲ ಸುಂಕ ವಿಧಿಸುತ್ತದೆ. ಸರ್ಕಾರ ಏಪ್ರಿಲ್‌ನಲ್ಲಿ ತಾತ್ಕಾಲಿಕವಾಗಿ 12% 200 ದಿನಗಳ ಸುಂಕವನ್ನು ವಿಧಿಸಿದೆ.

ಉಕ್ಕು ಆಮದಿನ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಭಾರತ Read More »

ಕರಾವಳಿ

ಮಂಗಳೂರು : ಹೊಸ ವರ್ಷಾಚರಣೆ – ಮಾರ್ಗಸೂಚಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ

(ನ್ಯೂಸ್‌ ಕಡಬ) newskadaba.com,ಡಿ.31: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಈ ರೀತಿಯಾಗಿದೆ. ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ

ಮಂಗಳೂರು : ಹೊಸ ವರ್ಷಾಚರಣೆ – ಮಾರ್ಗಸೂಚಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಮೋಲಿಯ ಜಲವಿದ್ಯುತ್ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ

(ನ್ಯೂಸ್‌ ಕಡಬ) newskadaba.com,ಡಿ.31: ಎರಡು ಲೋಕೋ ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 65 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. 4.5 ಕಿಮೀ ಉದ್ದದ ಸುರಂಗದೊಳಗೆ ರಾತ್ರಿ 8.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತಿದ್ದ ಒಂದು ಲೋಕೋ ರೈಲು, ಶಿಫ್ಟ್ ಬದಲಾವಣೆಯ ಸಮಯದಲ್ಲಿ ಅದೇ

ಚಮೋಲಿಯ ಜಲವಿದ್ಯುತ್ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ Read More »

ಬ್ರೇಕಿಂಗ್ ನ್ಯೂಸ್

ಗಡಿಯಲ್ಲಿ ನುಸುಳಲು ಸಜ್ಜಾಗಿರುವ 100ಕ್ಕೂ ಹೆಚ್ಚು ಉಗ್ರರು, ಭಾರೀ ಭದ್ರತೆ

(ನ್ಯೂಸ್‌ ಕಡಬ) newskadaba.com,ಡಿ.31: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ದೇಶದ ಗಡಿ ನುಸುಳಲು 100 ಕ್ಕೂ ಹೆಚ್ಚು ಉಗ್ರರು ಗಡಿ ನುಸುಳಲು ಸಜ್ಜಾಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಭಾರಿ ಭದ್ರತೆ ಮಾಡಿಕೊಳ್ಳಲಾಗಿದೆ. ಜಮು ಮತ್ತು ಕಾಶ್ಮೀರದ 740 ಕಿಲೋಮೀಟರ್‌ ಉದ್ದದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಎಚ್ಚರಿಕೆ ವಹಿಸಲಾಗಿದೆ. ಗಡಿಯುದ್ದಕ್ಕೂ 60 ಲಾಂಚ್‌ಪ್ಯಾಡ್‌ಗಳಿಂದ ಕಾರ್ಯನಿರ್ವಹಿಸುತ್ತಿರುವ 100 ಕ್ಕೂ ಹೆಚ್ಚು ಭಯೋತ್ಪಾದಕರು ಹೊಸ ವರ್ಷದ ದಿನದಂದು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ

ಗಡಿಯಲ್ಲಿ ನುಸುಳಲು ಸಜ್ಜಾಗಿರುವ 100ಕ್ಕೂ ಹೆಚ್ಚು ಉಗ್ರರು, ಭಾರೀ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆ; ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

(ನ್ಯೂಸ್‌ ಕಡಬ) newskadaba.com,ಡಿ.31 ನವದೆಹಲಿ: ರಾಜಸ್ಥಾನದ ಕೋಟಾ ಹಾಗೂ ಮಧ್ಯಪ್ರದೇಶದ ಉಜ್ಜೈನ್‌ ಜಿಲ್ಲೆಯ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಚಲಿಸಿದ ವಿಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆಯಿದು. ಗಾಳಿಯ ವೇಗದಲ್ಲಿ ಚಲಿಸುವ ರೈಲಿನಲ್ಲಿ ಕುಳಿತು, ಕೈಯಲ್ಲಿರುವ ನೀರಿನ ಗ್ಲಾಸ್ ಅಲುಗಾಡದಂತೆ ರೈಲು ಚಲಿಸಿದೆ.ವಂದೇ ಭಾರತ್ ಸ್ಲೀಪರ್ ರೈಲಿನ ‘ವಾಟರ್ ಟೆಸ್ಟ್’ ಯಶಸ್ವಿಯಾಗಿದ್ದು, ಇಡೀ ಜಗತ್ತು

ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆ; ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top