News Kadaba

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್

(ನ್ಯೂಸ್‌ ಕಡಬ) newskadaba.com,  ಡಿ.15:  ವಿರಾಜಪೇಟೆ ಮೌಲ್ಯತಿರುವ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ

(ನ್ಯೂಸ್‌ ಕಡಬ) newskadaba.com,  ಡಿ.15:  ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಕೋರಮಂಗಲದ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಆಸ್ಟ್ರೋಫಿಸಿಕ್ಸ್‌ ಸಂಸ್ಥೆಯ (ಐಐಎ) 2ನೇ ಬ್ಲಾಕ್‌ ನಿವಾಸಿ ಕೆ.ಧನಂಜಯ (48) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ಸಂಬಂಧ ಹೈಕೊರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿದ್ದ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ Read More »

ಕರ್ನಾಟಕ

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ.

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಡಿ.15:  ಇಂದು, ಡಿಸೆಂಬರ್ 15, 2025 ರಂದು ಬೆಂಗಳೂರಿನಲ್ಲಿ ಚಿನ್ನದ ದರ ಹೆಚ್ಚಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,473 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹12,350 ಬೆಳ್ಳಿ ದರವೂ ₹201 ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ ಚಿನ್ನದ ದರಗಳಲ್ಲಿ ಏರಿಳಿತಗಳಿದ್ದು, ಹೂಡಿಕೆದಾರರು ಚಿನ್ನವನ್ನು ಮುಖ್ಯ ಹೂಡಿಕೆಯಾಗಿ ಪರಿಗಣಿಸುತ್ತಿದ್ದಾರೆ. ಇಂದಿನ ಚಿನ್ನದ ಬೆಲೆ (ಬೆಂಗಳೂರು): 24 ಕ್ಯಾರೆಟ್ (1 ಗ್ರಾಂ): ₹13,473 22 ಕ್ಯಾರೆಟ್ (1 ಗ್ರಾಂ): ₹12,350 ಇಂದಿನ

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

(ನ್ಯೂಸ್‌ ಕಡಬ) newskadaba.com,  ಡಿ.15: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ. ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!…

(ನ್ಯೂಸ್‌ ಕಡಬ) newskadaba.com,  ಡಿ.15 : ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!. ಆದರೆ, ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ಇಡೀ ಪೊಲೀಸ್‌ ಇಲಾಖೆ ಡ್ರಗ್ಸ್‌ ವಿರುದ್ಧ ಆಖಾಡಕ್ಕಿಳಿದು ನೇರ ಸಮರಕ್ಕೆ ಧುಮುಕಿದ್ದು, ಡ್ರಗ್ಸ್‌ ಪೆಡ್ಲರ್‌ಗಳಲ್ಲಿ ನಡುಕ ಹುಟ್ಟಿಸಿದೆ. ಈ ಕಾರಣದಿಂದ ದೊಡ್ಡಮಟ್ಟದ ಧನಾತ್ಮಕ ಬದಲಾವಣೆ ಜಿಲ್ಲೆಯಲ್ಲಿ ಕಂಡು ಬಂದಿದೆ.ಆದರೆ, ಕಳೆದೊಂದು ದಶಕದಿಂದ ವಿಸ್ತಾರವಾಗಿ ಚಾಚಿಕೊಂಡಿರುವ ಮಾದಕ ದ್ರವ್ಯದ

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’

(ನ್ಯೂಸ್‌ ಕಡಬ) newskadaba.com,  ಡಿ.15: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸುವ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆ ಮುಂದಿನಿಂದ ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂಬ ಹೆಸರಿನಲ್ಲಿ ಪರಿಚಿತವಾಗಲಿದೆ. ಹೊಸ ಮಸೂದೆಯಂತೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಕನಿಷ್ಠ ದಿನಗೂಲಿಯನ್ನು ರೂ. 240ಕ್ಕೆ

MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಡಿ.15 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ-ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು, ಸಜಿಪಮುನ್ನೂರು ಗ್ರಾಮದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27) ಆರೋಪಿಯಾಗಿರುತ್ತಾನೆ. ಇದೇ ಅಕ್ಟೋಬರ್ 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ  _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಲಾಲ್​ಬಾಗ್​ಗೆ ವಾಕಿಂಗ್​ ಬರುವವರ ಸಂಖ್ಯೆ ಶೇ.50

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top