News Kadaba

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು

(ನ್ಯೂಸ್‌ ಕಡಬ) newskadaba.com,  ಡಿ.13: ಕೇರಳ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ರಾಜಧಾನಿ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಸುಮಾರು 45 ವರ್ಷಗಳಿಂದ ಎಲ್‌ಡಿಎಫ್ (ಕಮ್ಯೂನಿಸ್ಟ್) ಹಿಡಿತದಲ್ಲಿದ್ದ ಕಾರ್ಪೋರೇಶನ್‌ನ್ನು ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ನಿರ್ಮಿಸಿದೆ. ತಿರುವನಂತಪುರಂ ಕಾರ್ಪೋರೇಶನ್‌ನ 101 ಸ್ಥಾನಗಳ ಪೈಕಿ 100 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಂದು ಸ್ಥಾನದಲ್ಲಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಮತದಾನ ಮುಂದೂಡಲಾಗಿತ್ತು. ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 50 ಸ್ಥಾನಗಳನ್ನು […]

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಡಿ.13: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್

(ನ್ಯೂಸ್‌ ಕಡಬ) newskadaba.com,  ಡಿ.13: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು.ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜ.6ರಂದು ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆಯಿದ್ದು ನನಗೆ ಶೇ.99ರಷ್ಟು ವಿಶ್ವಾಸ ಇದೆ ಎಂದು ಹೇಳಿದರು. ಡಿಕೆ ಶಿವಕುಮಾರ್‌

‘ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ’- ಇಕ್ಬಾಲ್ ಹುಸೇನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಡಿ.13 ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು

(ನ್ಯೂಸ್‌ ಕಡಬ) newskadaba.com,  ಡಿ.13: ಭಾರತದ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಶೇ 50ರಷ್ಟು ಸುಂಕವನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಸದನದಲ್ಲಿ ಮಂಡಿಸಿದ್ದಾರೆ. ರಾಷ್ಟ್ರೀಯ ತುರ್ತು ಸ್ಥಿತಿಯ ನೆಪದಲ್ಲಿ ಟ್ರಂಪ್ ಭಾರತದಿಂದ ಆಮದಾಗುವ ಸರಕು ಮತ್ತು ಸೇವೆಗಳ ಮೇಲೆ ಶೇ.50ರ ಸುಂಕ ವಿಧಿಸಿದ್ದರು.ಟ್ರಂಪ್ ಘೋಷಿಸಿದ ಈ ಕ್ರಮಗಳು ಕಾನೂನುಬಾಹಿರ ಮತ್ತು ಅಮೆರಿಕದ ಉದ್ಯೋಗಿಗಳು, ಗ್ರಾಹಕರು ಮತ್ತು ದ್ವಿಪಕ್ಷೀಯ ಸಂಬಂದಕ್ಕೆ ಮಾರಕ ಎಂದು ನಿರ್ಣಯ ಮಂಡಿಸಿದ ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.13 ನವದೆಹಲಿ: ಚಿನ್ನದ ದರದಲ್ಲಿ ಕೆಲ ದಿನಗಳಿಂದ ಏರಿಳಿತ ಕಂಡು ಬರುತ್ತಿದ್ದು, ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್‌ ಚಿನ್ನದ ದರದಲ್ಲಿ ಇಳಿಕೆ 25 ರೂ. ಕಂಡು ಬಂದಿದ್ದು, 12,275 ರೂ. ಇದೆ. 24 ಕ್ಯಾರೆಟ್‌ ಚಿನ್ನದ ದರದಲ್ಲಿ 27 ರೂ. ಇಳಿಕೆ ಕಂಡು ಬಂದಿದ್ದು, 13,391 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 98,200 ರೂ. ಇದ್ದರೆ, 10 ಗ್ರಾಂಗೆ ನೀವು 1,22,750 ರೂ. ಇದೆ. ಹಾಗೂ

ಕೊಂಚ ಇಳಿಕೆ ಕಂಡ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.13: ಅಂಚೆ ಕಚೇರಿಗಳನ್ನು ಉಳಿಸಲು ಹಾಗೂ ಮತ್ತೆ ಹೆಚ್ಚು ಹೆಚ್ಚು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ  ಒಂದನ್ನು  ಕೈಗೊಂಡಿದೆ. Gen Z (ಜೆನ್-ಜಿ) 1997 ರಿಂದ 2012 ರ ನಡುವೆ ಜನಿಸಿದ ತಲೆಮಾರಿಗಾಗಿ ಹೊಸ ಯೋಜನೆಯೊಂದನ್ನು ಅಂಚೆ ಕಚೇರಿ ಮೂಲಕ ಪರಿಚಯಿಸಿದೆ. ಡಿಸೆಂಬರ್ 9 ರಂದು ಇಂಡಿಯಾ ಪೋಸ್ಟ್ ಎರಡು ಆಧುನಿಕ ಮತ್ತು ವಿದ್ಯಾರ್ಥಿ ಕೇಂದ್ರಿತ Gen-Z ಅಂಚೆ ಕಚೇರಿಗಳನ್ನು ಸ್ಥಾಪಿಸಿದೆ. ಒಂದನ್ನು ಕೇರಳದ ಕೊಟ್ಟಾಯಂನ ಸಿಎಂಸಿ ಕಾಲೇಜು, ಇನ್ನೊಂದು ವಿಶಾಖಪಟ್ಟಣಂನ

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13 ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

(ನ್ಯೂಸ್‌ ಕಡಬ) newskadaba.com,  ಡಿ.13: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ(PMBJP) ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ.

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

(ನ್ಯೂಸ್‌ ಕಡಬ) newskadaba.com,  ಡಿ.13 ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 5,436 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಸಂತೋಷ್ ಲಾಡ್ ಎಂಎಲ್‌ಸಿ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವಾರು ದೂರುಗಳು

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top