ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ➤ ಅವಕಾಶಗಳು ಪೂರಕ ಬದುಕಿಗೆ ಮೆಟ್ಟಿಲು – ಸರ್ವೋತ್ತಮ ಗೌಡ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.21.ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಇಚ್ಲಂಪಾಡಿ ನೇರ್ಲ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಬುಧವಾರ ನಡೆಯಿತು. ನೆಲ್ಯಾಡಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ರಂಗದಲ್ಲೂ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಕಲೆಯ ಬಗ್ಗೆ ಆಸಕ್ತಿ ಹೆಚ್ಚಾಗುವುದರೊಂದಿಗೆ, ಮುಂದಿನ ದಿನಗಳಲ್ಲಿ ಅದು ಪ್ರಯೋಜನಕಾರಿಯಾಗಲಿದೆ ಎಂದ ಅವರು ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳು ಮುಂದಿನ ಪೂರಕ ಬದುಕಿಗೆ ಮೆಟ್ಟಿಲು ಎಂದರು. ಕೌಕ್ರಾಡಿ ಗ್ರಾ.ಪಂ. ಉಪಾಧ್ಯಕ್ಷೆ, ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ವಾಣಿ […]




