News Kadaba

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.18: ಮಳೆಗಾಲ ಆರಂಭವಾಗಿದ್ದು ಕರಾವಳಿಯಲ್ಲಿ ಕೊರೋನಾ ವೈರಸ್ ಜೊತೆಗೆ ಮಳೆರಾಯಣ ಅಬ್ಬರವು ಹೆಚ್ಚುತ್ತಿದೆ. ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ, ಈಗಾಗಳೇ ಅಲ್ಲಲ್ಲ ಹಾನಿಗಳೂ ಆಗಿವೆ, ಕಡಬ ವಲಯದಲ್ಲಿ ಕೆಲವೆಡೆ ಗುಡ್ಡಗಳು ಕುಸಿದಿದೆ. ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ, ಕುಮಾರಧಾರ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕರಾವಳಿಯಲ್ಲಿ ಕಳೆಂದೊಂದು ವಾರದಿಂದ ವರುಣ ಅಬ್ಬರ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಾದ್ಯಂತ ನಿನ್ನೆಯಿಂದ ಮಳೆ ಹೆಚ್ಚಳವಾಗಿದ್ದು, ಪರಿಣಾಮ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.  ನಿನ್ನೆಯಿಂದ ನೀರಿನ […]

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ Read More »

ಕರಾವಳಿ, ಕರ್ನಾಟಕ

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..!

(ನ್ಯೂಸ್ ಕಡಬ) newskadaba.com ಉಚ್ಚಿಲ,ಜು.18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಉಚ್ಚಿಲ ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಚಲಿಸುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ವೇಗಕ್ಕೆ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..! Read More »

ಕರಾವಳಿ, ಕರ್ನಾಟಕ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ ,ಜು.18: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.ಗಂಗೊಳ್ಳಿ ಗ್ರಾಮದ ಮೇಲ್‍ಗಂಗೊಳ್ಳಿ ರಾಮ ಪೈ ಮಠದ ಬಳಿಯ ನಿವಾಸಿ ಮುಕುಂದ ನಾಯಕ್ ಎಂಬುವರ ವಾಸ್ತವ್ಯದ ಮನೆ ಭಾರೀ ಮಳೆಗೆ ಗುರುವಾರ ರಾತ್ರಿ ಸಂಪೂರ್ಣವಾಗಿ ನೆಲಕಚ್ಚಿದೆ  .   ಬೆಲೆ ಬಾಳುವ ವಸ್ತುಗಳು, ಪೀಠೋಪಕರಣ ಸಹಿತ ಇನ್ನಿತರ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿ ಹಾನಿಗೊಳಗಾಗಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ Read More »

ಕರಾವಳಿ, ಕರ್ನಾಟಕ

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ,ಜು.18: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.   ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಕರಾವಳಿ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.     ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು Read More »

ಕರಾವಳಿ, ಕರ್ನಾಟಕ

ಪೊಲೀಸ್ ಸಿಬ್ಬಂದಿಗಳ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ➤ ಕಾನ್‍ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಡ್ಯ,ಜು.16:  ಪೊಲೀಸ್ ಸಿಬ್ಬಂದಿ ಸಂಚರಿಸುತ್ತಿದ್ದ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಎಎಸ್ಐ ಗಂಭೀರ ಗಾಯಗೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕು ತೊರೆಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಪೇದೆ ಅರುಣ್(26) ಮೃತರು. ಕೆಸ್ತೂರಿನ ಎಎಸ್ಐ ಬಾಲಯ್ಯ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೊಪ್ಪನಹಳ್ಳಿಯ ವ್ಯಕ್ತಿಗೆ ಅರುಣ್ ಗನ್‌ಮ್ಯಾನ್ ಆಗಿದ್ದರು. ಕಾರ್ಯನಿಮಿತ್ತ ತೊರೆಶೆಟ್ಟಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಪೇದೆ ಸವಾರಿ ಮಾಡುತ್ತಿದ್ದ ಬೈಕ್​ ಮತ್ತು ಎಎಸ್​ಐ

ಪೊಲೀಸ್ ಸಿಬ್ಬಂದಿಗಳ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ➤ ಕಾನ್‍ಸ್ಟೇಬಲ್ ಮೃತ್ಯು Read More »

ಕರ್ನಾಟಕ

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.16: ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.   ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ Read More »

ಕರಾವಳಿ, ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.16: ನೀರಿನ ಹೊಂಡಕ್ಕೆ ಬಿದ್ದು ಜೀವಣ್ಮರಣ ಸ್ಥಿತಿಯಲ್ಲಿದ್ದ ಕರುವೊಂದನ್ನು ದಾರಿಹೋಕರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದಿತ್ತು, ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ನಿಖಿಲ್ ಪೂಜಾರಿ ಈ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನ ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ.ಇವರಿಗೆ ಸ್ಥಳೀಯ ಯುವಕರು , ಅಗ್ನಿ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.   ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು .

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಾಣಿಯೂರು ,ಜು.16: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತ ತೆರಳಿದ್ದ ಕಾಣಿಯೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಯುವಕ ಮಂಗಳೂರಿನ ಆಹಾರ ತಯಾರಿಕೆಯ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆತನಿಗೆ ಆರೋಗ್ಯ ಸಮಸ್ಯೆ ಬಂದಿದ್ದರಿಂದ ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ರಕ್ತ ಪರೀಕ್ಷಾ ಲ್ಯಾಬ್ ತೆರಳಿದ್ದಾರೆ.ಬಳಿಕ ಯುವಕ ಕಾಣಿಯೂರು ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ಹಾಗೂ ಬ್ಯಾಂಕ್ ಗಳಿಗೆ ತೆರಳಿರುವ ಬಗ್ಗೆ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ
Scroll to Top